ರೋಮಾಪುರದವರಿಗೆ 2:22 - ಪರಿಶುದ್ದ ಬೈಬಲ್22 ಜನರು ವ್ಯಭಿಚಾರವೆಂಬ ಪಾಪವನ್ನು ಮಾಡಕೂಡದೆಂದು ನೀನು ಹೇಳುವೆ, ಆದರೆ ನೀನೇ ಆ ಪಾಪಮಾಡಿ ಅಪರಾಧಿಯಾಗಿರುವೆ. ನೀನು ವಿಗ್ರಹಗಳನ್ನು ದ್ವೇಷಿಸುವೆ, ಆದರೆ ನೀನೇ ಅವುಗಳನ್ನು ಗುಡಿಗಳಿಂದ ಕದಿಯುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹಾದರ ಮಾಡಬಾರದೆಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತಿಯೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ವ್ಯಭಿಚಾರ ಮಾಡಬಾರದು” ಎಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೇನು? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತೀಯೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹಾದರ ಮಾಡಬಾರದೆಂದು ಹೇಳುವ ನೀನು ಹಾದರ ಮಾಡುತ್ತೀಯೋ? ಮೂರ್ತಿಗಳಲ್ಲಿ ಅಸಹ್ಯಪಡುತ್ತಿರುವ ನೀನು ದೇವಸ್ಥಾನದಲ್ಲಿ ಕಳ್ಳತನ ಮಾಡುತ್ತೀಯೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳಲ್ಲಿ ಅಸಹ್ಯಪಡುವ ನೀನು ದೇವಾಲಯಗಳನ್ನು ದೋಚುತ್ತೀಯೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತಿಯಾ “ವೆಭಿಚಾರ್ ಕರುನಕೊ” ಮನ್ತೆಯ್, ಖರೆ ತಿಯಾ ವೆಭಿಚಾರ್ ಕರಿನೆ ಕಾಯ್? ತಿಯಾ ಮುರ್ತಿಯಾಕ್ನಿ ವಿರೊದ್ ಕರ್‍ತೆ, ಖರೆ ತಿಯಾ ಗುಡಿಯಾನಿತ್ಲೆ ಲುಟಿ ನ್ಹಯ್ ಕಾಯ್? ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.
ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸುವನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ.