5 ದೇವರು ನ್ಯಾಯವಂತನೆಂಬುದನ್ನು ನಾವು ಮಾಡುವ ತಪ್ಪು ಮತ್ತಷ್ಟು ಸ್ಪಷ್ಟವಾಗಿ ತೋರ್ಪಡಿಸುತ್ತದೆ. ಹೀಗಿರಲು, ದೇವರು ನಮ್ಮನ್ನು ಶಿಕ್ಷಿಸುವಾಗ, ಆತನು ಅನ್ಯಾಯ ಮಾಡುತ್ತಿದ್ದಾನೆಂದು ನಾವು ಹೇಳಲು ಸಾಧ್ಯವೇ? (ಬೇರೆ ಕೆಲವು ಜನರಿಗೆ ಇರಬಹುದಾದ ಆಲೋಚನೆಯನ್ನೇ ನಾನು ಇಲ್ಲಿ ಹೇಳುತ್ತಿದ್ದೇನೆ.)
5 ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.
5 ನಮ್ಮ ಅಕ್ರಮ ನಡತೆ ದೇವರ ನ್ಯಾಯನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮವಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)
5 ನಾವು ನೀತಿ ತಪ್ಪಿನಡೆಯುವದರಿಂದ ದೇವರಲ್ಲಿರುವ ನೀತಿ ಪ್ರಸಿದ್ಧಿಗೆ ಬರುವದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಸ್ಥನೇನು? (ಈ ಮಾತನ್ನು ಲೋಕರೀತಿಯಾಗಿ ಆಡಿದ್ದೇನೆ.) ಎಂದಿಗೂ ಅಲ್ಲ.
ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.
ಸಹೋದರ ಸಹೋದರಿಯರೇ, ನಾನು ನಿಮಗೊಂದು ಉದಾಹರಣೆಯನ್ನು ಕೊಡುತ್ತೇನೆ. ಒಬ್ಬನು ಇನ್ನೊಬ್ಬನೊಂದಿಗೆ ಮಾಡಿಕೊಳ್ಳುವ ಒಪ್ಪಂದದ ಬಗ್ಗೆ ಯೋಚಿಸಿ. ಆ ಒಪ್ಪಂದವು ಅಧಿಕೃತವಾದಾಗ ಅದನ್ನು ರದ್ದುಮಾಡುವುದಕ್ಕಾಗಲಿ ಅಥವಾ ಅದಕ್ಕೆ ಬೇರೆ ಏನಾದರು ಸೇರಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.
ಪಾಪ ಮತ್ತು ಧರ್ಮಶಾಸ್ತ್ರ ಇವೆರಡೂ ಒಂದೇ ಎಂದು ನಾನು ಹೇಳುತ್ತಿರುವುದಾಗಿ ನೀವು ಭಾವಿಸಬಹುದು. ಆದರೆ ಅದು ನಿಜವಲ್ಲ. ಪಾಪವೆಂದರೆ ಏನೆಂಬುದನ್ನು ಕಲಿತುಕೊಳ್ಳಲು ಧರ್ಮಶಾಸ್ತ್ರವೊಂದೇ ನನಗೆ ಏಕೈಕ ಮಾರ್ಗವಾಗಿದೆ. ಧರ್ಮಶಾಸ್ತ್ರವಿಲ್ಲದಿದ್ದರೆ, ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ. “ಬೇರೆಯವರ ವಸ್ತುಗಳನ್ನು ನೀವು ಆಶಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳಿದ್ದರಿಂದಲೇ ಅದು ನನಗೆ ತಿಳಿಯಿತು.
ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.
ಯೆಹೋವನು ಸ್ವಾಭಿಮಾನವುಳ್ಳ ದೇವರಾಗಿದ್ದಾನೆ. ಆತನು ಪಾಪಿಗಳ ಮೇಲೆ ಸೇಡನ್ನು ತೀರಿಸುವ ದೇವರು. ಆತನು ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ಪಾಪಿಗಳನ್ನು ಶಿಕ್ಷಿಸುವ ದೇವರು. ಆತನು ವೈರಿಗಳನ್ನು ಶಿಕ್ಷಿಸುವನು. ಆತನ ವೈರಿಗಳ ಮೇಲೆ ಕೋಪವು ಸದಾಕಾಲವಿರುವುದು.
ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, “ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.”
ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ಎಂಬುದಾಗಿ ಬರೆಯಲ್ಪಟ್ಟಿದೆ.
ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.
“ನಾನಾಡುವ ಸುಳ್ಳು ದೇವರ ಸತ್ಯವನ್ನು ತೋರಿಸುವುದಾದರೆ ನನ್ನ ಸುಳ್ಳಿನಿಂದ ದೇವರಿಗೆ ನಿಜವಾಗಿಯೂ ಮಹಿಮೆಯಾಗುತ್ತದೆ. ಹೀಗಿರಲು ನನಗೆ ‘ಪಾಪಿ’ ಎಂಬ ತೀರ್ಪಾಗುವುದೇಕೆ?” ಎಂದು ಒಬ್ಬನು ಕೇಳಬಹುದು.
ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.
ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.