ರೋಮಾಪುರದವರಿಗೆ 2:10 - ಪರಿಶುದ್ದ ಬೈಬಲ್10 ಆದರೆ ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬರಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಮಹಿಮೆಯನ್ನು, ಘನತೆಯನ್ನು ಮತ್ತು ಶಾಂತಿಯನ್ನು ಕೊಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಂತೆಯೇ, ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ಸತ್ಕಾರ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಮಹಿಮೆ, ಗೌರವ, ಶಾಂತಿ ಲಭಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದರೆ ಒಳ್ಳೆದನ್ನು ನಡಿಸುವ ಪ್ರತಿಯೊಬ್ಬನಿಗೆ ಪ್ರಭಾವವೂ ಮಾನವೂ ಮನಶ್ಶಾಂತಿಯೂ ಉಂಟಾಗುವವು - ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ ಸಹ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಒಳ್ಳೆಯದನ್ನು ನಡೆಸುವ ಪ್ರತಿಯೊಬ್ಬನಿಗೆ ಮಹಿಮೆಯೂ ಗೌರವವೂ ಸಮಾಧಾನವೂ ಉಂಟಾಗುತ್ತವೆ. ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಖರೆ ದೆವ್ ಬರೆ ಕರಲ್ಲ್ಯಾ ಸಗ್ಳ್ಯಾಕ್ನಿ ಪಯ್ಲೆ ಜುದೆವಾಕ್ನಿ ಅನಿ ತಸೆಚ್ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಮಹಿಮಾ, ಮಾನ್, ಅನಿ ಶಾಂತಿ ದಿತಾ. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.