ರೋಮಾಪುರದವರಿಗೆ 3:29 - ಪರಿಶುದ್ದ ಬೈಬಲ್29 ದೇವರು ಕೇವಲ ಯೆಹೂದ್ಯರ ದೇವರಲ್ಲ. ಆತನು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ದೇವರು ಕೇವಲ ಯೆಹೂದ್ಯರಿಗೆ ಮಾತ್ರ ದೇವರೋ ಅಥವಾ ಇತರರಿಗೂ ದೇವರೋ? ಹೌದು, ಇತರರಿಗೂ ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು. ದೇವರು ಒಬ್ಬನೇ ಆಗಿರಲಾಗಿ ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ದೇವರು ಯೆಹೂದ್ಯರಿಗೆ ಮಾತ್ರ ದೇವರೋ? ದೇವರು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿರುವುದಿಲ್ಲವೋ? ಹೌದು, ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ನಾಹೊಲ್ಯಾರ್ ದೆವ್ ಕಾಯ್ ಖಾಲಿ ಜುದೆವಾಂಚೊ ಎವ್ಡೊಚ್ ದೆವ್ ಕಾಯ್? ತೊ ಜುದೆವ್ ನ್ಹಯ್ ಹೊತ್ತ್ಯಾಂಚೊಬಿ ದೆವ್ ಹೊಯ್ ಕಾಯ್ ನ್ಹಯ್? ಹೊಯ್, ಜುದೆವ್ ನ್ಹಯ್ ಹೊತ್ತ್ಯಾಂಚೊಬಿ ದೆವ್ ತೊ. ಅಧ್ಯಾಯವನ್ನು ನೋಡಿ |
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.