ರೋಮಾಪುರದವರಿಗೆ 5:21 - ಪರಿಶುದ್ದ ಬೈಬಲ್21 ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೀಗೆ ಪಾಪವು ಮರಣವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯನ್ನು ಕೊಟ್ಟು ನಿತ್ಯಜೀವವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತಸೆಮನುನ್, ಕಶೆ ಪಾಪಾಕ್ ಲಾಗುನ್ ಮರ್ನಾನ್ ಅಪ್ಲೊ ಅದಿಕಾರ್ ಚಾಲ್ವುಲ್ಯಾನ್, ತಸೆಚ್ ದೆವಾಚಿ ಕುರ್ಪಾ ಖರ್ಯಾ ವಾಟೆನ್ ಚಲ್ತಲ್ಯಾ ವೈನಾ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಕ್ಡೆ ಚಾಲ್ವುನ್ ನ್ಹೆತಾ, ಅನಿ ಅಪ್ನಾಚೊ ಅದಿಕಾರ್ ಚಾಲ್ವುತಾ. ಅಧ್ಯಾಯವನ್ನು ನೋಡಿ |
ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.