Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:13 - ಪರಿಶುದ್ದ ಬೈಬಲ್‌

13 ನಿಮ್ಮ ದೇಹದ ಅಂಗಗಳನ್ನು ಪಾಪದ ಸೇವೆಗೆ ಒಪ್ಪಿಸಬೇಡಿ; ನಿಮ್ಮ ದೇಹಗಳನ್ನು ಪಾಪಕ್ಕೆ ಒಪ್ಪಿಸಿ ದುಷ್ಟತ್ವವನ್ನು ನಡೆಸುವ ಸಾಧನಗಳಾಗಬೇಡಿ. ಅದಕ್ಕೆ ಬದಲಾಗಿ, ನಿಮ್ಮನ್ನೇ ದೇವರಿಗೆ ಸಮರ್ಪಿಸಿಕೊಳ್ಳಿರಿ; ಸತ್ತು ಈಗ ಜೀವಂತವಾಗಿ ಎದ್ದುಬಂದಿರುವವರಂತೆ ಜೀವಿಸಿರಿ; ಒಳ್ಳೆಯ ಕಾರ್ಯಗಳನ್ನು ಮಾಡುವ ಸಾಧನಗಳನ್ನಾಗಿ ನಿಮ್ಮ ದೇಹದ ಅಂಗಗಳನ್ನು ದೇವರಿಗೆ ಸಮರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನಗಳನ್ನಾಗಿ ದೇವರಿಗೆ ಒಪ್ಪಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದು ಮಾತ್ರವಲ್ಲದೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು ದುಷ್ಟತ್ವವನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು ನಿಮ್ಮ ಅಂಗಗಳನ್ನು ನೀತಿ ಕೃತ್ಯಗಳನ್ನು ನಡಿಸುವ ಸಾಧನಗಳನ್ನಾಗಿ ಆತನಿಗೆ ಸಮರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಂಚ್ಯಾಸಾಟ್ನಿ ವಾಪ್ರುನ್ ಪಾಪಾತ್ ಪಡುಕ್ ತುಮ್ಚ್ಯಾ ಅಂಗಾಚ್ಯಾ ಖಲ್ಯಾಬಿ ಭಾಗಾಕ್ ತುಮಿ ಸೊಡುನ್ ದಿವ್ನಕಾಶಿ, ಹೆಚ್ಯಾ ಬದ್ಲಾಕ್, ಜೆ ಕೊನ್ ಮರ್‍ನಾತ್ನಾ ಝಿತ್ತೆ ಹೊವ್ನ್ ಉಟಲ್ಲೆ ಹಾತ್, ತೆಂಚ್ಯಾ ಸರ್ಕೆ ತುಮ್ಕಾಚ್ ತುಮಿ ದೆವಾಚ್ಯಾ ತಾಬೆತ್ ಒಪ್ಸುನ್ ದಿವಾ, ಅನಿ ತುಮ್ಚೊ ಸ್ವಬಾವ್ ಖರ್ಯಾ ಪಾನಾಚ್ಯಾ ಉದ್ದೆಸಾಂಚ್ಯಾಸಾಟಿ ವಾಪರ್ತಲ್ಯಾತ್ ಒಪ್ಸುನ್ ದಿವ್ನ್ ಸೊಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:13
39 ತಿಳಿವುಗಳ ಹೋಲಿಕೆ  

ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.


ಹಿಂದಿನ ಕಾಲದಲ್ಲಿ, ನಮ್ಮ ಪಾಪಾಧೀನಸ್ವಭಾವವು ನಮ್ಮನ್ನು ಆಳುತ್ತಿತ್ತು. ಪಾಪಕೃತ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಧರ್ಮಶಾಸ್ತ್ರವು ನಮ್ಮಲ್ಲಿ ಉಂಟುಮಾಡಿತು. ಮತ್ತು ನಾವು ಮಾಡಲಿಚ್ಛಿಸಿದ್ದ ಆ ಪಾಪಕೃತ್ಯಗಳು ನಮ್ಮ ದೇಹಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡವು. ಇದರಿಂದಾಗಿ, ನಾವು ಮಾಡಿದ ಕಾರ್ಯಗಳೆಲ್ಲ ನಮಗೆ ಆತ್ಮಿಕ ಮರಣವನ್ನು ಮಾತ್ರ ಉಂಟು ಮಾಡುತ್ತಿದ್ದವು.


ಆದ್ದರಿಂದ ಈ ಲೋಕದಲ್ಲಿ ನೀವು ಜನರ ಅಪೇಕ್ಷೆಗೆ ತಕ್ಕಂತೆ ಕೆಟ್ಟಕಾರ್ಯಗಳನ್ನು ಮಾಡದೆ, ದೇವರು ಅಪೇಕ್ಷಿಸುವಂಥ ಕಾರ್ಯಗಳನ್ನೇ ಮಾಡುತ್ತಾ ಜೀವಿಸಲು ನಿಮ್ಮನ್ನು ಬಲಪಡಿಸಿಕೊಳ್ಳಿರಿ.


ನೀವು ನಿಮ್ಮ ಪಾಪಗಳ ದೆಸೆಯಿಂದ ಮತ್ತು ನಿಮ್ಮ ಪಾಪ ಸ್ವಭಾವದ ಹಿಡಿತದಿಂದ ಇನ್ನೂ ಮುಕ್ತರಾಗದೆ ಇದ್ದುದರಿಂದ ಆತ್ಮಿಕವಾಗಿ ಸತ್ತವರಾಗಿದ್ದಿರಿ. ಆದರೆ ದೇವರು ನಿಮಗೆ ಕ್ರಿಸ್ತನೊಂದಿಗೆ ಜೀವವನ್ನು ದಯಪಾಲಿಸಿದನು. ಆತನು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದನು.


ನೀವು ದೇವರಿಂದ ಕ್ರಯಕ್ಕೆ ಕೊಳ್ಳಲ್ಪಟ್ಟವರು. ಆದ್ದರಿಂದ ನಿಮ್ಮ ದೇಹಗಳಿಂದ ದೇವರನ್ನು ಘನಪಡಿಸಿರಿ.


ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ.


ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಹೀಗಿರಲಾಗಿ, ನಾನು ಕ್ರಿಸ್ತನ ಅಂಗಗಳನ್ನು ತೆಗೆದುಕೊಂಡು ಅವುಗಳನ್ನು ಸೂಳೆಯ ಅಂಗಗಳನ್ನಾಗಿ ಮಾಡಕೂಡದು.


ನಾವು ದೇವರಿಗೆ ವಿರುದ್ಧವಾಗಿ ಮಾಡಿದ ಕಾರ್ಯಗಳ ದೆಸೆಯಿಂದ ಸತ್ತವರಾಗಿದ್ದೆವು. ಆದರೆ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ನೀವು ದೇವರ ಕೃಪೆಯಿಂದ ರಕ್ಷಣೆ ಹೊಂದಿದವರಾಗಿದ್ದೀರಿ.


ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ.


ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು.


ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.


ಪ್ರಪಂಚದವರು ಉಪಯೋಗಿಸುವ ಆಯುಧಗಳಿಗೆ ತದ್ವಿರುದ್ಧವಾದ ಆಯುಧಗಳೊಂದಿಗೆ ನಾವು ಹೋರಾಡುತ್ತೇವೆ. ನಮ್ಮ ಆಯುಧಗಳು ದೇವರ ಶಕ್ತಿಯನ್ನು ಹೊಂದಿವೆ. ಅವು ಶತ್ರುವಿನ ಬಲವಾದ ಕೋಟೆಗಳನ್ನು ನಾಶ ಮಾಡಬಲ್ಲವು. ನಾವು ಜನರ ವಾದಗಳನ್ನು ನಾಶಮಾಡುತ್ತೇವೆ.


ಅದೇ ರೀತಿಯಲ್ಲಿ ನೀವು ಸಹ ನಿಮ್ಮನ್ನು ಪಾಪದ ಶಕ್ತಿಯ ಪಾಲಿಗೆ ಸತ್ತವರೆಂದು ಮತ್ತು ಕ್ರಿಸ್ತ ಯೇಸುವಿನ ಮೂಲಕ ದೇವರಿಗಾಗಿ ಜೀವಿಸುವವರೆಂದು ಪರಿಗಣಿಸಿರಿ.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


ನಿಮ್ಮ ಪೂರ್ವಿಕರ ಹಾಗೆ ಮೊಂಡರಾಗಿರಬೇಡಿ. ನೀವು ಪೂರ್ಣಮನಸ್ಸಿನಿಂದ ದೇವರಿಗೆ ವಿಧೇಯರಾಗಿರಿ. ಆತನ ಶಾಶ್ವತವಾದ ಮಹಾಪವಿತ್ರಸ್ಥಳಕ್ಕೆ ಬನ್ನಿರಿ. ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ ಮತ್ತು ಆತನ ಸೇವೆಮಾಡಿರಿ. ಆಗ ನಿಮ್ಮ ಮೇಲಿರುವ ಆತನ ಕೋಪವು ಶಮನವಾಗುವುದು.


ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ: “ನಿದ್ರೆಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ನಾವೆಂದೂ ನೆನಸಿಲ್ಲದ ರೀತಿಯಲ್ಲಿ ಅವರು ಕೊಟ್ಟರು. ಅವರು ತಮ್ಮ ಹಣವನ್ನು ನಮಗೆ ಕೊಡುವುದಕ್ಕಿಂತ ಮೊದಲು ತಮ್ಮನ್ನೇ ಪ್ರಭುವಿಗೂ ನಮಗೂ ಒಪ್ಪಿಸಿಕೊಟ್ಟರು. ದೇವರು ಬಯಸುವುದು ಇದನ್ನೇ.


ಜೀವಿಸುವವರು ಇನ್ನು ಮೇಲೆ ತಮಗೋಸ್ಕರ ಜೀವಿಸಬಾರದೆಂದು ಕ್ರಿಸ್ತನು ಎಲ್ಲಾ ಜನರಿಗಾಗಿ ಸತ್ತನು. ಆ ಜನರು ತನಗೋಸ್ಕರ ಜೀವಿಸಲೆಂದು ಆತನು ಅವರಿಗೋಸ್ಕರ ಸತ್ತನು ಮತ್ತು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನು.


ಆದರೆ ನನ್ನ ದೇಹದಲ್ಲಿ ಮತ್ತೊಂದು ನಿಯಮ ಕೆಲಸ ಮಾಡುತ್ತಿರುವುದನ್ನು ನಾನು ಕಾಣುತ್ತೇನೆ. ನನ್ನ ಅಂತರಂಗ ಒಪ್ಪಿಕೊಳ್ಳುವ ನಿಯಮಕ್ಕೆ ವಿರುದ್ಧವಾಗಿ ಆ ನಿಯಮ ಹೋರಾಡುತ್ತದೆ. ನನ್ನ ದೇಹದಲ್ಲಿ ಕೆಲಸ ಮಾಡುತ್ತಿರುವ ಆ ಮತ್ತೊಂದು ನಿಯಮವೇ ಪಾಪದ ನಿಯಮವಾಗಿದೆ. ಆ ನಿಯಮವು ನನ್ನನ್ನು ತನ್ನ ಸೆರೆಯಾಳನ್ನಾಗಿ ಮಾಡುತ್ತದೆ.


ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”


ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಎಲ್ಲಿಂದ ಬರುತ್ತವೆಯೆಂಬುದು ನಿಮಗೆ ತಿಳಿದಿದೆಯೋ? ನಿಮ್ಮ ಸ್ವಾರ್ಥಪರ ಆಸೆಗಳಿಂದ ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಬರುತ್ತವೆ. ಅವು ನಿಮ್ಮ ಅಂತರಂಗದಲ್ಲಿ ಯುದ್ಧ ಮಾಡುತ್ತಿವೆ.


ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ;


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.


ನನ್ನ ಮಗನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತನಾಗಿ ಬಂದಿದ್ದಾನೆ! ಇವನು ತಪ್ಪಿಹೋಗಿದ್ದನು. ಈಗಲಾದರೋ ಮತ್ತೆ ಸಿಕ್ಕಿದ್ದಾನೆ!’ ಎಂದು ಹೇಳಿದನು. ಆದ್ದರಿಂದ ಅವರು ಉಲ್ಲಾಸಪಡುವುದಕ್ಕೆ ತೊಡಗಿದರು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.


ಎಲ್ಲಾ ಪ್ರಾಣಗಳು ನನ್ನವೇ. ತಂದೆಯ ಪ್ರಾಣವೂ ಮಗನ ಪ್ರಾಣವೂ ನನ್ನವೇ. ಪಾಪಮಾಡುವವನು ಮಾತ್ರ ಸಾಯುವನು.


ದುಡುಕಿದ ಮಾತು ಖಡ್ಗದಂತೆ ನೋವು ಮಾಡುತ್ತದೆ; ಜ್ಞಾನಿಯ ಮಾತು ಗುಣಪಡಿಸುತ್ತದೆ.


ನೀತಿವಂತನು ಒಳ್ಳೆಯ ಬುದ್ಧಿವಾದ ಹೇಳುವನು. ಅವನ ತೀರ್ಮಾನಗಳು ನ್ಯಾಯಬದ್ಧವಾಗಿರುತ್ತವೆ.


ಮೋಸವುಳ್ಳ ತೂಕದ ಕಲ್ಲುಗಳನ್ನು ಉಪಯೋಗಿಸುವವರನ್ನು ದೇವರಾದ ಯೆಹೋವನು ದ್ವೇಷಿಸುತ್ತಾನೆ. ಹೌದು, ಆತನು ಮೋಸ ಮಾಡುವವರನ್ನು ದ್ವೇಷಿಸುತ್ತಾನೆ.


ಸತ್ಯವನ್ನು ನಂಬದೆ, ಕೆಟ್ಟಕಾರ್ಯಗಳನ್ನು ಮಾಡುವುದರಲ್ಲಿ ಸಂತೋಷಪಡುವ ಜನರೆಲ್ಲರೂ ದಂಡನೆಗೆ ಒಳಗಾಗುವರು.


ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಿಸುತ್ತದೆ. ಏಕೆಂದರೆ, ಎಲ್ಲಾ ಜನರಿಗೋಸ್ಕರವಾಗಿ ಆತನು ಸತ್ತನೆಂಬುದು ನಮಗೆ ಗೊತ್ತಿದೆ. ಆದ್ದರಿಂದ ಎಲ್ಲರೂ ಸತ್ತುಹೋದರು.


ದೇವರ ದೃಷ್ಟಿಯಲ್ಲಿ ಯೋಗ್ಯ ವ್ಯಕ್ತಿಯಾಗಲು ನಿನ್ನಿಂದಾದಷ್ಟು ಪ್ರಯಾಸಪಡು ಮತ್ತು ನಿನ್ನನ್ನೇ ಒಪ್ಪಿಸಿಕೊಡು. ತನ್ನ ಕೆಲಸದಲ್ಲಿ ನಾಚಿಕೆಪಡದಿರುವ ಕೆಲಸಗಾರನಾಗು, ಅಂದರೆ ಸತ್ಯೋಪದೇಶವನ್ನು ಯೋಗ್ಯವಾದ ರೀತಿಯಲ್ಲಿ ತಿಳಿಸುವವನಾಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು