Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:9 - ಪರಿಶುದ್ದ ಬೈಬಲ್‌

9 ಕೆಟ್ಟದ್ದನ್ನು ನಡೆಸುವ ಪ್ರತಿಯೊಬ್ಬ ವ್ಯಕ್ತಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಕಷ್ಟಸಂಕಟಗಳನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೆಹೂದ್ಯರನ್ನು ಮೊದಲ್ಗೊಂಡು, ಇತರರಿಗೂ ಪಾಪಕೃತ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಕಷ್ಟಸಂಕಟಗಳು ಕಾದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕೆಟ್ಟದ್ದನ್ನು ನಡಿಸುವ ಪ್ರತಿಯೊಬ್ಬ ನರಪ್ರಾಣಿಗೆ ಕಷ್ಟವೂ ಸಂಕಟವೂ ಬರುವವು - ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ ಸಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕೆಟ್ಟದ್ದನ್ನು ನಡೆಸುವ ಪ್ರತಿ ಮನುಷ್ಯನಿಗೆ ಕಷ್ಟವೂ ಸಂಕಟವೂ ಬರುತ್ತವೆ, ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ವಾಯ್ಟ್ ಅಸಲ್ಲೆ ಕರ್‍ತಲ್ಯಾ ಸಗ್ಳ್ಯಾಕ್ನಿ ಪಯ್ಲೆ ಜುದೆವಾಕ್ನಿ ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ದುಕ್ ಅನಿ ಸಂಕಟ್ ರ್‍ಹಾತಾಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:9
35 ತಿಳಿವುಗಳ ಹೋಲಿಕೆ  

ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?


ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.


ಎಲ್ಲಾ ಪ್ರಾಣಗಳು ನನ್ನವೇ. ತಂದೆಯ ಪ್ರಾಣವೂ ಮಗನ ಪ್ರಾಣವೂ ನನ್ನವೇ. ಪಾಪಮಾಡುವವನು ಮಾತ್ರ ಸಾಯುವನು.


ದೇವರು ಯೋಗ್ಯವಾದುದ್ದನ್ನೇ ಮಾಡುತ್ತಾನೆ. ನಿಮಗೆ ತೊಂದರೆ ಕೊಡುವ ಜನರಿಗೆ ದೇವರು ತೊಂದರೆ ಕೊಡುತ್ತಾನೆ.


ನಾವೇ ಆ ಜನರು. ದೇವರಿಂದ ಕರೆಯಲ್ಪಟ್ಟ ಜನರು ನಾವೇ. ದೇವರು ನಮ್ಮನ್ನು ಯೆಹೂದ್ಯರೊಳಗಿಂದ ಮತ್ತು ಯೆಹೂದ್ಯರಲ್ಲದವರೊಳಗಿಂದ ಕರೆದನು.


ಆದರೆ ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬರಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಮಹಿಮೆಯನ್ನು, ಘನತೆಯನ್ನು ಮತ್ತು ಶಾಂತಿಯನ್ನು ಕೊಡುವನು.


ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”


ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.


ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.


ಏಕೆಂದರೆ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಒಬ್ಬನೇ ಪ್ರಭು. ತನ್ನಲ್ಲಿ ನಂಬಿಕೆಯಿಡುವ ಜನರೆಲ್ಲರಿಗೆ ಪ್ರಭುವು ಅನೇಕ ಆಶೀರ್ವಾದಗಳನ್ನು ಕೊಡುತ್ತಾನೆ.


“ದೇವರು ತನ್ನ ರಕ್ಷಣೆಯನ್ನು ಯೆಹೂದ್ಯರಲ್ಲದವರಿಗೆ ಕಳುಹಿಸಿದ್ದಾನೆ. ಅವರು ಅದಕ್ಕೆ ಕಿವಿಗೊಡುವರು. ಯೆಹೂದ್ಯರಾದ ನಿಮಗೆ ಇದು ತಿಳಿದಿರಲಿ!”


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಧಾನರಾಗಿದ್ದವರನ್ನು ಕರೆಯಿಸಿದನು. ಅವರು ಬಂದು ಒಟ್ಟಾಗಿ ಸೇರಿದಾಗ ಪೌಲನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ನಮ್ಮ ಜನರಿಗೂ ನಮ್ಮ ಪಿತೃಗಳ ಸಂಪ್ರದಾಯಗಳಿಗೂ ವಿರುದ್ಧವಾಗಿ ನಾನೇನೂ ಮಾಡಿಲ್ಲ. ಆದರೆ ನನ್ನನ್ನು ಜೆರುಸಲೇಮಿನಲ್ಲಿ ಬಂಧಿಸಿ ರೋಮಿನವರಿಗೆ ಒಪ್ಪಿಸಲಾಗಿದೆ.


ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.


ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.


“ನನ್ನ ಸಹೋದರರೇ, ಅಬ್ರಹಾಮನ ಕುಟುಂಬದ ಪುತ್ರರೇ, ನಿಜದೇವರನ್ನು ಆರಾಧಿಸುತ್ತಿರುವ ಯೆಹೂದ್ಯರಲ್ಲದವರೇ, ಕೇಳಿರಿ! ಈ ರಕ್ಷಣೆಯ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.


ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?


“ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದ್ದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”


ಅದನ್ನು ನೀನು ಪರಲೋಕದಿಂದ ಆಲೈಸಿ ನಿನ್ನ ಸೇವಕರ ನ್ಯಾಯತೀರಿಸು. ಕೇಡುಮಾಡಿದವನನ್ನು ಶಿಕ್ಷಿಸು; ಅವನು ಇನ್ನೊಬ್ಬನಿಗೆ ಮಾಡಿದ ದುಷ್ಕೃತ್ಯವು ಅವನಿಗೇ ತಟ್ಟುವಂತೆ ಮಾಡು. ಯಾವನು ನಿರಪರಾಧಿಯೆಂಬುದನ್ನು ತೋರಿಸಿಕೊಟ್ಟು ಅವನ ನೀತಿಗೆ ತಕ್ಕಂತೆ ಪ್ರತಿಫಲ ಕೊಡು.


ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಆವರಿಸಿಕೊಳ್ಳುವುದು.


ಒಳ್ಳೆಯವರ ಬಯಕೆ ಅವರನ್ನು ಕ್ಷೇಮಕ್ಕೆ ನಡೆಸುತ್ತದೆ. ಆದರೆ ದುಷ್ಟರ ಆಕಾಂಕ್ಷೆ ಅವರನ್ನು ದಂಡನೆಗೆ ನಡೆಸುತ್ತದೆ.


ಅದಕ್ಕಾಗಿ ನಾನು ಅವರಿಗೆ ನನ್ನ ಕೋಪವನ್ನು ತೋರಿಸುವೆನು. ಅವರ ದುಷ್ಟತನಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರೇ ಅದಕ್ಕೆ ಜವಾಬ್ದಾರರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಕ್ರಿಸ್ತನ ಪ್ರೀತಿಯಿಂದ ಯಾವುದು ನಮ್ಮನ್ನು ಬೇರ್ಪಡಿಸಬಲ್ಲದು? ಕಷ್ಟಸಂಕಟಗಳಾಗಲಿ ಇಕ್ಕಟ್ಟುಗಳಾಗಲಿ ಹಿಂಸೆಯಾಗಲಿ ಆಹಾರವಿಲ್ಲದಿರುವುದಾಗಲಿ ಬಟ್ಟೆಯಿಲ್ಲದಿರುವುದಾಗಲಿ ಅಪಾಯವಾಗಲಿ ಮರಣವಾಗಲಿ ನಮ್ಮನ್ನು ಕ್ರಿಸ್ತನ ಪ್ರೀತಿಯಿಂದ ಬೇರ್ಪಡಿಸಬಲ್ಲವೇ? ಇಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು