ರೋಮಾಪುರದವರಿಗೆ 3:28 - ಪರಿಶುದ್ದ ಬೈಬಲ್28 ಏಕೆಂದರೆ ಒಬ್ಬನು ನೀತಿವಂತನಾಗುವುದು ನಂಬಿಕೆಯ ಮೂಲಕವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಲು ಅವನು ಮಾಡಿದ ಕಾರ್ಯಗಳಿಂದಲ್ಲ. ನಾವು ನಂಬುವುದೂ ಇದನ್ನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮಾನವನಿಗೆ ದೇವರೊಡನೆ ಸತ್ಸಂಬಂಧ ದೊರಕುವುದು ಧರ್ಮಶಾಸ್ತ್ರಗಳ ನೇಮನಿಯಮಗಳನ್ನು ಪಾಲಿಸುವುದರಿಂದ ಅಲ್ಲ, ವಿಶ್ವಾಸದಿಂದಲೇ ಎಂಬುದು ನಮ್ಮ ಸಿದ್ಧಾಂತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಧರ್ಮಪ್ರಮಾಣಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬದಾಗಿ ನಿಶ್ಚಯ ಮಾಡಿಕೊಂಡಿದ್ದೇವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಏಕೆಂದರೆ ನಿಯಮವನ್ನು ಕೈಕೊಳ್ಳುವುದರಿಂದಲೇ. ನಂಬಿಕೆಯಿಂದಲೇ ಒಬ್ಬ ಮನುಷ್ಯನು ನೀತಿವಂತನೆಂದು ನಿರ್ಣಯ ಹೊಂದುತ್ತಾನೆಂದು ಎಣಿಸುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಆಕ್ರಿಕ್ ಮಿಯಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಅಶೆ ಖಾಯ್ದ್ಯಾತ್ನಿ ಕಾಯ್ ಹಾಯ್ ತೆ ಸಗ್ಳೆ ಪಾಳಲ್ಲ್ಯಾ ವೈನಾ ನ್ಹಯ್, ಖಾಲಿ ವಿಶ್ವಾಸಾಚ್ಯಾ ವೈನಾ ಎವ್ಡೆಚ್ ಎಕ್ ಮಾನುಸ್ ನಿತಿವಂತ್ ಮನುನ್ ಠರ್ವುನ್ ಹೊತಾ. ಅಧ್ಯಾಯವನ್ನು ನೋಡಿ |
ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.