Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:3 - ಪರಿಶುದ್ದ ಬೈಬಲ್‌

3 ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಷ್ಟೇ ಅಲ್ಲ, ನಮಗೆ ಬಂದೊದಗುವ ಕಷ್ಟಸಂಕಟಗಳಲ್ಲೂ ಹೆಮ್ಮೆಪಡುತ್ತೇವೆ. ಏಕೆಂದರೆ, ಕಷ್ಟಸಂಕಟಗಳು ಸಹನೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವಗಳಲ್ಲಿಯೂ ಉಲ್ಲಾಸವಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತವ್ಡೆಚ್ ಅಮ್ಚ್ಯಾ ತರಾಸಾಂಚ್ಯಾ ಸಾಟ್ನಿಬಿ ಅಮಿ ಖುಶಿ ಹೊತಾಂವ್ ಕಶ್ಯಾಕ್ ಮಟ್ಲ್ಯಾರ್, ಕಸ್ಟಾ ಅಮ್ಚಿ ಸೊಸುನ್ ಘೆವ್ನ್ ಜಾತಲಿ ತಾಕತ್ ಜಾಸ್ತಿ ಕರ್‍ತ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:3
21 ತಿಳಿವುಗಳ ಹೋಲಿಕೆ  

ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”


ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.


ನೀವು ನಿಮ್ಮ ನಂಬಿಕೆಯಲ್ಲಿ ದೃಢವಾಗಿದ್ದರೆ ನಿಮ್ಮನ್ನು ರಕ್ಷಿಸಿಕೊಳ್ಳುವಿರಿ.


ಹೀಗಿರಲಾಗಿ ನಾನು ನಿಮಗೋಸ್ಕರ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿ ನಿರಾಶರಾಗಿ ಧೈರ್ಯಗೆಡಬೇಡಿ. ನನ್ನ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.


ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.


ನೀವು ಕ್ರಿಸ್ತನಲ್ಲಿ ನಂಬಿಕೆಯಿಟ್ಟದ್ದು ದೇವರ ಅನುಗ್ರಹದಿಂದಲೇ. ಅಷ್ಟು ಮಾತ್ರವೇ ಅಲ್ಲ, ಕ್ರಿಸ್ತನಿಗೋಸ್ಕರ ಕಷ್ಟಪಡುವುದೂ ಸಹ ನಿಮಗೆ ಅನುಗ್ರಹವಾಗಿ ದೊರೆಯಿತು. ಇವೆರಡೂ ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುತ್ತವೆ.


ನಾನು ಯೆಹೋವನಲ್ಲಿ ಸಂತೋಷಿಸುವೆನು. ನನ್ನ ರಕ್ಷಕನಾದ ದೇವರಲ್ಲಿ ಸಂತೋಷಪಡುವೆನು.


ಇಷ್ಟು ಮಾತ್ರವಲ್ಲದೆ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಾವು ದೇವರಲ್ಲಿ ಹರ್ಷಿಸುತ್ತೇವೆ. ಈಗ ನಾವು ದೇವರ ಸ್ನೇಹಿತರಾಗಿರುವುದು ಯೇಸುವಿನಿಂದಲೇ.


ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.


ಅದಷ್ಟೇ ಅಲ್ಲ, ರೆಬೆಕ್ಕಳಿಗೂ ಇಬ್ಬರು ಗಂಡುಮಕ್ಕಳಿದ್ದರು. ಅವರಿಬ್ಬರಿಗೂ ಒಬ್ಬನೇ ತಂದೆ. ಅವನೇ ನಮ್ಮ ಪಿತೃವಾದ ಇಸಾಕನು.


ಇದಲ್ಲದೆ, ನಾವು ಈ ಸಹಾಯಧನವನ್ನು ತೆಗೆದುಕೊಂಡು ಹೋಗುವಾಗ ನಮ್ಮ ಸಂಗಡವಿರುವುದಕ್ಕಾಗಿ ಸಭೆಗಳವರು ಈ ಸಹೋದರನನ್ನು ಆಯ್ಕೆಮಾಡಿದ್ದಾರೆ. ದೇವರ ಮಹಿಮೆಗಾಗಿಯೂ ಮತ್ತು ಸಹಾಯ ಮಾಡಲು ನಿಜವಾಗಿ ಬಯಸುತ್ತೇವೆ ಎಂಬುದನ್ನು ತೋರಿಸುವುದಕ್ಕಾಗಿಯೂ ಈ ಸೇವಾಕಾರ್ಯವನ್ನು ಮಾಡುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು