15 ನೀವು ಜ್ಞಾಪಕದಲ್ಲಿ ಇಟ್ಟುಕೊಳ್ಳಬೇಕೆಂದು ನಾನು ಅಪೇಕ್ಷಿಸಿದ ಕೆಲವು ಸಂಗತಿಗಳನ್ನು ನಾನು ನಿಮಗೆ ಧೈರ್ಯವಾಗಿ ಬರೆದಿರುವೆ. ಕ್ರಿಸ್ತ ಯೇಸುವಿನ ಸೇವಕ ಎಂಬ ವಿಶೇಷವಾದ ವರವನ್ನು ದೇವರು ನನಗೆ ಕೊಟ್ಟಿರುವುದರಿಂದ ನಾನು ಹೀಗೆ ಬರೆದಿದ್ದೇನೆ.
15-16 ಆದರೂ ಪ್ರಿಯರೇ, ನಿಮ್ಮನ್ನು ನೆನಪಿಸುವುದಕ್ಕಾಗಿ ಕೆಲವೊಂದು ವಿಷಯಗಳನ್ನು ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕೆಂದರೆ ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವುದಕ್ಕೆ ನನಗೆ ದೇವರ ಆಶೀರ್ವಾದವಾಯಿತು. ನಾನು ದೇವರ ಸುವಾರ್ತಾ ಸೇವೆಯನ್ನು ಯಾಜಕ ಸೇವೆ ಎಂಬಂತೆ ನಡಿಸಿ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ಸಮರ್ಪಕವಾಗುವಂತೆ ಯತ್ನಿಸುವವನಾಗಿದ್ದೇನೆ.
15 ಆದರೂ ಕೆಲವು ವಿಷಯಗಳತ್ತ ನಿಮ್ಮ ಗಮನ ಸೆಳೆಯುವ ಉದ್ದೇಶದಿಂದ ಅಲ್ಲಲ್ಲಿ ಹೆಚ್ಚಿನ ಧೈರ್ಯವಹಿಸಿ ಬರೆದಿದ್ದೇನೆ. ದೇವರು ನನಗೆ ದಯಪಾಲಿಸಿರುವ ವಿಶೇಷ ವರದಾನದಿಂದಾಗಿ ಈ ಪ್ರಕಾರ ಬರೆದಿದ್ದೇನೆ.
15-16 ಆದರೂ ನಿಮಗೆ ಜ್ಞಾಪಕಕೊಡಬೇಕೆಂದು ಅಲ್ಲಲ್ಲಿ ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕಂದರೆ ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವದಕ್ಕೆ ನನಗೆ ದೇವರ ಅನುಗ್ರಹವಾಯಿತು. ನಾನು ದೇವರ ಸುವಾರ್ತೆಯ ಸೇವೆಯನ್ನು ಯಾಜಕಸೇವೆ ಎಂಬಂತೆ ನಡಿಸಿ ಅನ್ಯದೇಶಸ್ಥರೆಂಬ ಕಾಣಿಕೆಯು ಪವಿತ್ರಾತ್ಮನ ಮೂಲಕವಾಗಿ ಪವಿತ್ರವಾಗಿದ್ದು ದೇವರಿಗೆ ಸಮರ್ಪಕವಾಗುವಂತೆ ಯತ್ನೈಸುವವನಾಗಿದ್ದೇನೆ.
ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.
ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)
ನಾವೆಲ್ಲರೂ ಬೇರೆಬೇರೆ ವರಗಳನ್ನು ಹೊಂದಿದ್ದೇವೆ. ದೇವರು ನಮಗೆ ಕೊಟ್ಟಿರುವ ಕೃಪೆಯಿಂದಲೇ ಪ್ರತಿಯೊಂದು ವರವು ಬಂದಿದೆ. ಪ್ರವಾದಿಸುವ ವರವನ್ನು ಹೊಂದಿರುವವನು ತನಗಿರುವ ನಂಬಿಕೆಯೊಂದಿಗೆ ಆ ವರವನ್ನು ಉಪಯೋಗಿಸಬೇಕು.
ದೇವರು ಕ್ರಿಸ್ತನ ಮೂಲಕವಾಗಿ ನನಗೆ ಅಪೊಸ್ತಲನೆಂಬ ವಿಶೇಷ ಕೆಲಸವನ್ನು ಕೊಟ್ಟನು. ದೇವರಲ್ಲಿ ನಂಬಿಕೆಯಿಡುವಂತೆಯೂ ದೇವರಿಗೆ ವಿಧೇಯರಾಗುವಂತೆಯೂ ಎಲ್ಲಾ ಜನಾಂಗಗಳ ಜನರನ್ನು ನಡೆಸಬೇಕೆಂದು ದೇವರು ನನಗೆ ಈ ಕೆಲಸವನ್ನು ಕೊಟ್ಟನು. ನಾನು ಈ ಕೆಲಸವನ್ನು ಕ್ರಿಸ್ತನಿಗಾಗಿ ಮಾಡುತ್ತೇನೆ.
ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು.
ನಾನು ಈ ಕಿರುಪತ್ರವನ್ನು ಸಿಲ್ವಾನನ ನೆರವಿನಿಂದ ಬರೆದೆನು. ಅವನು ಕ್ರಿಸ್ತನಲ್ಲಿ ನಂಬಿಗಸ್ತನಾದ ಸಹೋದರನೆಂಬುದು ನನಗೆ ತಿಳಿದಿದೆ. ನಾನು ನಿಮ್ಮನ್ನು ಸಂತೈಸಲು ಮತ್ತು ಪ್ರೋತ್ಸಾಹಿಸಲು ಈ ಪತ್ರವನ್ನು ಬರೆದೆನು. ಇದುವೇ ದೇವರ ನಿಜವಾದ ಕೃಪೆ ಎಂಬುದನ್ನು ನಿಮಗೆ ತಿಳಿಸಬೇಕೆಂಬುದೇ ನನ್ನ ಅಪೇಕ್ಷೆಯಾಗಿತ್ತು. ಆ ಕೃಪೆಯಲ್ಲಿ ಸ್ಥಿರತೆಯಿಂದಿರಿ.
ನನ್ನ ಸಹೋದರ ಸಹೋದರಿಯರೇ, ನಾನು ಹೇಳಿದ ಈ ಸಂಗತಿಗಳನ್ನು ನೀವು ತಾಳ್ಮೆಯಿಂದ ಆಲಿಸಬೇಕೆಂದು ನಿಮ್ಮಲ್ಲಿ ಬೇಡಿಕೊಳ್ಳುತ್ತೇನೆ. ನಿಮ್ಮನ್ನು ಬಲಪಡಿಸುವುದಕ್ಕಾಗಿ ಈ ಪತ್ರವನ್ನು ಬರೆದಿರುವೆನು. ಈ ಪತ್ರವು ಬಹುದೀರ್ಘವಾದದ್ದೇನೂ ಅಲ್ಲ.
ಜನರಿಗೆ ಈ ಸಂಗತಿಗಳನ್ನು ತಿಳಿಸುತ್ತಲೇ ಇರು. ಪದಗಳ ಬಗ್ಗೆ ವಾಗ್ವಾದ ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಎಚ್ಚರಿಕೆ ನೀಡು. ವಾಗ್ವಾದಗಳಿಂದ ಯಾರಿಗೂ ಪ್ರಯೋಜನವಿಲ್ಲ. ವಾಗ್ವಾದವನ್ನು ಕೇಳುವ ಜನರು ಅದರಿಂದ ನಾಶವಾಗುತ್ತಾರೆ.
ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಈ ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ಆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ.
ಅಲ್ಲಿರುವ ಸಹೋದರ ಸಹೋದರಿಯರಿಗೆ ಈ ಸಂಗತಿಗಳನ್ನು ತಿಳಿಸಿದರೆ, ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ ಎಂಬುದನ್ನೂ ನಂಬಿಕೆಯ ನುಡಿಗಳಿಂದ ಮತ್ತು ಉತ್ತಮ ಉಪದೇಶಗಳನ್ನು ಅನುಸರಿಸಿದ್ದರಿಂದ ಬಲಗೊಂಡಿರುವೆ ಎಂಬುದನ್ನೂ ತೋರಿಸಿದಂತಾಗುತ್ತದೆ.
ದೇವರು ನನಗೆ ಈ ವಿಶೇಷವಾದ ವರವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರೆನಿಸಿಕೊಂಡಿದ್ದ ಯಾಕೋಬ, ಪೇತ್ರ, ಯೋಹಾನರು ಕಂಡುಕೊಂಡರು. ಆದ್ದರಿಂದ ಅವರು ಬಾರ್ನಬನನ್ನು ಮತ್ತು ನನ್ನನ್ನು ಸ್ವೀಕರಿಸಿಕೊಂಡರು. ಅವರು ನಮಗೆ, “ಪೌಲ ಮತ್ತು ಬಾರ್ನಬರೇ, ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ. ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ” ಎಂದು ತಿಳಿಸಿದರು.
ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.