Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:9 - ಪರಿಶುದ್ದ ಬೈಬಲ್‌

9 ಈ ಭಾಗ್ಯವಿರುವುದು ಸುನ್ನತಿ ಮಾಡಿಸಿಕೊಂಡವರಿಗೆ (ಯೆಹೂದ್ಯರಿಗೆ) ಮಾತ್ರವೋ? ಅಥವಾ ಸುನ್ನತಿ ಮಾಡಿಸಿಕೊಂಡಿಲ್ಲದವರಿಗೂ (ಯೆಹೂದ್ಯರಲ್ಲದವರಿಗೂ) ಸಹ ಈ ಭಾಗ್ಯವಿದೆಯೋ? ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿಕೊಂಡನೆಂದು ನಾವು ಆಗಲೇ ಹೇಳಿದ್ದೇವೆ. ಆ ನಂಬಿಕೆಯೇ ಅವನನ್ನು ನೀತಿವಂತನನ್ನಾಗಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಆಶೀರ್ವಚನವು ಸುನ್ನತಿ ಮಾಡಿಸಿಕೊಂಡವರಿಗೆ ಮಾತ್ರ ಅನ್ವಯಿಸುತ್ತದೆಯೇ? ಇಲ್ಲ, ಸುನ್ನತಿ ಮಾಡಿಸಿಕೊಳ್ಳದವರಿಗೂ ಅನ್ವಯಿಸುತ್ತದೆ. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಶುಭವಚನವು ಸುನ್ನತಿಯಿದ್ದವರಿಗೆ ಮಾತ್ರವೋ? ಸುನ್ನತಿಯಿಲ್ಲದವರಿಗೆ ಸಹ ಆಗುತ್ತದೋ? ನೋಡೋಣ. ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ಹೇಳುತ್ತೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಧನ್ಯತೆಯು ಕೇವಲ ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೂ ಇರುತ್ತದೆಯೋ? ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿ ಎಂದು ಎಣಿಸಲಾಗಿತೆಂದು ಹೇಳುತ್ತೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದಾವಿದಾನ್ ಸಾಂಗಲ್ಲೊ ಹ್ಯೊ ಸುಖ್ ಖಾಲಿ ಸುನ್ನತ್ ಕರುನ್ ಘೆಟಲ್ಲ್ಯಾಕ್ನಿ ಎವ್ಡೊಚ್ ಕಾಯ್, ಬಿಲ್ಕುಲ್‍ ನಾ! ತೊ ಸುಖ್ ಸುನ್ನತ್ ಕರುನ್ ಘೆಯ್ನಸಲ್ಲ್ಯಾಕ್ನಿಬಿ ಸಮಂದ್ ಪಡಲ್ಲೊ ಹಾಯ್ ತ್ಯೆಚೆ ಸಾಟ್ನಿಚ್ ಅಮಿ, ಪವಿತ್ರ್ ಪುಸ್ತಕಾತ್, “ಅಬ್ರಾಹಾಮಾನ್ ದೆವಾ ವರ್‍ತಿ ವಿಶ್ವಾಸ್ ಕರ್‍ಲ್ಯಾನ್, ಅನಿ ತೆಚ್ಯಾ ವಿಶ್ವಾಸಾಕ್‍ಲಾಗುನ್ ದೆವಾನ್ ತೆಕಾ ಖರ್ಯ್ಯಾ ವಾಟೆನ್ ಚಲ್ತಲೊ ಮಾನುಸ್ ಮನುನ್ ಮಾನುನ್ ಘೆಟ್ಲಲ್ಯಾ” ಮನ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:9
14 ತಿಳಿವುಗಳ ಹೋಲಿಕೆ  

ಎಲ್ಲಾ ಜನರಿಗೆ ದೇವರ ಆಶೀರ್ವಾದವು ದೊರೆಯಲೆಂದು ಕ್ರಿಸ್ತನು ಹೀಗೆ ಮಾಡಿದನು. ಈ ಆಶೀರ್ವಾದವನ್ನು ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದನು. ಈ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಬರುತ್ತದೆ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮನನ್ನು ನಾವು ಹೊಂದಿಕೊಳ್ಳಲೆಂದು ಯೇಸು ಮರಣಹೊಂದಿದನು. ನಂಬಿಕೆಯಿಡುವುದರ ಮೂಲಕ ನಾವು ಈ ವಾಗ್ದಾನವನ್ನು ಪಡೆದುಕೊಳ್ಳುತ್ತೇವೆ.


ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


“ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿದನು. ಇದು ಅಬ್ರಹಾಮನನ್ನು ನೀತಿವಂತನನ್ನಾಗಿ ಮಾಡಿತು” ಎಂದು ಪವಿತ್ರ ಗ್ರಂಥವು ಹೇಳುತ್ತದೆ.


ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”


ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


ಅಬ್ರಾಮನು ಯೆಹೋವನನ್ನು ನಂಬಿದನು. ಆ ನಂಬಿಕೆಯ ನಿಮಿತ್ತವೇ ಯೆಹೋವನು ಅಬ್ರಾಮನನ್ನು ನೀತಿವಂತನೆಂದು ಪರಿಗಣಿಸಿದನು.


ಆದರೆ ಇದು ಯಾವಾಗ ಆಯಿತು? ದೇವರು ಅಬ್ರಹಾಮನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೋ ಅಥವಾ ಸುನ್ನತಿಯಾದಮೇಲೋ? ದೇವರು ಅವನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು