Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:22 - ಪರಿಶುದ್ದ ಬೈಬಲ್‌

22 ಈ ಸಂಗತಿಗಳ ಬಗ್ಗೆ ನಿನಗಿರುವ ವಿಶ್ವಾಸವು ನಿನಗೂ ದೇವರಿಗೂ ಮಾತ್ರ ತಿಳಿದಿರಲಿ. ತನಗೆ ಸರಿಯೆನಿಸಿದ ಕಾರ್ಯಗಳನ್ನು ತಾನು ದೋಷಿಯಾಗುತ್ತೇನೆಂಬ ಸಂಶಯವಿಲ್ಲದೆ ಮಾಡುವವನೇ ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈ ವಿಷಯದಲ್ಲಿ ನಿನಗಿರುವ ವೈಯಕ್ತಿಕ ನಂಬಿಕೆ ದೇವರಿಗೆ ಮತ್ತು ನಿನಗೆ ಮಾತ್ರ ತಿಳಿದಿರಲಿ. ತಾನು ಅನುಮೋದಿಸಿ ಮಾಡಿದುದರ ಬಗ್ಗೆ ಅನುಮಾನಪಡದವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ನಿನ್ನ ಮಟ್ಟಿಗೇ ಇರಲಿ. ತಾನು ಒಪ್ಪಿದ ಕೆಲಸದ ವಿಷಯದಲ್ಲಿ ಇದು ಸರಿಯೋ ಸರಿಯಲ್ಲವೋ ಎಂದು ಸಂಶಯ ಪಡದವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಈ ವಿಷಯದಲ್ಲಿ ನಿಮಗಿರುವ ವೈಯಕ್ತಿಕ ದೃಢವಿಶ್ವಾಸವನ್ನು ನೀವು ದೇವರ ಮುಂದೆ ಇಟ್ಟುಕೊಂಡಿರು. ತಾವು ಅನುಮೋದಿಸಿ ಮಾಡಿದ ಕಾರ್ಯಗಳ ಬಗ್ಗೆ ತಮಗೆ ದಂಡನಾತೀರ್ಪು ಮಾಡಿಕೊಳ್ಳದವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ವಿಶ್ವಾಸಾಚ್ಯಾ ವೈನಾ ದೆವಾಚ್ಯಾ ನದ್ರೆತ್ ತಿಯಾ ಕರಲ್ಲೊ ನಿರ್‍ದಾರ್ ತುಜ್ಯಾ ಜಿವನಾಚೊ ಉಜ್ವೊಡ್ ಹೊವ್ನ್ ರ್‍ಹಾಂವ್ದಿತ್. ಅಪ್ನಾಚ್ಯಾ ಭುತ್ತುರ್‍ಲ್ಯಾ ಮನಾಚ್ಯಾ ವಿರೊದ್ ಜಾಯ್ನಸ್ತಾನಾ ಹೆ ನಾಹೊಲ್ಯಾರ್ ತೆ ಕರುಕ್ ನಿರ್‍ದಾರ್ ಘೆತಲೊ ಮಾನುಸ್ ಸುಖಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:22
13 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸ್ನೇಹಿತರೇ, ನಾವು ತಪ್ಪು ಮಾಡುತ್ತಿಲ್ಲ ಎಂದು ನಮಗೆ ತಿಳಿದಿದ್ದರೆ, ನಾವು ದೇವರ ಬಳಿಗೆ ಧೈರ್ಯವಾಗಿ ಬರಲು ಸಾಧ್ಯ.


ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಹೆಚ್ಚು ಮುಖ್ಯವೆಂದು ನಂಬಬಹುದು. ಆದರೆ ಇನ್ನೊಬ್ಬನು ಎಲ್ಲಾ ದಿನಗಳು ಒಂದೇ ಎಂದು ನಂಬಬಹುದು. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸ್ವಂತ ಮನಸ್ಸಿನಲ್ಲಿರುವ ತನ್ನ ಸ್ವಂತ ನಂಬಿಕೆಯ ಬಗ್ಗೆ ನಿಶ್ಚಯದಿಂದಿರಬೇಕು.


ನಿಮ್ಮಲ್ಲಿ ಜ್ಞಾನವಂತರಾಗಲಿ ಬದ್ಧಿವಂತರಾಗಲಿ ಇದ್ದಾರೋ? ಅಂಥವನು ತನ್ನ ಜ್ಞಾನವನ್ನು ಯೋಗ್ಯವಾಗಿ ಬದುಕುವುದರ ಮೂಲಕ ತೋರ್ಪಡಿಸಲಿ. ಅವನು ಒಳ್ಳೆಯ ಕಾರ್ಯಗಳನ್ನು ದೀನತೆಯಿಂದ ಮಾಡಲಿ. ಜ್ಞಾನಿಯಾದವನು ಕೊಚ್ಚಿಕೊಳ್ಳುವುದಿಲ್ಲ.


ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.


ಆದರೆ ಒಬ್ಬನು ತಾನು ತಿನ್ನುವ ಪದಾರ್ಥದಲ್ಲಿ ದೋಷವಿಲ್ಲ ಎಂಬ ದೃಢನಂಭಿಕೆಯಿಲ್ಲದೆ ತಿಂದರೆ, ಅವನು ತನ್ನನ್ನೇ ತಪ್ಪಿತಸ್ಥನನಾಗಿ ಮಾಡಿಕೊಳ್ಳುತ್ತಾನೆ. ಏಕೆಂದರೆ ಅದು ದೋಷರಹಿತವಾದದ್ದು ಎಂಬ ನಂಬಿಕೆ ಅವನಲ್ಲಿಲ್ಲ. ನಂಬಿಕೆಯ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ನಾನು ಪ್ರಭುವಾದ ಯೇಸುವಿನಲ್ಲಿದ್ದೇನೆ. ಯಾವ ಆಹಾರಪದಾರ್ಥವನ್ನೇ ಆಗಲಿ ತಿನ್ನುವುದು ತಪ್ಪಲ್ಲವೆಂದು ನನಗೆ ಗೊತ್ತಿದೆ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ನಂಬಿದರೆ, ಆ ಆಹಾರಪದಾರ್ಥವು ಅವನಿಗೆ ಅಶುದ್ಧವಾಗುತ್ತದೆ.


ಒಬ್ಬನು ಯಾವ ಬಗೆಯ ಆಹಾರವನ್ನಾದರೂ ತಿನ್ನಬಹುದೆಂದು ಭಾವಿಸುತ್ತಾನೆ. ಆದರೆ ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯು ತಾನು ತರಕಾರಿಗಳನ್ನು ಮಾತ್ರ ತಿನ್ನಬಹುದೆಂದು ಭಾವಿಸುತ್ತಾನೆ.


ಈ ಕಾರಣದಿಂದ ನಾನು ಯಾವುದನ್ನು ಸರಿಯಾದದ್ದು ಎಂದು ನಂಬಿದ್ದೇನೋ ಅದನ್ನು ದೇವರ ಮುಂದೆಯೂ ಮನುಷ್ಯರ ಮುಂದೆಯೂ ಮಾಡಲು ಯಾವಾಗಲು ಪ್ರಯತ್ನಿಸುತ್ತಿದ್ದೇನೆ.


ನಾನು ದುರಾವಸ್ಥೆಗೆ ಒಳಗಾಗಿದ್ದೇನೆ. ನನಗೆ ಮರಣವನ್ನು ತರುವ ಈ ದೇಹದಿಂದ ನನ್ನನ್ನು ರಕ್ಷಿಸುವವರು ಯಾರು?


ನಾನು ಮಾಡುವ ಕಾರ್ಯಗಳು ನನಗೇ ಅರ್ಥವಾಗುವುದಿಲ್ಲ. ನಾನು ಯಾವ ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಇಚ್ಛಿಸುತ್ತೇನೋ ಆ ಕಾರ್ಯಗಳನ್ನು ಮಾಡದೆ ನಾನು ದ್ವೇಷಿಸುವ ಕೆಟ್ಟಕಾರ್ಯಗಳನ್ನೇ ಮಾಡುತ್ತೇನೆ.


“ಇತರ ಜನರಿಗೆ ತೀರ್ಪು ಮಾಡಬಲ್ಲೆವು” ಎಂದು ನಿಮ್ಮ ವಿಷಯದಲ್ಲಿ ಯೋಚಿಸಿಕೊಳ್ಳಬೇಡಿ. ಏಕೆಂದರೆ ನೀವು ಸಹ ಪಾಪಮಾಡಿ ಅಪರಾಧಿಗಳಾಗಿದ್ದೀರಿ. ನೀವೂ ಆ ಜನರಿಗೆ ತೀರ್ಪು ಮಾಡುತ್ತೀರಿ. ಆದರೆ ಅದೇ ಕಾರ್ಯಗಳನ್ನು ನೀವೂ ಮಾಡುತ್ತೀರಿ. ಆದ್ದರಿಂದ ನೀವು ಅವರಿಗೆ ತೀರ್ಪು ಮಾಡುವಾಗ, ನಿಜವಾಗಿಯೂ ನಿಮಗೇ ತೀರ್ಪು ಮಾಡಿಕೊಳ್ಳುವವರಾಗಿದ್ದೀರಿ.


ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು