ರೋಮಾಪುರದವರಿಗೆ 14:15 - ಪರಿಶುದ್ದ ಬೈಬಲ್15 ನೀನು ತಿನ್ನುವ ಒಂದು ಆಹಾರಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೀನು ಏನನ್ನಾದರೂ ತಿನ್ನುವುದರಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾಗುವುದಾದರೆ ನಿನ್ನ ಆ ವರ್ತನೆ ಪ್ರೀತಿಪ್ರೇರಿತವಾದುದಲ್ಲ. ಯಾರಿಗೋಸ್ಕರ ಕ್ರಿಸ್ತಯೇಸು ಪ್ರಾಣಾರ್ಪಣೆ ಮಾಡಿದರೋ ಅಂಥವನಿಗೆ ನೀನು ತಿನ್ನುವ ಆಹಾರದಿಂದಾಗಿ ನಾಶವನ್ನು ತರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ನೀನು ಪ್ರೀತಿಗೆ ತಕ್ಕಂತೆ ಇನ್ನು ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿವಿುತ್ತ ಕೆಡಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀವು ಆಹಾರದಿಂದ ನಿಮ್ಮ ಸಹೋದರರನ್ನು ದುಃಖ ಪಡಿಸುವುದಾದರೆ ನೀವು ಪ್ರೀತಿಯಿಂದ ನಡೆದುಕೊಳ್ಳುವುದಿಲ್ಲ. ನೀವು ತಿನ್ನುವುದರ ಮೂಲಕ ಕ್ರಿಸ್ತನು ಯಾವನಿಗೋಸ್ಕರವಾಗಿ ಸತ್ತರೋ ಅಂಥವರನ್ನು ನಾಶಮಾಡಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತಿಯಾ ಜೆ ಕಾಯ್ ಖಾತೆ ತೆಚೆಸಾಟ್ನಿಚ್ ತುಜ್ಯಾ ಭಾವಾಚ್ಯಾ ಮನಾಕ್ ತಿಯಾ ಬೆಜಾರ್ ಕರ್‍ಲೆ ತರ್, ತಿಯಾ ಅನಿ ಲೈ ಎಳ್ ಪ್ರೆಮಾನಿ ರ್‍ಹಾತಲ್ಯಾತ್ ರ್‍ಹಾಯ್ನೆಯ್, ತೆಚೆಸಾಟ್ನಿ ಕೊನಾಚ್ಯಾಸಾಟ್ನಿ ಕ್ರಿಸ್ತ್ ಮರ್‍ಲಾ ತೆಚ್ಯಾ ನಾಸಾಕ್ ತುಜೆ ಜೆವಾನ್ ಕಾರನ್ ಹೊವ್ಚೆ ನ್ಹಯ್! ಅಧ್ಯಾಯವನ್ನು ನೋಡಿ |
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.