25 ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.
25 ನೀನು ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ನಡೆದರೆ, ನೀನು ಮಾಡಿಸಿಕೊಂಡಿರುವ ಸುನ್ನತಿಗೆ ಅರ್ಥವಿದೆ. ಆದರೆ ನಿನ್ನ ನಡತೆ ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾಗಿದ್ದರೆ ನೀನು ಸುನ್ನತಿ ಮಾಡಿಸಿಕೊಂಡಿದ್ದರೂ ಮಾಡಿಸಿಕೊಳ್ಳದಂತೆಯೇ ಸರಿ.
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”
ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!
ಯೆಹೂದ್ಯರಾದ ನಿಮಗೆ ಲಿಖಿತ ಧರ್ಮಶಾಸ್ತ್ರವಿದೆ ಮತ್ತು ಸುನ್ನತಿಯಾಗಿದೆ. ಆದರೆ ನೀವು ಧರ್ಮಶಾಸ್ತ್ರವನ್ನು ಮೀರಿ ನಡೆಯುತ್ತೀರಿ. ಹೀಗಿರಲು, ದೇಹದಲ್ಲಿ ಸುನ್ನತಿಯನ್ನು ಹೊಂದಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುವ ಜನರು ನಿಮ್ಮನ್ನು ಅಪರಾಧಿಗಳೆಂದು ತೋರ್ಪಡಿಸುತ್ತಾರೆ.