ರೋಮಾಪುರದವರಿಗೆ 14:17 - ಪರಿಶುದ್ದ ಬೈಬಲ್17 ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಕಶ್ಯಾಕ್ ಮಟ್ಲ್ಯಾರ್ ದೆವಾಚೊ ರಾಜ್ ಖಾತಲ್ಯಾ ಅನಿ ಫಿತಲ್ಯಾಚ್ಯಾ ವರ್‍ತಿ ಹೊಂದುನ್ ನಾ. ಖರಿ ವಾಟ್, ಸಮಾದಾನ್, ಅನಿ ಪವಿತ್ರ್ ಆತ್ಮೊ ದಿತಲ್ಯಾ ಕುಶಿಚ್ಯಾ ವರ್‍ತಿ ಹೊಂದುನ್ ಹಾಯ್. ಅಧ್ಯಾಯವನ್ನು ನೋಡಿ |
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.