ರೋಮಾಪುರದವರಿಗೆ 5:15 - ಪರಿಶುದ್ದ ಬೈಬಲ್15 ಆದರೆ ದೇವರ ಉಚಿತ ಕೊಡುಗೆಯು ಆದಾಮನ ಪಾಪದಂತಿಲ್ಲ. ಆ ಒಬ್ಬನು ಮಾಡಿದ ಪಾಪದ ದೆಸೆಯಿಂದಾಗಿ ಅನೇಕ ಜನರು ಸತ್ತರು. ಆದರೆ ಜನರು ದೇವರಿಂದ ಪಡೆದುಕೊಂಡ ಕೃಪೆಯು ಅದಕ್ಕಿಂತ ಬಹು ದೊಡ್ಡದಾಗಿದೆ. ಯೇಸು ಕ್ರಿಸ್ತನೆಂಬ ಒಬ್ಬ ಪುರುಷನ ಕೃಪೆಯ ಮೂಲಕ ದೇವರು ಉಚಿತವಾಗಿ ಕೊಡುವ “ಜೀವ”ವನ್ನು ಅನೇಕ ಜನರು ಹೊಂದಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ಹೆಚ್ಚುಕಡಿಮೆ ಉಂಟು. ಹೇಗಂದರೆ ಆ ಒಬ್ಬನ ಅಪರಾಧದಿಂದ ಎಲ್ಲಾ ಮನುಷ್ಯರು ಸತ್ತದ್ದು ನಿಶ್ಚಯವಾಗಿರಲಾಗಿ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಎಲ್ಲಾ ಮನುಷ್ಯರಿಗೆ ಹೇರಳವಾಗಿ ಸಿದ್ಧವಾಗಿರುವದು ಮತ್ತೂ ನಿಶ್ಚಯವಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಆ ಅಪರಾಧಕ್ಕೂ ದೇವರ ವರಕ್ಕೂ ಬಹಳ ವ್ಯತ್ಯಾಸವಿದೆ. ಹೇಗೆಂದರೆ, ಆದಾಮನ ಅಪರಾಧದಿಂದ ಎಲ್ಲ ಮನುಷ್ಯರೂ ಸತ್ತರು. ಕ್ರಿಸ್ತ ಯೇಸುವೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದ ಸಿಕ್ಕುವ ದೇವರ ಕೃಪೆಯ ವರವು ಅನೇಕರಿಗೆ ಇನ್ನೂ ಹೆಚ್ಚಾಗಿ ಸಿಕ್ಕುವುದು ನಿಶ್ಚಯವಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಖರೆ ತೆನಿ ಆದಾಮ್ ಅನಿ ಕ್ರಿಸ್ತ್ ಎಕ್ಲೊಚ್ ನ್ಹಯ್ ಕಶ್ಯಾಕ್ ಮಟ್ಲ್ಯಾರ್ ದೆವ್ ಅಮ್ಕಾ ದಿತಲಿ ಘುಕೊಟ್ಚಿ ದೆನ್ಗಿ ಆದಾಂವಾಚೊ ಪಾಪ್ ನ್ಹಯ್. ಎಕ್ ಮಾನ್ಸಾಚ್ಯಾ ಪಾಪಾಕ್ ಲಾಗುನ್ ಲೈ ಲೊಕಾ ಮರ್ಲಿ ಹೆ ಖರೆ ಹಾಯ್. ಖರೆ ದೆವಾಚ್ಯಾ ಕುರ್ಪೆ ವೈನಾ ಲೈ ಲೊಕಾಕ್ನಿ ಹಿ ಕುರ್ಪಾ ಎಕ್ ಫುಕೊಟ್ಚಿ ದೆನ್ಗಿ ಸರ್ಕಿ ದಿವ್ನ್ ಹೊಲಾ, ತೊಚ್ ಜೆಜು ಕ್ರಿಸ್ತ್. ಅಧ್ಯಾಯವನ್ನು ನೋಡಿ |