ರೋಮಾಪುರದವರಿಗೆ 4:10 - ಪರಿಶುದ್ದ ಬೈಬಲ್10 ಆದರೆ ಇದು ಯಾವಾಗ ಆಯಿತು? ದೇವರು ಅಬ್ರಹಾಮನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೋ ಅಥವಾ ಸುನ್ನತಿಯಾದಮೇಲೋ? ದೇವರು ಅವನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೀಗೆ ಪರಿಗಣಿಸಿದ್ದು ಯಾವಾಗ? ಅಬ್ರಹಾಮನಿಗೆ ಸುನ್ನತಿ ಆಗುವುದಕ್ಕೆ ಮೊದಲೋ ಅಥವಾ ಅನಂತರವೊ? ಆತನು ಸುನ್ನತಿ ಮಾಡಿಸಿಕೊಳ್ಳುವ ಮೊದಲೇ ಹೀಗೆ ಪರಿಗಣಿಸಲಾಯಿತು; ಸುನ್ನತಿಮಾಡಿಸಿಕೊಂಡ ನಂತರವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದು ಯಾವಾಗ ಎಣಿಸಲಾಯಿತು? ಅವನಿಗೆ ಸುನ್ನತಿ ಆದ ಬಳಿಕವೋ? ಅಥವಾ ಸುನ್ನತಿಯಾಗುವುದಕ್ಕೆ ಮೊದಲೋ? ಅದು ನಂತರವಲ್ಲ, ಮೊದಲೇ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಹೆ ಸಗ್ಳೆ ಘಡಲ್ಲೆ ಕನ್ನಾ? ಅಬ್ರಾಹಾಮಾಚಿ ಸುನ್ನತ್ ಹೊವ್ಚ್ಯಾ ಅದ್ದಿ ಕಾಯ್ ಮಾನಾ? ಹೆ ಸಗ್ಳೆ ಘಡಲ್ಲೆ ಸುನ್ನತ್ ಹೊವ್ಚ್ಯಾ ಅದ್ದಿ, ಸುನ್ನತ್ ಹೊಲ್ಲ್ಯಾ ಮಾನಾ ನೈಯ್. ಅಧ್ಯಾಯವನ್ನು ನೋಡಿ |
ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.