ರೋಮಾಪುರದವರಿಗೆ 14:20 - ಪರಿಶುದ್ದ ಬೈಬಲ್20 ಎಲ್ಲಾ ಆಹಾರಪದಾರ್ಥಗಳು ಶುದ್ಧವಾಗಿವೆ ಮತ್ತು ತಿನ್ನಲು ಯೋಗ್ಯವಾಗಿವೆ. ಆದರೆ ಒಬ್ಬನು ತಾನು ತಿನ್ನುವ ಆಹಾರಪದಾರ್ಥದ ಮೂಲಕ ಮತ್ತೊಬ್ಬ ವ್ಯಕ್ತಿಯನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ಅವನು ಆ ಪದಾರ್ಥವನ್ನು ತಿನ್ನುವುದೇ ತಪ್ಪು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕೇವಲ ಆಹಾರಕ್ಕಾಗಿ, ದೇವರು ಕಟ್ಟಿದ್ದನ್ನು ನೀನು ಕೆಡವಬೇಡ. ಆಹಾರಪದಾರ್ಥಗಳೆಲ್ಲಾ ಒಳ್ಳೆಯವೇ. ಆದರೆ ಅವುಗಳಲ್ಲಿ ಯಾವುದಾದರೂ ಒಂದನ್ನು ತಿನ್ನುವುದರಿಂದ ಮತ್ತೊಬ್ಬನಿಗೆ ವಿಘ್ನವನ್ನು ಒಡ್ಡುವುದಾದರೆ, ಅದು ತಪ್ಪು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ದೇವರು ಕಟ್ಟಿದ್ದನ್ನು ನೀನು ಆಹಾರದ ನಿವಿುತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವದು ಕೆಟ್ಟದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಹಾರದ ನಿಮಿತ್ತವಾಗಿ ದೇವರ ಕೆಲಸವನ್ನು ಕೆಡಿಸಬೇಡ, ಎಲ್ಲಾ ಆಹಾರವೂ ಶುದ್ಧವಾದದ್ದೇ. ಆದರೆ ಒಬ್ಬರು ತಿಂದು ವಿಘ್ನವನ್ನು ಒಡ್ಡುವುದು ಕೆಟ್ಟದ್ದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಜೆವ್ನಾಕ್ ಲಾಗುನ್ ದೆವಾನ್ ಕರಲ್ಲೆ ನಾಸ್ ಕರುನ್ ಟಾಕುನಕಾಶಿ. ಸಗ್ಳಿ ಖಾತಲಿ ಜಿನ್ಸಾ ಬರಿಚ್ ಹಾತ್, ಖರೆ ಅಪ್ನಾಚ್ಯಾ ಖಾತಲ್ಯಾಚ್ಯಾ ವೈನಾ ದುಸ್ರ್ಯಾನಿ ಪಾಪಾತ್ ಪಡುಕ್ ಕಾರನ್ ಹೊತಲೆ ಚುಕ್ ಹೊತಾ. ಅಧ್ಯಾಯವನ್ನು ನೋಡಿ |