ರೋಮಾಪುರದವರಿಗೆ 4:5 - ಪರಿಶುದ್ದ ಬೈಬಲ್5 ಆದರೆ ಒಬ್ಬನು ತಾನು ಮಾಡುವ ಯಾವುದೇ ಕಾರ್ಯದ ಮೂಲಕವಾಗಲಿ ತನ್ನನ್ನು ನೀತಿವಂತನನ್ನಾಗಿ ಮಾಡಿಕೊಳ್ಳಲಾರನು. ಆದ್ದರಿಂದ ಆ ವ್ಯಕ್ತಿ ದೇವರಲ್ಲಿ ನಂಬಿಕೆ ಇಡಲೇಬೇಕು. ಆಗ ದೇವರು ಆ ವ್ಯಕ್ತಿಯ ನಂಬಿಕೆಯನ್ನು ಸ್ವೀಕರಿಸಿಕೊಂಡು ಅವನನ್ನು ನೀತಿವಂತನನ್ನಾಗಿ ಮಾಡುವನು. ದೇವರು ದುಷ್ಟರನ್ನು ಸಹ ನೀತಿವಂತರನ್ನಾಗಿ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು, ಅಧರ್ಮಿಗಳನ್ನು ಸದ್ಧರ್ಮಿಗಳನ್ನಾಗಿಸುವ ದೇವರಲ್ಲಿ ವಿಶ್ವಾಸವಿಡುತ್ತಾರೋ ಅಂಥವರ ವಿಶ್ವಾಸವನ್ನು ದೇವರು ಅಂಗೀಕರಿಸಿ, ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಯಾರು ಕೃತ್ಯಗಳನ್ನು ಮಾಡದೆ, ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವ ದೇವರಲ್ಲಿ ನಂಬಿಕೆ ಇಡುತ್ತಾರೋ ಅವರ ನಂಬಿಕೆಯೇ ನೀತಿ ಎಂದು ಎಣಿಸಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಖರೆ ಎಕ್ಲೊ ಅಪ್ನಾಚ್ಯಾ ಸ್ವತಾಚ್ಯಾ ಕಾಮಾಂಚ್ಯಾ ವರ್‍ತಿ ಹೊಂದುನ್ ರಾಯ್‍ನಸ್ತಾನಾ, ಬುರ್ಶ್ಯಾ ಲೊಕಾಕ್ನಿ ಚುಕಿದಾರ್ ನ್ಹಯ್ ಮನುನ್ ಎಚುನ್ ಕಾಡ್ತಲ್ಯಾ ದೆವಾಚ್ಯಾ ವರ್‍ತಿ ವಿಶ್ವಾಸ್ ಕರುನ್ ಘೆವ್ನ್ ರ್‍ಹಾತಾ ಹೊಲ್ಯಾರ್, ಹ್ಯಾ ತೆಚ್ಯಾ ವಿಶ್ವಾಸಾಚ್ಯಾ ವೈನಾಚ್ ದೆವ್ ತೆಕಾ ಅಪ್ನಾಚ್ಯಾ ನದ್ರೆತ್ ನಿತಿವಂತ್ ಮಾನುಸ್ ಮನುನ್ ಠರ್ವುತಾ. ಅಧ್ಯಾಯವನ್ನು ನೋಡಿ |
ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ “ತೆರಹ” ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.