ರೋಮಾಪುರದವರಿಗೆ 4:25 - ಪರಿಶುದ್ದ ಬೈಬಲ್25 ನಮ್ಮ ಪಾಪಗಳ ದೆಸೆಯಿಂದ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು. ನಮ್ಮನ್ನು ನೀತಿವಂತರನ್ನಾಗಿ ಮಾಡುವುದಕ್ಕಾಗಿ ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಅಮ್ಚ್ಯಾ ಪಾಪಾಕ್ನಿ ಲಾಗುನ್ ತೆಕಾ ಮರ್‍ನಾಚ್ಯಾ ತಾಬೆತ್ ದಿವ್ನ್ ಹೊಲ್ಲೆ, ಅನಿ ಅಮ್ಕಾ ದೆವಾಚ್ಯಾ ವಾಂಗ್ಡಾ ಖರ್‍ಯಾ ವಾಟೆನ್ ಚಲ್ತಲಿ ಲೊಕಾ ಕರುಸಾಟ್ನಿ ತೆ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವುನ್ ಹೊಲೆ. ಅಧ್ಯಾಯವನ್ನು ನೋಡಿ |
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.
ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.