Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:25 - ಪರಿಶುದ್ದ ಬೈಬಲ್‌

25 ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಈತನು ತನ್ನ ರಕ್ತವನ್ನು ಸುರಿಸಿ ನಂಬಿಕೆಯಿದ್ದವರಿಗಾಗಿ ಕೃಪಾಧಾರವಾಗಬೇಕೆಂದು ದೇವರು ಈತನನ್ನು ಮುಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆನಿ ವೊತಲ್ಲ್ಯಾ ಅಪ್ನಾಚ್ಯಾ ರಗ್ತಾ ವೈನಾ ತೆಚೆ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಂಚ್ಯಾ ಪಾಪಾಂಚಿ ಮಾಪಿ ಹೊಂವ್ದಿತ್ ಮನುನ್ ದೆವಾನ್ ತೆಕಾಚ್ ಒಪ್ಸುನ್ ದಿಲ್ಯಾನ್. ಫಾಟ್ಲ್ಯಾ ಕಾಲಾತ್ ದೆವಾನ್ ಮಾನ್ಸಾಕ್ನಿ ತೆಂಚ್ಯಾ ಪಾಪಾಂಚಿ ಶಿಕ್ಷಾ ಲಾವಿನಸ್ತನಾ ಸೊಸುನ್ ಘೆವ್ನ್ ಗೆಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:25
51 ತಿಳಿವುಗಳ ಹೋಲಿಕೆ  

ದೇವರಿಗೆ ನಮ್ಮ ಮೇಲಿರುವ ಪ್ರೀತಿಯೇ ನಿಜವಾದ ಪ್ರೀತಿ. ನಮಗೆ ದೇವರ ಮೇಲಿರುವ ಪ್ರೀತಿ ನಿಜವಾದ ಪ್ರೀತಿಯಲ್ಲ. ನಮ್ಮ ಪಾಪ ನಿವಾರಣೆಗಾಗಿ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು.


ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.


ನಾವು ಕ್ರಿಸ್ತನ ರಕ್ತದ ಮೂಲಕವಾಗಿ ನೀತಿವಂತರಾಗಿದ್ದೇವೆ. ಆದ್ದರಿಂದ ಆತನ ಮೂಲಕ ದೇವರ ಕೋಪದಿಂದ ಖಂಡಿತವಾಗಿ ತಪ್ಪಿಸಿಕೊಳ್ಳುತ್ತೇವೆ.


ಹಿಂದಿನ ಕಾಲದಲ್ಲಿ ಜನರು ದೇವರನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ದೇವರು ಅದಕ್ಕೆ ಲಕ್ಷ್ಯಕೊಡಲಿಲ್ಲ. ಈಗಲಾದರೋ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವವರು ಪಶ್ಚಾತ್ತಾಪಪಡಬೇಕೆಂದು ಆತನು ಆಜ್ಞಾಪಿಸುತ್ತಾನೆ.


ಏಕೆಂದರೆ ಅವರ ಪಾಪಗಳನ್ನು ತೆಗೆದುಹಾಕಲು ಹೋರಿಗಳ ಮತ್ತು ಹೋತಗಳ ರಕ್ತಕ್ಕೆ ಸಾಧ್ಯವಿರಲಿಲ್ಲ.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.


ಪ್ರತಿಯೊಂದು ತಲೆಮಾರಿನವರೂ ತಮ್ಮ ಮಕ್ಕಳಿಗೆ ಆತನ ಒಳ್ಳೆಯ ಕಾರ್ಯಗಳ ಬಗ್ಗೆ ಹೇಳುವರು.


“ಬಳಿಕ ಆರೋನನು ಜನರಿಗೋಸ್ಕರವಾಗಿರುವ ಪಾಪಪರಿಹಾರಕ ಪಶುವಾದ ಹೋತವನ್ನು ವಧಿಸಬೇಕು. ಆರೋನನು ಈ ಹೋತದ ರಕ್ತವನ್ನು ತೆರೆಯ ಹಿಂಭಾಗದಲ್ಲಿರುವ ಕೋಣೆಗೆ ತೆಗೆದುಕೊಂಡು ಬರಬೇಕು. ಆರೋನನು ಹೋರಿಯ ರಕ್ತದಿಂದ ಮಾಡಿದಂತೆ ಹೋತದ ರಕ್ತದಿಂದಲೂ ಮಾಡಬೇಕು. ಆರೋನನು ಹೋತದ ರಕ್ತವನ್ನು ಕೃಪಾಸನದ ಮೇಲೂ ಮತ್ತು ಕೃಪಾಸನದ ಮುಂಭಾಗದಲ್ಲಿಯೂ ಚಿಮಿಕಿಸಬೇಕು.


ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.


ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ಆ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಅವರು ಹಾಗೆ ಒಪ್ಪಿಕೊಂಡಿದ್ದರಿಂದ ತಾವು ಸ್ವದೇಶಕ್ಕಾಗಿ ಕಾದಿರುವುದಾಗಿ ತೋರ್ಪಡಿಸಿಕೊಂಡಂತಾಯಿತು.


ನಿನ್ನ ನೀತಿಯು ಶಾಶ್ವತವಾದದ್ದು. ನಿನ್ನ ಉಪದೇಶಗಳು ನಂಬಿಕೆಗೆ ಯೋಗ್ಯವಾಗಿವೆ.


ನಾವು ಪಾಪಮಾಡಿಲ್ಲವೆಂದು ಹೇಳಿದರೆ ದೇವರನ್ನೇ ಸುಳ್ಳುಗಾರನನ್ನಾಗಿ ಮಾಡುವವರಾಗಿದ್ದೇವೆ ಮತ್ತು ದೇವರ ವಾಕ್ಯವನ್ನು ಒಪ್ಪಿಕೊಳ್ಳದವರಾಗಿದ್ದೇವೆ.


ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಿದನು. ಇಸಾಕನನ್ನು ಯಜ್ಞವಾಗಿ ಸಮರ್ಪಿಸೆಂದು ದೇವರು ಅವನಿಗೆ ಹೇಳಿದನು. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ ವಿಧೇಯನಾದನು. ದೇವರು ಅವನಿಗೆ, “ನಿನ್ನ ಸಂತತಿಗಳವರು ಇಸಾಕನ ಮೂಲಕ ಬರುವರು” ಎಂದು ಮೊದಲೇ ವಾಗ್ದಾನ ಮಾಡಿದ್ದನು. ಆದರೂ ತನ್ನ ಒಬ್ಬನೇ ಮಗನನ್ನು ಅರ್ಪಿಸಲು ಅವನು ಸಿದ್ಧನಾಗಿದ್ದನು.


ಆ ಪೆಟ್ಟಿಗೆಯ ಮೇಲ್ಗಡೆ ದೇವರ ವೈಭವವನ್ನು ತೋರ್ಪಡಿಸುವ ಕೆರೂಬಿಗಳಿದ್ದವು. ಈ ಕೆರೂಬಿಗಳು ಕೃಪಾಸನವನ್ನು ಆಚ್ಛಾದಿಸಿಕೊಂಡಿದ್ದವು. ಆದರೆ ಇವುಗಳ ಕುರಿತು ಎಲ್ಲವನ್ನೂ ನಾವು ಈಗ ಹೇಳಲು ಸಾಧ್ಯವಿಲ್ಲ.


ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ಇಷ್ಟು ಮಾತ್ರವಲ್ಲದೆ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಾವು ದೇವರಲ್ಲಿ ಹರ್ಷಿಸುತ್ತೇವೆ. ಈಗ ನಾವು ದೇವರ ಸ್ನೇಹಿತರಾಗಿರುವುದು ಯೇಸುವಿನಿಂದಲೇ.


ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ.


ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.


ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು.


ಹೀಗಾಗುತ್ತದೆ ಎಂದು ದೇವರು ಮೊದಲೇ ತಿಳಿಸಿದ್ದನು. ಕ್ರಿಸ್ತನು ಶ್ರಮೆ ಅನುಭವಿಸಿ ಸಾಯುವನೆಂದು ದೇವರು ತನ್ನ ಪ್ರವಾದಿಗಳ ಮೂಲಕ ಮೊದಲೇ ತಿಳಿಸಿದ್ದನ್ನು ಹೀಗೆ ನೆರವೇರಿಸಿದ್ದಾನೆ.


‘ಆದಿಯಿಂದಲೂ ಈ ಕಾರ್ಯಗಳನ್ನು ತಿಳಿಯಪಡಿಸಲಾಗಿದೆ.’


ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನನ್ನು ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆ.


ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.


ಆಕಾಶಗಳೇ, ಆತನ ನೀತಿಯ ಕುರಿತು ಹೇಳಿರಿ! ದೇವರ ಮಹಿಮೆಯನ್ನು ಪ್ರತಿಯೊಬ್ಬನೂ ಕಾಣಲಿ!


ದೇವರೊಬ್ಬನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುವುದು.


ನಿನ್ನ ನೀತಿಕಾರ್ಯಗಳ ಕುರಿತು ನಾನು ಹೇಳಿದೆನು. ಅವುಗಳನ್ನು ನನ್ನ ಹೃದಯದಲ್ಲಿ ಬಚ್ಚಿಟ್ಟುಕೊಳ್ಳಲಿಲ್ಲ. ನಿನ್ನ ನಂಬಿಗಸ್ತಿಕೆಯನ್ನೂ ರಕ್ಷಣೆಯನ್ನೂ ನಾನು ಅವರಿಗೆ ತಿಳಿಸುವೆನು. ನಿನ್ನ ಪ್ರೀತಿಯನ್ನೂ ನಿನ್ನ ಸತ್ಯತೆಯನ್ನೂ ಮಹಾಸಭೆಯಲ್ಲಿ ಹೇಳುವೆನು.


ಆದರೆ ಚೀಟು ಹಾಕುವುದರ ಮೂಲಕ ಅಜಾಜೇಲನಿಗಾಗಿ ಆರಿಸಲ್ಪಟ್ಟ ಹೋತವನ್ನು ಜೀವಂತವಾಗಿ ಯೆಹೋವನ ಸನ್ನಿಧಿಗೆ ತರಬೇಕು ಮತ್ತು ಈ ಹೋತವನ್ನು ಮರುಭೂಮಿಯಲ್ಲಿರುವ ಅಜಾಜೇಲನಿಗೆ ಕಳುಹಿಸಬೇಕು. ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಲು ಹೀಗೆ ಮಾಡಬೇಕು.


ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು. ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ.


“ಹಿಂದಿನ ಕಾಲದಲ್ಲಿ ದೇವರು ಎಲ್ಲಾ ಜನಾಂಗಗಳನ್ನು ಅವುಗಳ ಇಷ್ಟಕ್ಕನುಸಾರವಾಗಿ ನಡೆಯಲು ಬಿಟ್ಟುಕೊಟ್ಟನು.


ಹೀಗಿರಲಾಗಿ, ಆದಾಮನ ಒಂದು ಪಾಪವು ಎಲ್ಲಾ ಜನರಿಗೆ ಮರಣದಂಡನೆಯನ್ನು ತಂದಿತು. ಆದರೆ ಅದೇ ರೀತಿಯಲ್ಲಿ, ಕ್ರಿಸ್ತನು ಮಾಡಿದ ಒಂದೇ ಒಳ್ಳೆಯ ಕಾರ್ಯವು, ಎಲ್ಲಾ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ. ಮತ್ತು ಆ ಜನರಿಗೆ ಅದು ನಿಜವಾದ ಜೀವವನ್ನು ತರುತ್ತದೆ.


ಹಳೆಯ ಹುಳಿಯನ್ನೆಲ್ಲಾ (ಪಾಪ) ತೆಗೆದುಹಾಕಿರಿ. ಆಗ ನೀವು ಹೊಸ ಹಿಟ್ಟಾಗುವಿರಿ. ನೀವು ನಿಜವಾಗಿಯೂ ಹುಳಿರಹಿತವಾದ ಪಸ್ಕದ ರೊಟ್ಟಿಯಾಗಿದ್ದೀರಿ. ಹೌದು, ನಮ್ಮ ಪಸ್ಕದ ಕುರಿಮರಿಯಾದ ಕ್ರಿಸ್ತನು ಆಗಲೇ ಕೊಲ್ಲಲ್ಪಟ್ಟಿದ್ದಾನೆ.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.


ಹೌದು, ಒಂದು ಕಾಲದಲ್ಲಿ ನೀವು ದೇವರಿಗೆ ಬಹು ದೂರವಾಗಿದ್ದಿರಿ. ಆದರೆ ಈಗ ನೀವು ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೇವರಿಗೆ ಸಮೀಪಸ್ಥರಾದಿರಿ.


ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು