Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:21 - ಪರಿಶುದ್ದ ಬೈಬಲ್‌

21 ನನ್ನ ಸಹೋದ್ಯೋಗಿಯಾದ ತಿಮೊಥೆಯನು ಮತ್ತು ನನ್ನ ಸಂಬಂಧಿಕರಾದ ಲೂಕ್ಯ, ಯಾಸೋನ ಮತ್ತು ಸೋಸಿಪತ್ರ ನಿಮಗೆ ವಂದನೆ ತಿಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಜೊತೆಕೆಲಸದವನಾದ ತಿಮೊಥೆಯನೂ, ನನ್ನ ಸಂಬಂಧಿಕರಾದ ಲೂಕ್ಯನೂ, ಯಾಸೋನನೂ ಮತ್ತು ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನ್ನ ಸಹೋದ್ಯೋಗಿಯಾದ ತಿಮೊಥೇಯನು ಮತ್ತು ನನ್ನ ಸ್ವದೇಶೀಯರಾದ ಲೂಕ್ಯ, ಯಾಸೋನನು, ಸೋಸಿಪತ್ರನು ಇವರುಗಳು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಜೊತೆಕೆಲಸದವನಾದ ತಿಮೊಥೆಯನೂ ನನ್ನ ಸ್ವಜನರಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನನ್ನ ಜೊತೆ ಕೆಲಸದವನಾಗಿರುವ ತಿಮೊಥೆಯನು ನಿಮಗೆ ವಂದನೆಗಳನ್ನು ತಿಳಿಸುತ್ತಾನೆ. ಹಾಗೆಯೇ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತಿಮೊತಿ ಮಾಜೊ ವಾಂಗ್ಡಿ ತುಮ್ಕಾ ನಮಸ್ಕಾರ್ ಮನುಲಾ, ಅನಿ ತಸೆಚ್ ಲುಸಿಯಸ್, ಜೆಸನ್ ಅನಿ ಸೊಸಿಪಾತೆರ್ ಮಾಜೆ ಜುದೆವ್ ಭಾವ್ ತುಮ್ಕಾ ನಮಸ್ಕಾರ್ ಮನುಲ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:21
24 ತಿಳಿವುಗಳ ಹೋಲಿಕೆ  

ಕೆಲವು ಜನರು ಅವನೊಂದಿಗಿದ್ದರು. ಅವರು ಯಾರೆಂದರೆ: ಬೆರೋಯ ಪಟ್ಟಣದ ಪುರ್ರನ ಮಗನಾದ ಸೋಪತ್ರನು, ಥೆಸಲೋನಿಕ ಪಟ್ಟಣದ ಆರಿಸ್ತಾರ್ಕ ಮತ್ತು ಸೆಕುಂದ, ದರ್ಬೆ ಪಟ್ಟಣದ ಗಾಯ ಮತ್ತು ತಿಮೊಥೆಯ, ಅಲ್ಲದೆ ಏಷ್ಯಾದ ತುಖಿಕ ಹಾಗು ತ್ರೊಫಿಮ.


ಆದರೆ ನಂಬದೆಹೋದ ಯೆಹೂದ್ಯರು ಅಸೂಯೆಗೊಂಡರು. ಅವರು ಪಟ್ಟಣದಲ್ಲಿದ್ದ ಕೆಲವು ಕೆಡುಕರಿಗೆ ಹಣಕೊಟ್ಟು ಕರೆದುಕೊಂಡು ಬಂದರು. ಈ ಕೆಡುಕರು ಅನೇಕ ಜನರನ್ನು ಒಟ್ಟುಗೂಡಿಸಿ, ಪಟ್ಟಣದಲ್ಲಿ ಗಲಭೆ ಮಾಡಿದರು. ಜನರು ಪೌಲ ಸೀಲರನ್ನು ಹುಡುಕುತ್ತಾ ಯಾಸೋನನ ಮನೆಗೆ ಹೋದರು. ಅವರು ಪೌಲ ಸೀಲರನ್ನು ಜನರ ಮುಂದೆ ಹೊರಗೆ ಎಳೆದುಕೊಂಡು ಬರಬೇಕೆಂದಿದ್ದರು.


ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.


ನನ್ನ ಸಂಬಂಧಿಕರಾದ ಹೆರೋಡಿಯೊನನಿಗೂ ಪ್ರಭುವಿಗೆ ಸೇರಿದವನಾದ ನಾರ್ಕಿಸ್ಸನ ಕುಟುಂಬದಲ್ಲಿರುವವರೆಲ್ಲರಿಗೂ ನನ್ನ ವಂದನೆ ತಿಳಿಸಿರಿ.


ಆಂದ್ರೋನಿಕನಿಗೆ ಮತ್ತು ಯೂನ್ಯನಿಗೆ ನನ್ನ ವಂದನೆ ತಿಳಿಸಿರಿ. ಅವರು ನನ್ನ ಸಂಬಂಧಿಕರಾಗಿದ್ದಾರೆ. ಅಲ್ಲದೆ ಅವರು ನನ್ನೊಂದಿಗೆ ಸೆರೆಮನೆಯಲ್ಲಿದ್ದರು. ದೇವರ ಅತ್ಯಂತ ಮುಖ್ಯಸೇವಕರುಗಳಲ್ಲಿ ಅವರೂ ಸೇರಿದ್ದಾರೆ. ಅವರು ನನಗಿಂತ ಮೊದಲೇ ಕ್ರಿಸ್ತನ ವಿಶ್ವಾಸಿಗಳಾಗಿದ್ದಾರೆ.


ನಮ್ಮ ಸಹೋದರನಾದ ತಿಮೊಥೆಯನಿಗೆ ಸೆರೆಮನೆಯಿಂದ ಬಿಡುಗಡೆ ಆಯಿತೆಂಬುದು ನಿಮಗೆ ತಿಳಿದಿರಲಿ. ಅವನು ನನ್ನ ಬಳಿಗೆ ಬೇಗನೆ ಬಂದರೆ, ನಾವಿಬ್ಬರೂ ನಿಮ್ಮನ್ನು ನೋಡಲು ಬರುತ್ತೇವೆ.


ತಿಮೊಥೆಯನೇ, ನೀನು ನನಗೆ ಪ್ರಿಯ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಲಭಿಸಲಿ.


ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.


ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.


ನೀನು ನಂಬಿಕೆ ಉಳ್ಳವನಾಗಿರುವುದರಿಂದ ನನಗೆ ನಿಜವಾದ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ಕೃಪೆಯೂ ಕರುಣೆಯೂ ಶಾಂತಿಯೂ ನಿನಗೆ ಲಭಿಸಲಿ.


ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲನು, ಸಿಲ್ವಾನನು ಮತ್ತು ತಿಮೊಥೆಯನು ಬರೆಯುವ ಪತ್ರ.


ಆದರೆ ತಿಮೊಥೆಯನು ನಿಮ್ಮಿಂದ ನಮ್ಮ ಬಳಿಗೆ ಹಿಂತಿರುಗಿ ಬಂದಾಗ, ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಬಗ್ಗೆ ಶುಭವಾರ್ತೆಯನ್ನು ನಮಗೆ ಹೇಳಿದನು. ನೀವು ಯಾವಾಗಲೂ ನಮ್ಮನ್ನು ಜ್ಞಾಪಿಸಿಕೊಳ್ಳುವಿರೆಂತಲೂ ನಮ್ಮನ್ನು ಮತ್ತೆ ನೋಡಲು ಅತ್ಯಾಸೆಯಿಂದ ಇದ್ದೀರೆಂತಲೂ ಅವನು ನಮಗೆ ತಿಳಿಸಿದನು. ಅದೇ ರೀತಿಯಲ್ಲಿ ನಾವೂ ನಿಮ್ಮನ್ನು ನೋಡಲು ಅತ್ಯಾಸೆಯಿಂದ ಇದ್ದೇವೆ.


ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.


ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. ದೇವರ ಕೃಪೆಯೂ ಶಾಂತಿಯೂ ನಿಮಗಿರಲಿ.


ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ.


ಯೇಸು ಕ್ರಿಸ್ತನ ದಾಸರಾದ ಪೌಲನು ತಿಮೊಥೆಯನು ಫಿಲಿಪ್ಪಿಯವರಿಗೆ ಬರೆಯುವ ಪತ್ರ. ಯೇಸು ಕ್ರಿಸ್ತನ ಮೂಲಕ ದೇವರ ಪರಿಶುದ್ಧ ಜನರಾಗಿರುವವರಿಗೂ ಎಲ್ಲಾ ಹಿರಿಯರಿಗೂ ಸಭಾಸೇವಕರಿಗೂ ನಾವು ಈ ಪತ್ರವನ್ನು ಬರೆಯತ್ತಿದ್ದೇವೆ.


ಸೀಲನು, ತಿಮೊಥೆಯನು ಮತ್ತು ನಾನು ನಿಮಗೆ ಬೋಧಿಸಿದ ದೇವರ ಮಗನಾದ ಯೇಸುಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ರೀತಿಯಲ್ಲಿರಲಿಲ್ಲ. ಕ್ರಿಸ್ತನಲ್ಲಿ ಯಾವಾಗಲೂ ಇರುವಂಥದ್ದು “ಹೌದು” ಎಂಬುದೇ.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನಾನು ದೇವರ ಚಿತ್ತಾನುಸಾರ ಅಪೊಸ್ತಲನಾಗಿದ್ದೇನೆ. ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಇಡೀ ಅಖಾಯ ಸೀಮೆಯಲ್ಲಿರುವ ದೇವಜನರೆಲ್ಲರಿಗೂ ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ತಿಮೊಥೆಯನೊಡನೆ ಸೇರಿ ಬರೆಯುತ್ತಿದ್ದೇನೆ.


ತಿಮೊಥೆ ಮತ್ತು ಎರಸ್ತ ಎಂಬುವರು ಪೌಲನ ಸಹಾಯಕರಾಗಿದ್ದರು. ಪೌಲನು ಅವರನ್ನು ಮಕೆದೋನಿಯ ದೇಶಕ್ಕೆ ಮುಂಚಿತವಾಗಿಯೇ ಕಳುಹಿಸಿದನು. ಪೌಲನು ಇನ್ನೂ ಸ್ವಲ್ಪಕಾಲ ಏಷ್ಯಾದಲ್ಲಿ ತಂಗಿದನು.


ಕೊರಿಂಥದಲ್ಲಿದ್ದ ಪೌಲನ ಬಳಿಗೆ ಸೀಲ ತಿಮೊಥೆಯರು ಮಕೆದೋನಿಯದಿಂದ ಬಂದರು. ಅನಂತರ, ಜನರಿಗೆ ಸುವಾರ್ತೆಯನ್ನು ತಿಳಿಸುವುದರಲ್ಲೇ ಪೌಲನು ತನ್ನ ಸಮಯವನ್ನೆಲ್ಲ ಕಳೆದನು. ಯೇಸುವೇ ಕ್ರಿಸ್ತನೆಂಬುದನ್ನು ಅವನು ಯೆಹೂದ್ಯರಿಗೆ ತೋರಿಸಿಕೊಟ್ಟನು.


ಆದ್ದರಿಂದ ವಿಶ್ವಾಸಿಗಳು ಪೌಲನನ್ನು ಸಮುದ್ರತೀರಕ್ಕೆ ಆ ಕೂಡಲೇ ಕಳುಹಿಸಿದರು. ಆದರೆ ಸೀಲ ತಿಮೊಥೆಯರು ಬೆರೋಯದಲ್ಲಿ ಉಳಿದುಕೊಂಡರು.


ಅವರು ನನ್ನ ಸಹೋದರ ಸಹೋದರಿಯರಾಗಿದ್ದಾರೆ; ಇಹಲೋಕದ ಕುಟುಂಬದವರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವುದಕ್ಕೂ ಸಿದ್ಧನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು