ರೋಮಾಪುರದವರಿಗೆ 15:18 - ಪರಿಶುದ್ದ ಬೈಬಲ್18 ನಾನು ನನ್ನ ಸ್ವಕಾರ್ಯಗಳ ಬಗ್ಗೆಯೂ ಮಾತಾಡುವುದಿಲ್ಲ. ಯೆಹೂದ್ಯರಲ್ಲದ ಜನರನ್ನು ತನಗೆ ವಿಧೇಯರನ್ನಾಗಿ ಮಾಡಿಕೊಳ್ಳಲು ಕ್ರಿಸ್ತನು ನನ್ನ ಮೂಲಕ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಮಾಡಿದ ಕಾರ್ಯಗಳನ್ನು ಹೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವದಕ್ಕಾಗಿ ನನ್ನ ಕೈಯಿಂದ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಸೂಚಕಕಾರ್ಯ ಅದ್ಭುತಕಾರ್ಯಗಳ ಬಲದಿಂದಲೂ ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವದಕ್ಕೆ ನನಗೆ ಧೈರ್ಯಸಾಲದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೂದ್ಯರಲ್ಲದವರನ್ನು ದೇವರಿಗೆ ವಿಧೇಯರಾಗುವುದಕ್ಕಾಗಿ ಕ್ರಿಸ್ತನು ನನ್ನ ಮೂಲಕ ಮಾತಿನಿಂದಲೂ ಕೃತ್ಯದಿಂದಲೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ದೆವಾಕ್ ಖಾಲ್ತಿ ಹೊವ್ನ್ ಚಲಿ ಸರ್ಕೆ ಕರುಕ್ ಕ್ರಿಸ್ತಾನ್ ಮಾಜೆ ವೈನಾ ಕಾಮ್ ಕರ್‍ಲ್ಯಾನಾಯ್. ತೆಚೆಸಾಟ್ನಿ ಮಿಯಾ ಸಗ್ಳೆ ಫೊಡುನ್ ಬೊಲ್ತಾ. ತೆನಿ ಹೆ ಸಗ್ಳೆ ಗೊಶ್ಟಿಯಾಂಚ್ಯಾ ಅನಿ ಕಾಮಾಂಚ್ಯಾ ವೈನಾ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.