ರೋಮಾಪುರದವರಿಗೆ 4:17 - ಪರಿಶುದ್ದ ಬೈಬಲ್17 “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ” ಎಂದು ಪವಿತ್ರ ಗ್ರಂಥದಲ್ಲೇ ಬರೆದಿದೆ. ಇದು ದೇವರ ಸನ್ನಿಧಿಯಲ್ಲಿ ಸತ್ಯವಾಗಿದೆ. ಸತ್ತವರಿಗೆ ಜೀವವನ್ನು ಕೊಡುವವನೂ ಇನ್ನೂ ಸಂಭವಿಸಿಲ್ಲದ ಕಾರ್ಯಗಳನ್ನು ಮಾಡುವವನೂ ಆಗಿರುವ ದೇವರನ್ನು ಅಬ್ರಹಾಮನು ನಂಬಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇವಿುಸಿದ್ದೇನೆಂದು ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಅಬ್ರಹಾಮನು ನಮ್ಮೆಲ್ಲರಿಗೂ ದೇವರ ಸನ್ನಿಧಿಯಲ್ಲಿ ಮೂಲ ಪಿತೃವಾಗಿದ್ದಾನೆ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲದ್ದನ್ನು ಇರುವದಾಗಿ ಕರೆಯುವವನಾಗಿಯೂ ಇದ್ದಾನೆಂದು ಅಬ್ರಹಾಮನು ನಂಬಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಒಬ್ಬ ತಂದೆಯನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರ ವೇದದಲ್ಲಿ ಲಿಖಿತವಾಗಿದೆ. ದೇವರು ಸತ್ತವರಿಗೆ ಜೀವಕೊಡುವವರೂ ಇಲ್ಲದವುಗಳನ್ನು ಇರುವವುಗಳೋ ಎಂಬಂತೆ ಕರೆಯುವವರೂ ಆಗಿರುತ್ತಾರೆಂದು ಅಬ್ರಹಾಮನು ದೇವರ ಸನ್ನಿಧಿಯಲ್ಲಿ ನಂಬಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಪವಿತ್ರ್ ಪುಸ್ತಕ್ ಮನ್ತಾ,“ಮಿಯಾ ತುಕಾ ಸುಮಾರ್ ದೆಶಾಂಚೊ ಬಾಬಾ ಕರುನ್ ಥವ್ಲಾ” ತಸೆಮನುನ್ ಅಬ್ರಾಹಾಮಾನ್ ವಿಶ್ವಾಸ್ ಥವಲ್ಲ್ಯಾ ಮರಲ್ಲ್ಯಾಕ್ನಿ ಜಿವ್ ದಿತಲ್ಯಾ ಅನಿ ನಸಲ್ಲೆ ಹೊತ್ತ್ಯಾ ಸರ್ಕೆ ಕರ್‍ತಲ್ಲ್ಯಾ ದೆವಾಚ್ಯಾ ನದ್ರೆತ್ ಗೊಸ್ಟ್ ಬರಿ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |
ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ.