ರೋಮಾಪುರದವರಿಗೆ 6:14 - ಪರಿಶುದ್ದ ಬೈಬಲ್14 ಪಾಪವು ನಿಮ್ಮ ಒಡೆಯನಾಗಿರುವುದಿಲ್ಲ. ಏಕೆಂದರೆ, ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ಈಗ ನೀವು ದೇವರ ಕೃಪೆಯಲ್ಲಿ ಜೀವಿಸುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಏಕೆಂದರೆ ಪಾಪವು ಇನ್ನೆಂದಿಗೂ ನಿಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗದು; ನೀವಿನ್ನು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ದೈವಾನುಗ್ರಹಕ್ಕೆ ಮಾತ್ರ ಅಧೀನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯಾಕಂದರೆ ಪಾಪವು ನಿಮ್ಮ ಮೇಲೆ ಅಧಿಕಾರನಡಿಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಪಾಪ್ ತುಮ್ಚೊ ಯಜಮಾನ್ ಹೊತಲೆ ನಕ್ಕೊ; ಕಶ್ಯಾಕ್ ಮಟ್ಲ್ಯಾರ್ ತುಮಿ ಖಾಯ್ದ್ಯಾಂಚ್ಯಾ ತಾಬೆತ್ ನಾಶಿ ದೆವಾಚ್ಯಾ ಕುರ್ಪೆಚ್ಯಾ ತಾಬೆತ್ ಹಾಸಿ. ಅಧ್ಯಾಯವನ್ನು ನೋಡಿ |
ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.