Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:6 - ಪರಿಶುದ್ದ ಬೈಬಲ್‌

6 ದೇವರು ಒಬ್ಬನ ಒಳ್ಳೆಯ ಕಾರ್ಯಗಳನ್ನು ಲಕ್ಷಿಸದೆ ಅವನನ್ನು ನೀತಿವಂತನೆಂದು ಒಪ್ಪಿಕೊಂಡರೆ ಅವನು ನಿಜವಾಗಿಯೂ ಭಾಗ್ಯವಂತನೆಂದು ದಾವೀದನು ಸಹ ಹೇಳಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂತೆಯೇ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು ದೇವರೊಡನೆ ಸತ್ಸಂಬಂಧದಲ್ಲಿ ಇರುತ್ತಾರೋ ಅಂಥವರು ಭಾಗ್ಯವಂತರು! ಇದನ್ನು ಕುರಿತು ದಾವೀದನು ಹೀಗೆನ್ನುತ್ತಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ಯಾರನ್ನು ಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾರೋ ಅವನೇ ಧನ್ಯನು. ಇದರ ಬಗ್ಗೆ ದಾವೀದನು ಹೀಗೆ ಹೇಳುತ್ತಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ದಾವಿದಾನ್ ದೆವಾನ್ ಖರ್ಯಾ ವಾಟೆನ್ ಚಲ್ತಲೊ ಮಾನುಸ್ ಮನುನ್ ಎಚುನ್ ಕಾಡಲ್ಲ್ಯಾ ಮಾನ್ಸಾಚ್ಯಾ ವಿಶಯಾತ್ ಬೊಲಲ್ಯಾ ಗೊಸ್ಟಿಯಾಂಚೊ ಅರ್ತ್‍ ಹ್ಯೊಚ್ ತೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:6
31 ತಿಳಿವುಗಳ ಹೋಲಿಕೆ  

ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.


ಎಲ್ಲಾ ಜನರಿಗೆ ದೇವರ ಆಶೀರ್ವಾದವು ದೊರೆಯಲೆಂದು ಕ್ರಿಸ್ತನು ಹೀಗೆ ಮಾಡಿದನು. ಈ ಆಶೀರ್ವಾದವನ್ನು ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದನು. ಈ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಬರುತ್ತದೆ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮನನ್ನು ನಾವು ಹೊಂದಿಕೊಳ್ಳಲೆಂದು ಯೇಸು ಮರಣಹೊಂದಿದನು. ನಂಬಿಕೆಯಿಡುವುದರ ಮೂಲಕ ನಾವು ಈ ವಾಗ್ದಾನವನ್ನು ಪಡೆದುಕೊಳ್ಳುತ್ತೇವೆ.


ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.


ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.”


“ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನಿಗೆ ಸ್ತೋತ್ರವಾಗಲಿ! ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು.


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ಆಗ ನೀವು ಬಹು ಸಂತೋಷವುಳ್ಳವರಾಗಿದ್ದಿರಿ. ಆ ಆನಂದವು ಈಗ ಎಲ್ಲಿದೆ? ನನಗೆ ಸಹಾಯ ಮಾಡಲು ನೀವು ಏನು ಬೇಕಾದರೂ ಮಾಡುವುದಕ್ಕೆ ಸಿದ್ಧರಾಗಿದ್ದಿರೆಂಬುದು ನನ್ನ ನೆನಪಿನಲ್ಲಿದೆ. ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಟ್ಟುಬಿಡುತ್ತಿದ್ದಿರಿ.


ನಮಗಾಗಿಯೂ ಬರೆಯಲ್ಪಟ್ಟಿವೆ. ನಾವು ನಂಬುವುದರಿಂದ ದೇವರು ನಮ್ಮನ್ನು ಸಹ ಸ್ವೀಕರಿಸಿಕೊಳ್ಳುವನು. ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನಲ್ಲಿ (ದೇವರಲ್ಲಿ) ನಾವು ನಂಬಿಕೆ ಇಡುತ್ತೇವೆ.


ಈ ಭಾಗ್ಯವಿರುವುದು ಸುನ್ನತಿ ಮಾಡಿಸಿಕೊಂಡವರಿಗೆ (ಯೆಹೂದ್ಯರಿಗೆ) ಮಾತ್ರವೋ? ಅಥವಾ ಸುನ್ನತಿ ಮಾಡಿಸಿಕೊಂಡಿಲ್ಲದವರಿಗೂ (ಯೆಹೂದ್ಯರಲ್ಲದವರಿಗೂ) ಸಹ ಈ ಭಾಗ್ಯವಿದೆಯೋ? ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿಕೊಂಡನೆಂದು ನಾವು ಆಗಲೇ ಹೇಳಿದ್ದೇವೆ. ಆ ನಂಬಿಕೆಯೇ ಅವನನ್ನು ನೀತಿವಂತನನ್ನಾಗಿ ಮಾಡಿತು.


ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ.


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಜೆರುಸಲೇಮಿನಲ್ಲಿ ಜನರು ಸುರಕ್ಷಿತರಾಗಿರುವರು. ಆ ‘ಮೊಳಕೆಯ’ ಹೆಸರು ‘ಯೆಹೋವನು ಒಳ್ಳೆಯವನು.’”


ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಬನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.


ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”


“ಬಹುಕಾಲದ ನಂತರ ಯಜಮಾನನು ಮನೆಗೆ ಬಂದನು. ತಾನು ಕೊಟ್ಟಿದ್ದ ಹಣದ ಕುರಿತಾಗಿ ಅವನು ಸೇವಕರನ್ನು ವಿಚಾರಿಸಿ ಲೆಕ್ಕ ಕೇಳಿದನು.


ಆದರೆ ಒಬ್ಬನು ತಾನು ಮಾಡುವ ಯಾವುದೇ ಕಾರ್ಯದ ಮೂಲಕವಾಗಲಿ ತನ್ನನ್ನು ನೀತಿವಂತನನ್ನಾಗಿ ಮಾಡಿಕೊಳ್ಳಲಾರನು. ಆದ್ದರಿಂದ ಆ ವ್ಯಕ್ತಿ ದೇವರಲ್ಲಿ ನಂಬಿಕೆ ಇಡಲೇಬೇಕು. ಆಗ ದೇವರು ಆ ವ್ಯಕ್ತಿಯ ನಂಬಿಕೆಯನ್ನು ಸ್ವೀಕರಿಸಿಕೊಂಡು ಅವನನ್ನು ನೀತಿವಂತನನ್ನಾಗಿ ಮಾಡುವನು. ದೇವರು ದುಷ್ಟರನ್ನು ಸಹ ನೀತಿವಂತರನ್ನಾಗಿ ಮಾಡುವನು.


“ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಅಪರಾಧಗಳು ಮುಚ್ಚಲ್ಪಟ್ಟಿವೆಯೋ ಅವರು ನಿಜವಾಗಿಯೂ ಭಾಗ್ಯವಂತರು!


ಆದರೆ ಯಾವನಾದರೂ, “ನಿನ್ನಲ್ಲಿ ನಂಬಿಕೆಯಿದೆ; ನನ್ನಲಿ ಕ್ರಿಯೆಗಳಿವೆ” ಎಂದು ವಾದಿಸಬಹುದು. ಅದಕ್ಕೆ ನನ್ನ ಉತ್ತರವೇನೆಂದರೆ ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ತೋರಿಸಲಾರೆ. ನಾನಾದರೊ ನನ್ನ ಒಳ್ಳೆಯ ಕಾರ್ಯಗಳ ಮೂಲಕ ನನ್ನ ನಂಬಿಕೆಯನ್ನು ನಿನಗೆ ತೋರಿಸುವೆ ಎಂದು ಹೇಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು