Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:11 - ಪರಿಶುದ್ದ ಬೈಬಲ್‌

11 ಇಷ್ಟು ಮಾತ್ರವಲ್ಲದೆ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಾವು ದೇವರಲ್ಲಿ ಹರ್ಷಿಸುತ್ತೇವೆ. ಈಗ ನಾವು ದೇವರ ಸ್ನೇಹಿತರಾಗಿರುವುದು ಯೇಸುವಿನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಷ್ಟು ಮಾತ್ರವೇ ಅಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಮಾಧಾನಸ್ಥಿತಿ ಹೊಂದಿದವರಾಗಿ ಆತನ ಮುಖಾಂತರ ದೇವರಲ್ಲಿ ಹರ್ಷಗೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಷ್ಟು ಮಾತ್ರವೇ ಅಲ್ಲ, ಈಗ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಾವು ದೇವರೊಂದಿಗೆ ಮಿತ್ರರಾಗಿ, ಯೇಸುವಿನ ಮೂಲಕವೇ ದೇವರಲ್ಲಿ ಉಲ್ಲಾಸ ಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಎವ್ಡೆಚ್ ನ್ಹಯ್; ಅಮ್ಕಾ ಅತ್ತಾ ದೆವಾಚಿ ದೊಸ್ತಾ ಕರಲ್ಲ್ಯಾ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ದೆವಾನ್ ಅಮ್ಚ್ಯಾ ಸಾಟ್ನಿ ಕರಲ್ಲ್ಯಾ ಕಾಮಾಂಚ್ಯಾ ಸಾಟ್ನಿ ಅಮಿ ಖುಶಿ ಹೊತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:11
28 ತಿಳಿವುಗಳ ಹೋಲಿಕೆ  

ಅಂದರೆ, ನಾವು ದೇವರ ಶತ್ರುಗಳಾಗಿದ್ದಾಗಲೇ, ದೇವರು ತನ್ನ ಮಗನ ಮರಣದ ಮೂಲಕವಾಗಿ ನಮ್ಮನ್ನು ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದಾನೆ. ಈಗ ನಾವು ದೇವರ ಸ್ನೇಹಿತರಾಗಿರುವುದರಿಂದ ದೇವರು ತನ್ನ ಮಗನ ಪ್ರಾಣದ ಮೂಲಕ ನಮ್ಮನ್ನು ರಕ್ಷಿಸುವುದು ಮತ್ತಷ್ಟು ನಿಶ್ಚಯವಾಗಿದೆ.


ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


ಈಗಲಾದರೋ ಸತ್ಯದೇವರನ್ನು ತಿಳಿದಿದ್ದೀರಿ. ನಿಜವಾಗಿ ಹೇಳಬೇಕಾದರೆ, ನಿಮ್ಮನ್ನು ತಿಳಿದಿರುವಾತನು ದೇವರೇ. ಹೀಗಿರಲಾಗಿ ಮೊದಲು ನೀವು ಅನುಸರಿಸುತ್ತಿದ್ದ ಬಲಹೀನವೂ ನಿರುಪಯುಕ್ತವೂ ಆದ ನಿಯಮಗಳಿಗೆ ನೀವು ಯಾಕೆ ಹಿಂತಿರುಗಬೇಕು? ಅವುಗಳಿಗೆ ಮತ್ತೆ ಗುಲಾಮರಾಗಬೇಕೆಂದಿದ್ದೀರೋ?


ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ.


ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.


ಪ್ರಭುವಾದ ಕ್ರಿಸ್ತ ಯೇಸುವನ್ನು ನೀವು ಸ್ವೀಕರಿಸಿಕೊಂಡಿರುವುದರಿಂದ ಆತನಲ್ಲಿ ನೆಲೆಗೊಂಡಿದ್ದು ಜೀವಿಸಿರಿ.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ನಾನು ಹೇಳಿದ ಈ ವಿಷಯಗಳು ಆತನನ್ನು ಸಂತೋಷಗೊಳಿಸಲಿ. ನಾನಾದರೋ ಯೆಹೋವನಲ್ಲಿ ಸಂತೋಷಿಸುವೆನು.


ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು. ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ. ದೇವರೇ, ನನ್ನ ದೇವರೇ, ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ನೀತಿವಂತರೇ, ಹರ್ಷಿಸಿರಿ; ಯೆಹೋವನಲ್ಲಿ ಆನಂದಿಸಿರಿ. ಶುದ್ಧಹೃದಯವುಳ್ಳವರೇ, ಉಲ್ಲಾಸಿಸಿರಿ.


ಹನ್ನಳು ಇಂತೆಂದಳು: “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ. ನಾನು ನನ್ನ ದೇವರಾದ ಯೆಹೋವನಲ್ಲಿ ಬಲಶಾಲಿಯಾಗಿದ್ದೇನೆ. ನಾನು ನನ್ನ ಶತ್ರುಗಳ ಬಗ್ಗೆ ನಗುವೆನು. ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ನನ್ನ ಸಹೋದರ ಸಹೋದರಿಯರೇ, ಪ್ರಭುವಿನಲ್ಲಿ ಸಂತೋಷವಾಗಿರಿ. ನಾನು ಮೊದಲು ಬರೆದದ್ದನ್ನೇ ಮತ್ತೆ ಬರೆಯಲು ನನಗೆ ಬೇಸರವೇನೂ ಇಲ್ಲ; ಏಕೆಂದರೆ ಅದು ನಿಮ್ಮನ್ನು ಮತ್ತಷ್ಟು ಸಂರಕ್ಷಿಸುತ್ತದೆ.


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ನಾವು ದ್ರಾಕ್ಷಾರಸದ ಪಾತ್ರೆಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಕುಡಿಯುವಾಗ ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಲಿಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಲಿಲ್ಲವೇ?


ಇಸ್ರೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾದಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವ ಪಡೆದುಕೊಂಡಂತಾಗುವುದಿಲ್ಲವೇ?


“ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರದಲ್ಲಿ ನಂಬಿಕೆಯಿಟ್ಟು ದೇವರಿಗೆ ಸಮೀಪವಾಗಿರುವುದಾಗಿ ನೀನು ಹೆಮ್ಮೆಪಡುವೆ.


ಯಾರ್ಯಾರು ಆತನನ್ನು ಸ್ವೀಕರಿಸಿಕೊಂಡರೋ ಅಂದರೆ ಆತನಲ್ಲಿ ನಂಬಿಕೆ ಇಟ್ಟರೋ ಅವರಿಗೆ ಆತನು ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.


ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.


ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ.


ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.


ಅದಷ್ಟೇ ಅಲ್ಲ, ರೆಬೆಕ್ಕಳಿಗೂ ಇಬ್ಬರು ಗಂಡುಮಕ್ಕಳಿದ್ದರು. ಅವರಿಬ್ಬರಿಗೂ ಒಬ್ಬನೇ ತಂದೆ. ಅವನೇ ನಮ್ಮ ಪಿತೃವಾದ ಇಸಾಕನು.


ಇದಲ್ಲದೆ, ನಾವು ಈ ಸಹಾಯಧನವನ್ನು ತೆಗೆದುಕೊಂಡು ಹೋಗುವಾಗ ನಮ್ಮ ಸಂಗಡವಿರುವುದಕ್ಕಾಗಿ ಸಭೆಗಳವರು ಈ ಸಹೋದರನನ್ನು ಆಯ್ಕೆಮಾಡಿದ್ದಾರೆ. ದೇವರ ಮಹಿಮೆಗಾಗಿಯೂ ಮತ್ತು ಸಹಾಯ ಮಾಡಲು ನಿಜವಾಗಿ ಬಯಸುತ್ತೇವೆ ಎಂಬುದನ್ನು ತೋರಿಸುವುದಕ್ಕಾಗಿಯೂ ಈ ಸೇವಾಕಾರ್ಯವನ್ನು ಮಾಡುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು