Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:16 - ಪರಿಶುದ್ದ ಬೈಬಲ್‌

16 ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದಾಗಿರುವಂತೆ ಅದು ನಂಬಿಕೆಯ ಮೂಲಕ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರಮಾಡಿಕೊಂಡವರಿಗೆ ಮಾತ್ರವಲ್ಲದೆ ಅಬ್ರಹಾಮನಲ್ಲಿದ್ದಂಥ ನಂಬಿಕೆಯುಳ್ಳವರಿಗೆ ಸಹ ಸ್ಥಿರವಾಗಿ ನಿಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆಚೆಸಾಟ್ನಿ ದಿಲ್ಲಿ ಗೊಸ್ಟ್ ವಿಶ್ವಾಸಾಚ್ಯಾ ವರ್‍ತಿ ಠಿಕುನ್ ಹಾಯ್, ಅಶೆ ತಿ ದಿಲ್ಲಿ ಗೊಸ್ಟ್ ಅಮ್ಕಾ ಅಮ್ಚ್ಯಾ ಬಾಬಾಚ್ಯಾ ಪಿಳ್ಗಿಚ್ಯಾಕ್ನಿ, ಮಟ್ಲ್ಯಾರ್, ಖಾಲಿ ಖಾಯ್ದೆ ಫಾಳ್ತಲ್ಯಾಕ್ನಿ ಎವ್ಡಿಚ್ ನ್ಹಯ್, ಅಬ್ರಾಹಾಮಾನ್ ಕರಲ್ಲ್ಯಾ ಸಾರ್ಕೆ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಎಕ್ ಫುಕೊಟ್ಚಿ ಕಾನಿಕ್ ಸಾರ್ಕೆ ದಿಲ್ಲೆ ಹಾಯ್. ಕಶ್ಯಾಕ್ ಮಟ್ಲ್ಯಾರ್ ಅಬ್ರಾಹಾಮ್ ಅಮ್ಚೊ ಸಗ್ಳ್ಯಾಂಚೊಚ್ ಆತ್ಮಿಕ್ ಬಾಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:16
18 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ನಂಬಿಕೆಯ ಮೂಲಕ ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಅದು ದೇವರ ವರ.


ಆದರೆ ಇದು ಸತ್ಯವಲ್ಲ. ಏಕೆಂದರೆ ಸಮಸ್ತವೂ ಪಾಪಕ್ಕೆ ಒಳಗಾಗಿದೆ ಎಂದು ಪವಿತ್ರ ಗ್ರಂಥ ಪ್ರಕಟಿಸುತ್ತದೆ. ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವವರಿಗೆ ಅವರ ನಂಬಿಕೆಯ ಆಧಾರದ ಮೇಲೆ ವಾಗ್ದಾನದ ಫಲವು ದೊರೆಯಬೇಕೆಂದೇ ಪವಿತ್ರ ಗ್ರಂಥವು ಹೀಗೆ ಪ್ರಕಟಿಸಿದೆ.


ಇದರರ್ಥವೇನೆಂದರೆ, ಶರೀರ ಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ದೇವರ (ನಿಜ) ಮಕ್ಕಳಾಗಿದ್ದಾರೆ.


ದೇವರು ತನ್ನ ಕೃಪೆಯಿಂದ ನಮ್ಮನ್ನು ನೀತಿವಂತರನ್ನಾಗಿ ಮಾಡಿದನು. ನಾವು ನಿತ್ಯಜೀವವನ್ನು ಪಡೆಯುವಂತೆ ಆತನು ನಮಗೆ ಪವಿತ್ರಾತ್ಮನನ್ನು ಕೊಟ್ಟನು. ಅದೇ ನಮ್ಮ ನಿರೀಕ್ಷೆ.


ನಾವು ದೇವರಿಗೆ ವಿರುದ್ಧವಾಗಿ ಮಾಡಿದ ಕಾರ್ಯಗಳ ದೆಸೆಯಿಂದ ಸತ್ತವರಾಗಿದ್ದೆವು. ಆದರೆ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ನೀವು ದೇವರ ಕೃಪೆಯಿಂದ ರಕ್ಷಣೆ ಹೊಂದಿದವರಾಗಿದ್ದೀರಿ.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳು ಸತ್ಯವಾದುವುಗಳೆಂದು ತೋರಿಸುವುದಕ್ಕಾಗಿಯೂ ದೇವರು ಆ ವಾಗ್ದಾನಗಳನ್ನು ನೆರವೇರಿಸುತ್ತಾನೆ ಎಂಬುದನ್ನು ನಿರೂಪಿಸುವುದಕ್ಕಾಗಿಯೂ


ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮ ಮಾತೆಯಾದ ಸಾರಳನ್ನೂ ದೃಷ್ಟಿಸಿರಿ; ನಾನು ಕರೆದಾಗ ಅಬ್ರಹಾಮನು ಒಬ್ಬಂಟಿಗನಾಗಿದ್ದನು. ನಾನು ಅವನನ್ನು ಆಶೀರ್ವದಿಸಿ, ಅವನ ಸಂತಾನವನ್ನು ಅಭಿವೃದ್ಧಿಪಡಿಸಿ, ಅವನನ್ನು ಮಹಾಜನಾಂಗದ ಮೂಲಪುರುಷನನ್ನಾಗಿ ಮಾಡಿದೆನು.”


ನನ್ನ ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಳ್ಳಲು ಕರೆದನು. ಆದ್ದರಿಂದಲೇ ನೀವು ದೇವರಿಂದ ನಿಜವಾಗಿಯೂ ಕರೆಯಲ್ಪಟ್ಟವರೆಂದೂ ಆರಿಸಲ್ಪಟ್ಟವೆರೆಂದೂ ತೋರಿಸಲು ಬಹಳವಾಗಿ ಪ್ರಯತ್ನಿಸಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡವಿಬೀಳುವುದಿಲ್ಲ.


ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.


ಯೇಸು, “ಈ ಮನುಷ್ಯನು ಒಳ್ಳೆಯವನೇ ಸರಿ. ಇವನು ನಿಜವಾಗಿಯೂ ಅಬ್ರಹಾಮನ ಕುಟುಂಬಕ್ಕೆ ಸೇರಿದ್ದಾನೆ. ಇಂದೇ ಈ ಮನೆಗೆ ರಕ್ಷಣೆ ಆಯಿತು.


ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.


ದೇವರು ಒಬ್ಬನೇ. ಆತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ.


ಎಲ್ಲಾ ಜನರಿಗೆ ದೇವರ ಆಶೀರ್ವಾದವು ದೊರೆಯಲೆಂದು ಕ್ರಿಸ್ತನು ಹೀಗೆ ಮಾಡಿದನು. ಈ ಆಶೀರ್ವಾದವನ್ನು ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದನು. ಈ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಬರುತ್ತದೆ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮನನ್ನು ನಾವು ಹೊಂದಿಕೊಳ್ಳಲೆಂದು ಯೇಸು ಮರಣಹೊಂದಿದನು. ನಂಬಿಕೆಯಿಡುವುದರ ಮೂಲಕ ನಾವು ಈ ವಾಗ್ದಾನವನ್ನು ಪಡೆದುಕೊಳ್ಳುತ್ತೇವೆ.


ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ” ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು