Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:14 - ಪರಿಶುದ್ದ ಬೈಬಲ್‌

14 ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಳ್ಳೆಯತನವು ತುಂಬಿದೆಯೆಂದು ನನಗೆ ನಿಶ್ಚಯವಾಗಿ ಗೊತ್ತಿದೆ. ಅಗತ್ಯವಾದ ಸಕಲ ಜ್ಞಾನವು ನಿಮಗಿದೆಯೆಂದು ಮತ್ತು ಒಬ್ಬರಿಗೊಬ್ಬರು ಸಲಹೆ ನೀಡಬಲ್ಲಿರೆಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನ ಸಹೋದರರೇ, ನೀವಂತೂ ಒಳ್ಳೇತನದಿಂದ ಭರಿತರಾಗಿಯೂ ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಪ್ರಿಯರೇ, ನೀವು ಒಳ್ಳೆಯತನದಿಂದ ಪೂರ್ಣವಾದವರೂ ಸಕಲ ತಿಳುವಳಿಕೆಯಿಂದ ತುಂಬಿದವರೂ ಆಗಿದ್ದು, ಒಬ್ಬರಿಗೊಬ್ಬರು ಬುದ್ಧಿ ಹೇಳುವುದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ಬಗ್ಗೆ ನನಗೆ ಭರವಸೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮಿ ಬರ್‍ಯಾ ಮನಾಚಿ ಲೊಕಾ ಅನಿ ಸಗ್ಳ್ಯಾ ರಿತಿಚ್ಯಾ ಶಾನೆಪಾನಾನಿ ಅನಿ ಭರಲ್ಲಿ ಲೊಕಾ ತಸೆಮನುನ್ ಎಕಾಮೆಕಾಕ್ನಿ ಬುದ್‍ಬಾಳ್ ಸಾಂಗುಕ್ ತುಮ್ಚ್ಯಾನ್ ಹೊತಾ ಮನುನ್ ಮಾಕಾ ಖರೆಚ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:14
25 ತಿಳಿವುಗಳ ಹೋಲಿಕೆ  

ಇವೆಲ್ಲವೂ ನಿಮಗೆ ತಿಳಿದಿದೆ. ನಿಮ್ಮಲ್ಲಿರುವ ಸತ್ಯದಲ್ಲಿ ನೀವು ಸ್ಥಿರವಾಗಿದ್ದೀರಿ. ಆದರೆ ಇವುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳುವಂತೆ ನಾನು ನಿಮಗೆ ಯಾವಾಗಲೂ ಸಹಾಯ ಮಾಡುತ್ತೇನೆ.


ನಾನು ನಿಮಗೆ ಏಕೆ ಬರೆಯಬೇಕು? ನೀವು ಸತ್ಯವನ್ನು ತಿಳಿದಿಲ್ಲವೆಂದು ನಾನು ಬರೆಯಬೇಕೇ? ಇಲ್ಲ! ನೀವು ಸತ್ಯವನ್ನು ತಿಳಿದಿರುವುದರಿಂದ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಸತ್ಯದಿಂದ ಯಾವ ಸುಳ್ಳೂ ಬರುವುದಿಲ್ಲ ಎಂಬುದು ನಿಮಗೆ ತಿಳಿದಿದೆ.


ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.


ಆದ್ದರಿಂದ ಒಬ್ಬರನ್ನೊಬ್ಬರು ಸಂತೈಸಿ ಬಲಪಡಿಸಿರಿ. ಈಗ ನೀವು ಮಾಡುತ್ತಿರುವುದು ಅದನ್ನೇ.


ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.


ನಿಮಗೆ ತಿಳುವಳಿಕೆ ಇರುವುದರಿಂದ ನೀವು ವಿಗ್ರಹದ ಗುಡಿಯೊಂದರಲ್ಲಿ ಸಂಕೋಚವಿಲ್ಲದೆ ಊಟ ಮಾಡಬಹುದು. ನೀವು ಅಲ್ಲಿ ಊಟ ಮಾಡುವುದನ್ನು ನಂಬಿಕೆಯಲ್ಲಿ ಬಲಹೀನನಾದ ವ್ಯಕ್ತಿಯೊಬ್ಬನು ನೋಡಿ, ವಿಗ್ರಹಗಳಿಗೆ ಅರ್ಪಿತವಾದ ಮಾಂಸವನ್ನು ತಿನ್ನಲು ಪ್ರೋತ್ಸಾಹಗೊಳ್ಳಬಹುದು. ಆದರೆ ಅದನ್ನು ತಿನ್ನಕೊಡದೆಂಬ ಭಾವನೆ ಅವನಲ್ಲಿ ಆಳವಾಗಿ ಬೇರೂರಿದೆ.


ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.


ಯೇಸುವಿನಲ್ಲಿ ಸಕಲ ಆಶೀರ್ವಾದಗಳನ್ನು ಹೊಂದಿರುವ ನೀವು ವಾಕ್ಚತುರರೂ ಜ್ಞಾನಸಂಪನ್ನರೂ ಆಗಿದ್ದೀರಿ.


ನಾನು ಕೇಳಿಕೊಂಡದ್ದನ್ನು ನೀನು ಮಾಡುವೆ ಎಂದು ನನಗೆ ಗೊತ್ತಿರುವುದರಿಂದಲೇ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಿಗೆ ನೀನು ಮಾಡುವೆ ಎಂದು ನನಗೆ ತಿಳಿದಿದೆ.


ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆಂದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊಂಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿಂದಿರಿ;


ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಂಡುಬರುತ್ತದೆ.


ಪ್ರಿಯ ಸ್ನೇಹಿತರೇ, ನಾವು ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದರೂ ನಿಮ್ಮಿಂದ ಇದಕ್ಕಿಂತಲೂ ಉತ್ತಮವಾದ ಕಾರ್ಯಗಳನ್ನು ಅಪೇಕ್ಷಿಸುತ್ತೇವೆ. ರಕ್ಷಣೆಗೆ ಸಂಬಂಧಿಸಿದ ಕಾರ್ಯಗಳನ್ನು ನೀವು ಮಾಡುತ್ತೀರೆಂದು ನಾವು ದೃಢವಾಗಿ ನಂಬಿದ್ದೇವೆ.


ನಿಮಗೆ ಕಾಲವು ಬೇಕಾದಷ್ಟಿದ್ದುದರಿಂದ ಈಗಾಗಲೇ ನೀವು ಉಪದೇಶಕರಾಗಿರಬೇಕಿತ್ತು. (ಆದರೆ ನೀವಿನ್ನೂ ಆಗಿಲ್ಲ.) ಹೀಗಿರಲು ದೇವರ ಉಪದೇಶಗಳನ್ನು ಮೊದಲ ಪಾಠದಿಂದ ಮತ್ತೆ ಉಪದೇಶಿಸಲು ನಿಮಗೆ ಮತ್ತೊಬ್ಬ ವ್ಯಕ್ತಿಯ ಅಗತ್ಯವಿದೆ. ಹಾಲಿನಂತಿರುವ ಉಪದೇಶವನ್ನು ನಾವು ನಿಮಗೆ ಮಾಡಬೇಕಾಗಿದೆ. ನೀವು ಗಟ್ಟಿ ಆಹಾರವನ್ನು ತಿನ್ನುವವರಾಗಿಲ್ಲ.


ನಿನ್ನ ನಿಜವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ಆ ವಿಧವಾದ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲೂ ನಿನ್ನ ತಾಯಿಯಾದ ಯೂನಿಕೆಯಲ್ಲೂ ಇತ್ತು. ಈಗ ಅದೇ ನಂಬಿಕೆಯು ನಿನ್ನಲ್ಲಿಯೂ ಇದೆಯೆಂದು ನನಗೆ ತಿಳಿದಿದೆ.


ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು.


ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ಪ್ರವಾದಿಸುವ ವರ ನನಗಿರಬಹುದು; ದೇವರ ರಹಸ್ಯ ಸಂಗತಿಗಳನ್ನೆಲ್ಲಾ ಮತ್ತು ಜ್ಞಾನವನ್ನೆಲ್ಲಾ ನಾನು ಅರ್ಥಮಾಡಿಕೊಂಡಿರಬಹುದು ಮತ್ತು ಬೆಟ್ಟಗಳನ್ನು ಚಲಿಸಬಲ್ಲಂಥ ಮಹಾನಂಬಿಕೆ ನನಗಿರಬಹುದು. ಇವುಗಳೆಲ್ಲಾ ನನ್ನಲ್ಲಿ ಇದ್ದರೂ ಪ್ರೀತಿಯು ಇಲ್ಲದಿದ್ದರೆ, ನಾನು ನಿಷ್ಪ್ರಯೋಜಕನಾಗಿದ್ದೇನೆ.


ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ.


ನೀವು ಪ್ರತಿಯೊಂದರಲ್ಲಿಯೂ ಅಂದರೆ, ನಂಬಿಕೆಯಲ್ಲಿ, ಮಾತಾಡುವುದರಲ್ಲಿ, ಜ್ಞಾನದಲ್ಲಿ, ಸಹಾಯಮಾಡಬೇಕೆಂಬ ಆಸಕ್ತಿಯಲ್ಲಿ ಮತ್ತು ನಮ್ಮಿಂದ ಕಲಿತುಕೊಂಡ ಪ್ರೀತಿಯಲ್ಲಿ ಶ್ರೀಮಂತರಾಗಿದ್ದೀರಿ. ಆದ್ದರಿಂದ ಕೃಪಾಕಾರ್ಯದಲ್ಲಿಯೂ ನೀವು ಶ್ರೀಮಂತರಾಗಿರಬೇಕೆಂದು ನಾವು ಬಯಸುತ್ತೇವೆ.


ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು