ರೋಮಾಪುರದವರಿಗೆ 3:26 - ಪರಿಶುದ್ದ ಬೈಬಲ್26 ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯೂ ತಾವು ಸತ್ಯಸ್ವರೂಪರು ಮತ್ತು ನ್ಯಾಯವಂತರು ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಈ ರೀತಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ದೇವರು ಹಿಂದಿನ ಕಾಲದ ಪಾಪಗಳನ್ನು ದಂಡಿಸದೆ ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿಸ್ವರೂಪನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವವನಾಗಿಯೂ ಕಾಣಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಈಗಿನ ಕಾಲದಲ್ಲಿ ದೇವರು ತಮ್ಮ ನೀತಿಯನ್ನು ತೋರ್ಪಡಿಸಲೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕಾಗಿಯೂ ದೀರ್ಘಶಾಂತರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಖರೆ ಹ್ಯಾ ಎಳಾರ್ ತೊ ಅಪ್ನಿ ಖರೆಚ್ ಖರ್ಯ್ಯಾ ವಾಟೆನ್ ಚಲ್ನಾರೊ, ಅನಿ ಕ್ರಿಸ್ತಾ ವರ್‍ತಿ ವಿಶ್ವಾಸ್ ಥವ್ತಲ್ಯಾಕ್ನಿ ಅಪ್ನಿ ನಿತಿವಂತ್ ಮನುನ್ ಠರ್ವುತಾ ಮನುನ್ ದಾಕ್ವುನ್ ದಿತಾ. ಅಧ್ಯಾಯವನ್ನು ನೋಡಿ |
ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!
ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.