Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:10 - ಪರಿಶುದ್ದ ಬೈಬಲ್‌

10 ಹೀಗಿರಲು, ಕ್ರಿಸ್ತನಲ್ಲಿ ನಿನ್ನ ಸಹೋದರನಾಗಿರುವವನನ್ನು ನೀನು ಟೀಕಿಸುವುದೇಕೆ? ನೀನು ನಿನ್ನ ಸಹೋದರಿನಿಗಿಂತಲೂ ಉತ್ತಮನೆಂದು ಯೋಚಿಸುವುದೇಕೆ? ನಾವೆಲ್ಲರೂ ದೇವರ ಮುಂದೆ ನಿಂತುಕೊಳ್ಳುವೆವು, ಆಗ ಆತನು ನಮ್ಮೆಲ್ಲರಿಗೂ ತೀರ್ಪು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗಿರುವಲ್ಲಿ ಸಸ್ಯಾಹಾರಿಯೇ, ನೀನು ನಿನ್ನ ಸಹೋದರನನ್ನು ದೋಷಿಯೆಂದು ತೀರ್ಪಿಡುವುದೇಕೆ? ಮಾಂಸಹಾರಿಯೇ, ನಿನ್ನ ಸಹೋದರನನ್ನು ಹೀನೈಸುವುದೇಕೆ? ನಾವೆಲ್ಲರೂ ದೇವರ ನ್ಯಾಯಸ್ಥಾನದ ಮುಂದೆ ನಿಲ್ಲಬೇಕಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗಿರುವಾಗ, ನೀನು ಏಕೆ ನಿನ್ನ ಸಹೋದರರಿಗೆ ತೀರ್ಪುಮಾಡುತ್ತೀ? ಅಥವಾ ನಿನ್ನ ಸಹೋದರರನ್ನು ಏಕೆ ಹೀನಾಯವಾಗಿ ಕಾಣುತ್ತೀ? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಸೆಜಾಲ್ಯಾರ್, ಕಾಯ್ ಮನುನ್ ಘೆವ್ನ್ ತಿಯಾ ತುಜ್ಯಾ ಭಾವಾಚಿ ನಾತರ್ ಭೆನಿಚಿ ಝಡ್ತಿ ಕರ್ತೆಯ್? ನಾಹೊಲ್ಯಾರ್ ಸಗ್ಳೆಬಿ ಖಾತಲೊ ತಿಯಾ ಭಾವಾಕ್ ನಾತರ್ ಭೆನಿಕ್ ಖಾಲ್ತಿ ಕರುನ್ ಬಗ್ತೆಯ್ ? ಅಮ್ಕಾ ಸಗ್ಳ್ಯಾಕ್ನಿಬಿ ದೆವಾಚ್ಯಾ ಇದ್ರಾಕ್ ಝಡ್ತಿಕ್ ಇಬೆ ರ್‍ಹಾವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:10
16 ತಿಳಿವುಗಳ ಹೋಲಿಕೆ  

ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಆ ಸುವಾರ್ತೆಯನ್ನೇ.


“ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತಂದೆಯು ತೀರ್ಪು ಮಾಡುವ ಅಧಿಕಾರವನ್ನೆಲ್ಲಾ ಮಗನಿಗೆ ಕೊಟ್ಟಿದ್ದಾನೆ.


“ಜನರಿಗೆ ಬೋಧಿಸಬೇಕೆಂದು ಯೇಸು ನಮಗೆ ಹೇಳಿದನು. ಜೀವಂತವಾಗಿರುವ ಜನರಿಗೂ ಮತ್ತು ಸತ್ತುಹೋಗಿರುವ ಜನರಿಗೂ ದೇವರಿಂದ ನ್ಯಾಯಾಧಿಪತಿಯಾಗಿ ಆಯ್ಕೆಯಾಗಿರುವ ವ್ಯಕ್ತಿ ತಾನೇ ಎಂಬುದನ್ನು ಜನರಿಗೆ ತಿಳಿಸಬೇಕೆಂದು ಆತನು ನಮಗೆ ಹೇಳಿದನು.


‘ಕಟ್ಟುವವರಾದ ನೀವು ಬೇಡವೆಂದು ಬಿಟ್ಟ ಕಲ್ಲೇ (ಯೇಸು) ಮುಖ್ಯವಾದ ಮೂಲೆಗಲ್ಲಾಯಿತು.’


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


ಆಗ ಹೆರೋದನು ಮತ್ತು ಅವನ ಸೈನಿಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು ಯೇಸುವಿಗೆ ರಾಜನ ಬಟ್ಟೆ ಉಡಿಸಿ ಹಾಸ್ಯ ಮಾಡಿದರು. ಬಳಿಕ ಹೆರೋದನು ಯೇಸುವನ್ನು ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.


ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


“ಬೇರೆಯವರಿಗೆ ತೀರ್ಪು ನೀಡಬೇಡಿ. ಆಗ ದೇವರೂ ನಿಮಗೆ ತೀರ್ಪು ಮಾಡುವುದಿಲ್ಲ.


ಅಲ್ಲಿ ಕೆಲವರು ತಾವೇ ಬಹಳ ಒಳ್ಳೆಯವರೆಂದು ಭಾವಿಸಿಕೊಂಡಿದ್ದರು. ಈ ಜನರು ತಾವು ಬೇರೆಯವರಿಗಿಂತ ಉತ್ತಮರೋ ಎಂಬಂತೆ ವರ್ತಿಸುತ್ತಿದ್ದರು. ಯೇಸು ಅವರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು