ರೋಮಾಪುರದವರಿಗೆ 15:8 - ಪರಿಶುದ್ದ ಬೈಬಲ್8 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳು ಸತ್ಯವಾದುವುಗಳೆಂದು ತೋರಿಸುವುದಕ್ಕಾಗಿಯೂ ದೇವರು ಆ ವಾಗ್ದಾನಗಳನ್ನು ನೆರವೇರಿಸುತ್ತಾನೆ ಎಂಬುದನ್ನು ನಿರೂಪಿಸುವುದಕ್ಕಾಗಿಯೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯಾಕಂದರೆ ನಾನು ಹೇಳುವದೇನಂದರೆ - ಕ್ರಿಸ್ತನು ಪಿತೃಗಳಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಒಳಗಾದನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಕಶ್ಯಾಕ್ ಮಟ್ಲ್ಯಾರ್, ಮಿಯಾ ತುಮ್ಕಾ ಸಾಂಗ್ತಾ ಅಪ್ನಿ ವಿಶ್ವಾಸಿ ಮನುನ್ ದಾಕ್ವುಸಾಟ್ನಿ ದೆವಾನ್ ಅಮ್ಚ್ಯಾ ಅದ್ಲ್ಯಾ ಲೊಕಾಕ್ನಿ ದಿಲ್ಲ್ಯಾ ಗೊಸ್ಟಿಯಾ ಪುರಾ ಕರುಸಾಟ್ನಿ ಕ್ರಿಸ್ತಾಕ್ ಜುದೆವಾಂಚೊ ಸೆವಕ್ ಕರುನ್ ನೆಮ್ಲ್ಯಾನ್. ಅಧ್ಯಾಯವನ್ನು ನೋಡಿ |
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.