ರೋಮಾಪುರದವರಿಗೆ 3:27 - ಪರಿಶುದ್ದ ಬೈಬಲ್27 ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಹೀಗಿರುವಲ್ಲಿ ಮಾನವನು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವಿದೆಯೆ? ಇಲ್ಲವೇ ಇಲ್ಲ. ಹಾಗಾದರೆ ಸತ್ಸಂಬಂಧಕ್ಕೆ ಆಧಾರವೇನು? ಸತ್ಕಾರ್ಯಗಳ ಸಾಧನೆಯೆ? ಇಲ್ಲ. ವಿಶ್ವಾಸವೇ? ಹೌದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹಾಗಾದರೆ ಹೊಗಳಿಕೊಳ್ಳುವದಕ್ಕೆ ಆಸ್ಪದವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಪ್ರಮಾಣದಿಂದ? ಕರ್ಮಮಾರ್ಗವನ್ನು ಅನುಸರಿಸುವದರಿಂದಲೋ? ಅಲ್ಲ; ವಿಶ್ವಾಸ ಮಾರ್ಗವನ್ನು ಅನುಸರಿಸುವದರಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹಾಗಾದರೆ, ನಾವು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವೆಲ್ಲಿ? ಆಸ್ಪದವೇ ಇಲ್ಲ. ನೀತಿವಂತರೆಂಬ ನಿರ್ಣಯ ನಿಯಮದಿಂದಲೋ? ಕ್ರಿಯೆಗಳಿಂದಲೋ? ಇಲ್ಲ, ಅದು ಇಲ್ಲದೆ ಹೋಯಿತು. ಅದು ನಂಬಿಕೆಯ ನಿಯಮದಿಂದಲೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಅಶೆ ರ್‍ಹಾತಾನಾ, ಅಮಿ ಅಮ್ಚ್ಯಾಚ್ ವಿಶಯಾತ್ ಮೊಟೆಪಾನ್ ಬೊಲುನ್ ಘೆವ್ಕ್ ಅವ್ಕಾಸ್ ಖೈ ಹಾಯ್? ಕಾಯ್ಬಿ ನಾ! ಅಶೆ ಕರುಕ್ ಕಾರನ್ ತರ್ ಖೈ ಹಾಯ್? ಅಮಿ ಖಾಯ್ದ್ಯಾಂಚ್ಯಾ ಸರ್ಕೆ ಚಲ್ತಲೆ ಕಾಯ್? ನ್ಹಯ್, ಜೆ ಅಮಿ ವಿಶ್ವಾಸ್ ಕರ್ತಾಂವ್ ತೆ ಮೊಟೆಪಾನ್ ಬೊಲುಕ್ ಅವಕಾಸ್ ಕರುನ್ ದಿತಾ. ಅಧ್ಯಾಯವನ್ನು ನೋಡಿ |
ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.
ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ.