Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:9 - ಪರಿಶುದ್ದ ಬೈಬಲ್‌

9 ದೇವರು ತಮಗೆ ತೋರುವ ಕರುಣೆಗಾಗಿ ಯೆಹೂದ್ಯರಲ್ಲದವರು ಆತನನ್ನು ಮಹಿಮೆಪಡಿಸಲೆಂದು ಕ್ರಿಸ್ತನು ಯೆಹೂದ್ಯರ ಸೇವಕನಾದನು. ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ಆದ್ದರಿಂದ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ನಾನು ನಿನ್ನನ್ನು ಸ್ತುತಿಸುವೆನು: ನಾನು ನಿನ್ನ ಹೆಸರನ್ನು ಸಂಕೀರ್ತಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮತ್ತು ದೇವರು ತೋರಿದ ಕರುಣೆಗಾಗಿ ಅವರನ್ನು ಯೆಹೂದ್ಯರಲ್ಲದವರು ಸಹ ಸ್ತುತಿಸಲು ಸಾಧ್ಯವಾಗುವಂತೆ ಕ್ರಿಸ್ತಯೇಸು ಯೆಹೂದ್ಯರಿಗೆ ಅಧೀನರಾದರು. ಇದಕ್ಕೆ ಸಾದೃಶ್ಯವಾಗಿ ಪವಿತ್ರಗ್ರಂಥದಲ್ಲಿ ಹೀಗೆಂದು ಹೇಳಲಾಗಿದೆ: “ಈ ಕಾರಣದಿಂದ ನಾನು ಯೆಹೂದ್ಯರಲ್ಲದವರ ನಡುವೆ ನಿಮ್ಮನ್ನು ಕೊಂಡಾಡುವೆನು ನಿಮ್ಮ ನಾಮವನು ಸಂಕೀರ್ತಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜನಾಂಗಗಳಾದರೆ ಕಾರುಣ್ಯದ ನಿವಿುತ್ತ ದೇವರನ್ನು ಕೊಂಡಾಡುತ್ತಾರೆಂಬದೇ. ಇದಕ್ಕೆ ಸರಿಯಾಗಿ ಶಾಸ್ತ್ರದಲ್ಲಿಯೂ ಬರೆದದೆ. ಹೇಗಂದರೆ - ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಯೆಹೂದ್ಯರಲ್ಲದವರು ದೇವರ ಕರುಣೆಗಾಗಿ ದೇವರನ್ನು ಮಹಿಮೆ ಪಡಿಸುವಂತೆ ಹೀಗೆ ಮಾಡಿದರು. ಇದು ಪವಿತ್ರ ವೇದದಲ್ಲಿ ಹೀಗೆ ಬರೆದದ್ದನ್ನು ನೆರವೇರಿಸಿತು: “ಆದ್ದರಿಂದ ಯೆಹೂದ್ಯರಲ್ಲದವರ ನಡುವೆ ನಾನು ನಿನ್ನನ್ನು ಸ್ತುತಿಸುವೆನು, ನಾನು ನಿನ್ನ ನಾಮವನ್ನು ಸ್ತುತಿಸಿ ಹಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ ಹೆಚ್ಯಾಸಾಟ್ನಿ ಜುದೆವ್ ನ್ಹಯ್ ಹೊತ್ತಿ ಲೊಕಾ ಅಪ್ನಾಕ್ ದೆವಾನ್ ದಾಕ್ವಲ್ಲ್ಯಾ ದಯೆಚ್ಯಾಸಾಟಿ ದೆವಾಕ್ ಮಹಿಮಾ ದಿತ್ಯಾತ್; ಪವಿತ್ರ್ ಪುಸ್ತಕಾತ್ ಅಶೆ ಮಟಲ್ಲೆ ಹಾಯ್; ಹೆಚ್ಯಾಸಾಟ್ನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ತುಕಾ ಸ್ತುತಿಚಿ ಗಿತಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:9
6 ತಿಳಿವುಗಳ ಹೋಲಿಕೆ  

ಯೆಹೋವನೇ, ಈ ಕಾರಣದಿಂದಲೇ ನಾನು ಅನ್ಯ ಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ಈ ಕಾರಣದಿಂದಲೇ ನಿನ್ನ ಹೆಸರಿನ ಮೇಲೆ ಹಾಡುಗಳನ್ನು ಹಾಡುವೆನು.


ಯೆಹೋವನೇ, ಈ ಕಾರಣದಿಂದ ನಾನು ನಿನ್ನನ್ನು ಜನಾಂಗಗಳ ಮಧ್ಯದಲ್ಲಿ ಸ್ತುತಿಸುವೆನು; ನಿನ್ನ ಹೆಸರನ್ನು ಕುರಿತು ಹಾಡುಗಳನ್ನು ಹಾಡುವೆನು.


ದೇವರು ಕೇವಲ ಯೆಹೂದ್ಯರ ದೇವರಲ್ಲ. ಆತನು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾನೆ.


ಜನರು ಇದನ್ನು ನೋಡಿ ಆಶ್ಚರ್ಯಚಕಿತರಾದರು. ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟಿದ್ದಕ್ಕಾಗಿ ಜನರು ದೇವರನ್ನು ಕೊಂಡಾಡಿದರು.


ಒಂದು ಕಾಲದಲ್ಲಿ ನೀವು ಆತನಿಗೆ ವಿಧೇಯರಾಗಿರಲಿಲ್ಲ. ಈಗಲಾದರೋ ನೀವು ಕರುಣೆಯನ್ನು ಹೊಂದಿಕೊಂಡಿರಿ. ಏಕೆಂದರೆ ಅವರು (ಯೆಹೂದ್ಯರು) ಆತನಿಗೆ ಅವಿಧೇಯರಾದರು.


ನನ್ನ ಒಡೆಯನೇ, ಜನಾಂಗಗಳ ನಡುವೆ ನಿನ್ನನ್ನು ಕೊಂಡಾಡುವೆನು. ಎಲ್ಲಾ ದೇಶಗಳಲ್ಲಿ ನಿನಗೆ ಸ್ತುತಿಗೀತೆಗಳನ್ನು ಹಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು