ರೋಮಾಪುರದವರಿಗೆ 14:23 - ಪರಿಶುದ್ದ ಬೈಬಲ್23 ಆದರೆ ಒಬ್ಬನು ತಾನು ತಿನ್ನುವ ಪದಾರ್ಥದಲ್ಲಿ ದೋಷವಿಲ್ಲ ಎಂಬ ದೃಢನಂಭಿಕೆಯಿಲ್ಲದೆ ತಿಂದರೆ, ಅವನು ತನ್ನನ್ನೇ ತಪ್ಪಿತಸ್ಥನನಾಗಿ ಮಾಡಿಕೊಳ್ಳುತ್ತಾನೆ. ಏಕೆಂದರೆ ಅದು ದೋಷರಹಿತವಾದದ್ದು ಎಂಬ ನಂಬಿಕೆ ಅವನಲ್ಲಿಲ್ಲ. ನಂಬಿಕೆಯ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅನುಮಾನದಿಂದ ಊಟಮಾಡುವವನು ದೇವರ ಮುಂದೆ ಅಪರಾಧಿಯಾಗುತ್ತಾನೆ. ಏಕೆಂದರೆ, ಅವನು ವಿಶ್ವಾಸದ ಆಧಾರದ ಮೇಲೆ ವರ್ತಿಸುತ್ತಿಲ್ಲ. ವಿಶ್ವಾಸದ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸಂಶಯಪಟ್ಟು ಉಣ್ಣುವವನು ಸಂಶಯದಿಂದ ಉಣ್ಣುವ ಕಾರಣ ದೋಷಿಯಾಗಿದ್ದಾನೆ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಅನುಮಾನವುಳ್ಳವರು ಊಟಮಾಡುವುದು ವಿಶ್ವಾಸದಿಂದ ಅಲ್ಲವಾದ್ದರಿಂದ ಅವರು ದೋಷಿಯಾಗುತ್ತಾರೆ. ವಿಶ್ವಾಸವಿಲ್ಲದೆ ಮಾಡುವ ಎಲ್ಲವೂ ಪಾಪವಾಗಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಖರೆ ಸಂಶೆವ್ ಧರುನ್ ಘೆವ್ನ್ ಖಾತಲೊ ಚುಕೆತ್ ಪಡ್ತಾ; ಕಶ್ಯಾಕ್ ಮಟ್ಲ್ಯಾರ್, ಅಪ್ನಾಚ್ಯಾ ಭುತ್ತುರ್‍ಲ್ಯಾ ಮನಾಚೊ ನಿರ್‍ದಾರ್ ನಸ್ತಾನಾ ತೊ ತೆ ಖಾತಾ, ಜೊ ಕೊನ್ ಅಪ್ನಾಚ್ಯಾ ಭುತ್ತುರ್‍ಲ್ಯಾ ಮನಾಚೊ ನಿರ್‍ದಾರ್ ನಸ್ತಾನಾ ಎಕ್ ಕಾಮ್ ಕರ್‍ತಾ ಜಾಲ್ಯಾರ್ ತೊ ಪಾಪ್ ಕರ್‍ತಾ. ಅಧ್ಯಾಯವನ್ನು ನೋಡಿ |
ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.