ರೋಮಾಪುರದವರಿಗೆ 3:22 - ಪರಿಶುದ್ದ ಬೈಬಲ್22 ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ದೆವ್ ಲೊಕಾಕ್ನಿ ಜೆಜು ಕ್ರಿಸ್ತಾ ವರ್‍ತಿ ತೆಂಕಾ ಹೊತ್ತ್ಯಾ ವಿಶ್ವಾಸಾಚ್ಯಾ ವೈನಾ ತೆನಿ ಭಕ್ತಿವಂತ್ ಮನುನ್ ಠರ್‍ವುತಾ. ದೆವಾನ್ ಹೆ ಕ್ರಿಸ್ತಾ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಕರ್‍ಲ್ಯಾನಾಯ್, ಕಶ್ಯಾಕ್ ಮಟ್ಲ್ಯಾರ್, ಥೈ ಕಸ್ಲೊಬಿ ಅಂತರ್ ನಾ. ಅಧ್ಯಾಯವನ್ನು ನೋಡಿ |
ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.
ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.