ರೋಮಾಪುರದವರಿಗೆ 2:15 - ಪರಿಶುದ್ದ ಬೈಬಲ್15 ಧರ್ಮಶಾಸ್ತ್ರದ ಆಜ್ಞಾವಿಧಿಗಳಿಗನುಸಾರವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಮ್ಮ ಹೃದಯಗಳು ಬಲ್ಲವೆಂದು ಅವರು ತಮ್ಮ ನಡತೆಯಿಂದಲೇ ತೋರ್ಪಡಿಸುತ್ತಾರೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಧರ್ಮಶಾಸ್ತ್ರದ ವಿಧಿನಿಯಮಗಳು ಅವರ ಹೃದಯಗಳಲ್ಲಿ ಲಿಖಿತವಾಗಿವೆಯೆಂದು ಅವರ ನಡತೆಯಿಂದಲೇ ವೇದ್ಯವಾಗುತ್ತದೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹೇಗಂದರೆ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದದೆ ಎಂಬದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಯೋಚನೆಗಳು ವಾದಿಪ್ರತಿವಾದಿಗಳಂತೆ - ಇದು ತಪ್ಪೆಂದು ತಪ್ಪಲ್ಲವೆಂದು ಸೂಚಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರು ತಮ್ಮ ನಡತೆಯಿಂದಲೇ ನಿಯಮವು ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಾಕ್ಷಿಕೊಡುತ್ತದೆ. ಅವರ ಯೋಚನೆಗಳು ಒಂದಕ್ಕೊಂದು ಇದು ತಪ್ಪು ಅಥವಾ ತಪ್ಪಲ್ಲ ಎಂಬುದನ್ನು ಸೂಚಿಸುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತೆಂಚಿ ಚಲ್ನುಕುಚ್ ಖಾಯ್ದೆ ತೆಂಚ್ಯಾ ಮನಾತ್ನಿ ಲಿವಲ್ಲೆ ಹಾತ್ ಮನುನ್ ದಾಕ್ವುನ್ ದಿತ್ಯಾತ್, ತೆಂಚಿ ಮನಾಬಿ ಹೆ ಖರೆ ಮನುನ್ ದಾಕ್ವುನ್ ದಿತ್ಯಾತ್, ತೆಂಚ್ಯಾ ಯವ್ಜನ್ಯಾ ತೆಂಕಾ ಕನ್ನಾ-ಕನ್ನಾ ಚುಕ್ ಹಾಯ್ ನಾಹೊಲ್ಯಾರ್ ಸಮಾ ನಾ ಮನುನ್ ಸಾಂಗುನ್ ದಿತ್ಯಾತ್. ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.