ರೋಮಾಪುರದವರಿಗೆ 2:13 - ಪರಿಶುದ್ದ ಬೈಬಲ್13 ಧರ್ಮಶಾಸ್ತ್ರವನ್ನು ಕೇಳಿದ ಮಾತ್ರಕ್ಕೆ ಜನರು ನೀತಿವಂತರಾಗುವುದಿಲ್ಲ. ಧರ್ಮಶಾಸ್ತ್ರ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗುವ ಜನರನ್ನು ಧರ್ಮಶಾಸ್ತ್ರವು ನೀತಿವಂತರನ್ನಾಗಿ ಮಾಡುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಧರ್ಮಶಾಸ್ತ್ರವನ್ನು ಆಲಿಸಿದ ಮಾತ್ರಕ್ಕೆ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಸಾಧ್ಯವಿಲ್ಲ. ಅದನ್ನು ಆಲಿಸುವುದರ ಜೊತೆಗೆ ಪಾಲಿಸಲೂ ಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಧರ್ಮಶಾಸ್ತ್ರ ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯಾರೂ ನಿಯಮವನ್ನು ಕೇಳಿದ ಮಾತ್ರಕ್ಕೆ ದೇವರ ಮುಂದೆ ನೀತಿವಂತರಾಗುವುದಿಲ್ಲ. ಆದರೆ ನಿಯಮಕ್ಕೆ ವಿಧೇಯರಾಗುವವರೇ ನೀತಿವಂತರಾಗುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖಾಲಿ ಖಾಯ್ದೆ ಆಯ್ಕಲ್ಲ್ಯಾ ವೈನಾ ಲೊಕಾ ದೆವಾಚ್ಯಾ ನದ್ರೆತ್ ಭಕ್ತಿವಂತ್ ಹೊಯ್‍ನ್ಯಾತ್, ಖಾಯ್ದ್ಯಾತ್ನಿ ಕಾಯ್ ಸಾಂಗಲ್ಲೆ ಹಾಯ್ ತೆ ಪಾಳಲ್ಲ್ಯಾ ವೈನಾ ಲೊಕಾ ನಿತಿವಂತ್ ಹೊತ್ಯಾತ್. ಅಧ್ಯಾಯವನ್ನು ನೋಡಿ |
ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.