ರೋಮಾಪುರದವರಿಗೆ 16:10 - ಪರಿಶುದ್ದ ಬೈಬಲ್10 ಅಪೆಲ್ಲನಿಗೆ ನನ್ನ ವಂದನೆ ತಿಳಿಸಿರಿ. ಅವನು ಕ್ರಿಸ್ತನನ್ನು ನಿಜವಾಗಿಯೂ ಪ್ರೀತಿಸುತ್ತಾನೆಂಬುದನ್ನು ಪರೀಕ್ಷಿಸಿ ನಿರೂಪಿಸಲಾಗಿದೆ. ಅರಿಸ್ತೊಬೂಲನ ಕುಟುಂಬದಲ್ಲಿ ಇರುವವರಿಗೆಲ್ಲ ನನ್ನ ವಂದನೆ ತಿಳಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕ್ರಿಸ್ತನ ಸೇವೆಯಲ್ಲಿ ಮೆಚ್ಚಿಕೆಗೆಪಾತ್ರನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕ್ರಿಸ್ತಯೇಸುವಿನ ಸೇವೆಯಲ್ಲಿ ಪರಿಷ್ಕೃತನಾದ ಅಪೆಲ್ಲನಿಗೆ ಮತ್ತು ಅರಿಸ್ತೊಬೂಲನ ಕುಟುಂಬದವರಿಗೆ ನನ್ನ ನೆನಪುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕ್ರಿಸ್ತನ ಸೇವೆಯಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕ್ರಿಸ್ತನಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆಗಳು, ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಕ್ರಿಸ್ತಾಚ್ಯಾಸಾಟ್ನಿ ಲೈ ಕಾಯ್- ಕಾಯ್ ಸೊಸಲ್ಲ್ಯಾ ಆಪೆಲ್ಲೆಸಾಕ್ ಅನಿ ಆರಿಸ್ತೊಬುಲಾಚ್ಯಾ ಕುಟ್ಮಾಚ್ಯಾಕ್ನಿ ಮಾಜೊ ನಮಸ್ಕಾರ್. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.