Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:12 - ಪರಿಶುದ್ದ ಬೈಬಲ್‌

12 ತ್ರುಫೈನಳಿಗೂ ತ್ರುಫೋಸಳಿಗೂ ನನ್ನ ವಂದನೆ ತಿಳಿಸಿರಿ. ಅವರು ಪ್ರಭುವಿಗಾಗಿ ಬಹು ಕಷ್ಟಪಟ್ಟು ಸೇವೆ ಮಾಡುತ್ತಿದ್ದಾರೆ. ನನ್ನ ಪ್ರಿಯ ಸಹೋದರಿಯಾದ ಪೆರ್ಸೀಸಳಿಗೂ ನನ್ನ ವಂದನೆ ತಿಳಿಸಿರಿ. ಆಕೆಯು ಸಹ ಪ್ರಭುವಿಗೋಸ್ಕರ ಬಹು ಕಷ್ಟಪಟ್ಟು ಸೇವೆ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ, ತ್ರುಫೋಸಳಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪ್ರಭು ಸೇವೆಯಲ್ಲಿ ನಿರತರಾದ ತ್ರುಫೈನಳಿಗೂ ತ್ರುಫೋಸಳಿಗೂ ಮತ್ತು ಪ್ರಭುವಿಗಾಗಿ ಶ್ರದ್ಧೆಯಿಂದ ಸೇವೆಸಲ್ಲಿಸಿದ ಪ್ರಿಯ ಪೆರ್ಸಿಸಳಿಗೂ ನನ್ನ ನೆನಕೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕರ್ತನ ಸೇವೆಯಲ್ಲಿ ದುಡಿಯುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು, ಕರ್ತನಲ್ಲಿ ತುಂಬಾ ಶ್ರಮಪಟ್ಟು ದುಡಿದಿರುವ ಪ್ರೀತಿಯ ಪೆರ್ಸೀಸಳಿಗೂ ನನ್ನ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಧನಿಯಾಚ್ಯಾ ಸೆವೆತ್ ಕಸ್ಟ್ ಕಾಡಲ್ಲ್ಯಾ ಅನಿ ಕಾಮ್ ಕರಲ್ಲ್ಯಾ ತ್ರಿಫೆನಾಕ್ ಅನಿ ತ್ರಿಪೊಸಾಕ್ ಮಾಜೊ ನಮಸ್ಕಾರ್ ತಸೆಚ್ ಧನಿಯಾಚ್ಯಾ ಶೆತಾತ್ ಲೈ ದಿಸ್ ರಾಬಲ್ಲ್ಯಾ ಮಾಜ್ಯಾ ದೊಸ್ತಾಕ್ ಪೆರ್ಸಿಸಾಕ್‍ಬಿ ಮಾಜೊ ನಮಸ್ಕಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:12
14 ತಿಳಿವುಗಳ ಹೋಲಿಕೆ  

ಈ ರೀತಿಯ ಮುಂದಾಳುಗಳನ್ನು ಮತ್ತು ಅವರೊಂದಿಗೆ ಕೆಲಸ ಮಾಡುವವರನ್ನು ಹಾಗೂ ಸೇವೆ ಮಾಡುವವರನ್ನು ಹಿಂಬಾಲಿಸಿರಿ.


ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


ಆದಕಾರಣವೇ, ನಾವು ಜೀವಸ್ವರೂಪನಾದ ದೇವರ ಮೇಲೆ ನಿರೀಕ್ಷೆಯಿಟ್ಟು ದುಡಿಯುತ್ತಿದ್ದೇವೆ ಮತ್ತು ಹೋರಾಡುತ್ತಿದ್ದೇವೆ. ಆತನು ಎಲ್ಲಾ ಜನರಿಗೆ ರಕ್ಷಕನಾಗಿದ್ದಾನೆ. ತನ್ನಲ್ಲಿ ನಂಬಿಕೆಯಿಡುವ ಜನರಿಗೆಲ್ಲಾ ಆತನು ವಿಶೇಷವಾದ ರೀತಿಯಲ್ಲಿ ರಕ್ಷಕನಾಗಿದ್ದಾನೆ.


ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.


ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ.


ಕ್ರಿಸ್ತನು ನನಗೆ ನೀಡಿರುವ ಬಲದಿಂದ ಇದಕ್ಕೋಸ್ಕರವೇ ಕೆಲಸ ಮಾಡುತ್ತೇನೆ ಮತ್ತು ಹೋರಾಡುತ್ತೇನೆ. ಆ ಬಲವೇ ನನ್ನ ಜೀವನದಲ್ಲಿ ಕಾರ್ಯಮಾಡುತ್ತಿದೆ.


ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)


ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು.


ನೀವು ನಿಮ್ಮ ಸ್ನೇಹಿತರಿಗೆ ಮಾತ್ರ ಒಳ್ಳೆಯವರಾಗಿದ್ದರೆ, ನೀವು ಬೇರೆಯವರಿಗಿಂತ ಉತ್ತಮರೇನೂ ಅಲ್ಲ. ದೇವರನ್ನರಿಯದ ಜನರು ಸಹ ತಮ್ಮ ಸ್ನೇಹಿತರಿಗೆ ಒಳ್ಳೆಯವರಾಗಿರುತ್ತಾರೆ.


ನನ್ನ ಸಂಬಂಧಿಕರಾದ ಹೆರೋಡಿಯೊನನಿಗೂ ಪ್ರಭುವಿಗೆ ಸೇರಿದವನಾದ ನಾರ್ಕಿಸ್ಸನ ಕುಟುಂಬದಲ್ಲಿರುವವರೆಲ್ಲರಿಗೂ ನನ್ನ ವಂದನೆ ತಿಳಿಸಿರಿ.


ರೂಫನಿಗೆ ನನ್ನ ವಂದನೆ ತಿಳಿಸಿರಿ. ಅವನು ಪ್ರಭುವಿನಲ್ಲಿ ವಿಶೇಷವಾದ ವ್ಯಕ್ತಿ. ಅವನ ತಾಯಿಗೂ ನನ್ನ ವಂದನೆ ತಿಳಿಸಿರಿ. ಆಕೆ ನನ್ನನ್ನು ಸ್ವಂತ ಮಗನಂತೆ ನೋಡಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು