Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:16 - ಪರಿಶುದ್ದ ಬೈಬಲ್‌

16 ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯಾರ ಕೈಕೆಳಗೆ ಗುಲಾಮರಾಗಿರಲು ನಿಮ್ಮನ್ನೇ ಒಪ್ಪಿಸಿಕೊಳ್ಳುತ್ತೀರೋ ಅವರಿಗೆ ನೀವು ಶರಣಾಗುತ್ತೀರಿ. ನೀವು ಪಾಪಕ್ಕೆ ಗುಲಾಮರಾದರೆ ಮರಣವೇ ನಿಮಗೆ ಗತಿ; ದೇವರಿಗೆ ಶರಣಾದರೆ ಸತ್ಸಂಬಂಧವೇ ಅದರ ಸತ್ಪರಿಣಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; [ನಂಬಿಕೆಯೆಂಬ] ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀವು ಯಾರಾದರೊಬ್ಬರಿಗೆ ವಿಧೇಯರಾಗಿರುವುದಕ್ಕಾಗಿ ಗುಲಾಮರಾಗಿ ನಿಮ್ಮನ್ನು ಒಪ್ಪಿಸಿಕೊಟ್ಟಾಗ, ನೀವು ಅವನಿಗೆ ವಿಧೇಯರಾದ ಗುಲಾಮರಾಗುತ್ತೀರಿ ಎಂಬುದು ನಿಮಗೆ ತಿಳಿಯದೋ? ಮರಣಕ್ಕೆ ನಡೆಸುವ ಪಾಪಕ್ಕೆ ನೀವು ಗುಲಾಮರಾಗಿರಬಹುದು ಇಲ್ಲವೆ ನೀತಿಗೆ ನಡೆಸುವ ವಿಧೇಯತೆಗೆ ಒಳಪಟ್ಟಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಮಿ ಜೆ ಕೊನಾಕ್ ತುಮ್ಕಾಚ್ ಗುಲಾಮ್ ಕರುನ್ ಒಪ್ಸುನ್ ದಿತ್ಯಾಶಿ ತ್ಯಾ ಯಜಮಾನಾಕುಚ್ ಖಾಲ್ತಿ ಹೊವ್ನ್ ಚಲುಕ್ ಪಾಜೆ ಮನ್ತಲೆ ತುಮ್ಕಾ ಗೊತ್ತುಚ್ ಹಾಯ್ ಪಾಪಾಚೊ ಪ್ರತಿಪಳ್ ಮರಾನ್, ನಾಹೊಲ್ಯಾರ್ ದೆವಾಕ್ ಖಾಲ್ತಿ ಹೊವ್ನ್ ಚಲ್ತಲ್ಯಾಕ್ ಖರ್ಯಾ ವಾಟೆನ್ ಚಲ್ತಲೊ ಮನುನ್ ಠರ್‍ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:16
18 ತಿಳಿವುಗಳ ಹೋಲಿಕೆ  

ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪಾಪಮಾಡುವ ಪ್ರತಿಯೊಬ್ಬನೂ ಪಾಪಕ್ಕೆ ಗುಲಾಮನಾಗಿದ್ದಾನೆ. ಪಾಪವು ಅವನ ಯಜಮಾನನಾಗಿದೆ.


ಈ ಸುಳ್ಳುಬೋಧಕರು ಆ ಜನರಿಗೆ ಸ್ವಾತಂತ್ರ್ಯವನ್ನು ಕೊಡುವುದಾಗಿ ವಾಗ್ದಾನ ಮಾಡುತ್ತಾರೆ. ಆದರೆ ಈ ಸುಳ್ಳುಬೋಧಕರೇ ಸ್ವತಂತ್ರರಾಗದೆ ನಾಶವಾಗುವಂಥ ಸಂಗತಿಗಳಿಗೆ ಗುಲಾಮರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತುಹೋಗಿದ್ದಾನೋ ಅದಕ್ಕೆ ಗುಲಾಮನಾಗಿದ್ದಾನೆ.


“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.


“ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.


ಹಿಂದಿನ ಕಾಲದಲ್ಲಿ ನೀವು ಪಾಪಕ್ಕೆ ಗುಲಾಮರಾಗಿದ್ದಿರಿ. ಪಾಪವು ನಿಮ್ಮನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿತ್ತು. ನಿಮಗೆ ಬೋಧಿಸಿದ ವಿಷಯಗಳಿಗೆ ನೀವು ಸಂಪೂರ್ಣವಾಗಿ ವಿಧೇಯರಾದ್ದರಿಂದ ದೇವರಿಗೆ ಸ್ತೋತ್ರವಾಗಲಿ.


ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದನು.


ಇಸ್ರೇಲರು ಹುಟ್ಟುವುದಕ್ಕಿಂತ ಮೊದಲೇ ದೇವರು ಅವರನ್ನು ತನ್ನ ಜನರನ್ನಾಗಿ ಆರಿಸಿಕೊಂಡನು. ಆತನು ಅವರನ್ನು ಹೊರಕ್ಕೆ ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ಇಸ್ರೇಲಿನ ಜನರ ವಿರೋಧವಾಗಿ ಎಲೀಯನು ದೇವರಿಗೆ ಮಾಡಿದ ಪ್ರಾರ್ಥನೆಯ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿದೆ.


ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ನೀವೇ ದೇವರ ಆಲಯವಾಗಿದ್ದೀರಿ. ಇದು ನಿಮಗೆ ಚೆನ್ನಾಗಿ ತಿಳಿದಿದೆ. ದೇವರಾತ್ಮನು ನಿಮ್ಮೊಳಗೆ ವಾಸವಾಗಿದ್ದಾನೆ.


ನೀವು ಅಹಂಕಾರಪಡುವುದು ಒಳ್ಳೆಯದಲ್ಲ. “ಒಂದಿಷ್ಟು ಹುಳಿಯು ಹಿಟ್ಟನ್ನೆಲ್ಲಾ ಉಬ್ಬಿಸುತ್ತದೆ” ಎಂಬ ನುಡಿಯು ನಿಮಗೆ ಗೊತ್ತೇ ಇದೆ.


ದೇವಜನರು ಲೋಕಕ್ಕೆ ತೀರ್ಪು ಮಾಡುವರೆಂಬುದು ನಿಮಗೆ ತಿಳಿಯದೋ? ದೇವಜನರು ಲೋಕಕ್ಕೆ ನ್ಯಾಯತೀರ್ಪು ಮಾಡುವವರಾಗಿದ್ದರೆ, ಇಂಥ ಚಿಕ್ಕ ಸಂಗತಿಗಳ ಬಗ್ಗೆಯೂ ನ್ಯಾಯತೀರ್ಪು ಮಾಡಬಲ್ಲರೆಂಬುದು ನಿಶ್ಚಯವಾಗಿದೆ.


ಮುಂದಿನ ಕಾಲದಲ್ಲಿ ನಾವು ದೇವದೂತರಿಗೂ ನ್ಯಾಯತೀರಿಸುತ್ತೇವೆ ಎಂಬುದು ನಿಮಗೆ ಗೊತ್ತಿದೆ. ಆದ್ದರಿಂದ ಈ ಜೀವಿತದ ಸಂಗತಿಗಳನ್ನು ಕುರಿತು ನಾವು ತೀರ್ಪುಮಾಡಬಲ್ಲೆವು.


ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು.


ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.


ಓಟದ ಸ್ಪರ್ಧೆಯಲ್ಲಿ ಎಲ್ಲಾ ಓಟಗಾರರು ಓಡುತ್ತಾರೆಂಬುದು ನಿಮಗೆ ಗೊತ್ತಿದೆ. ಆದರೆ ಅವರಲ್ಲಿ ಒಬ್ಬನು ಮಾತ್ರ ಬಹುಮಾನವನ್ನು ಪಡೆದುಕೊಳ್ಳುತ್ತಾನೆ. ಆದ್ದರಿಂದ ಆ ರೀತಿಯಲ್ಲಿ ಓಡಿರಿ; ಗೆಲ್ಲುವುದಕ್ಕಾಗಿ ಓಡಿರಿ.


ಅವನು ಅವರಿಗೆ, ‘ನೀವು ಹೋಗಿ ನನ್ನ ತೋಟದಲ್ಲಿ ಕೆಲಸ ಮಾಡುವುದಾದರೆ ನಿಮ್ಮ ಕೆಲಸಕ್ಕೆ ಯೋಗ್ಯವಾದ ಕೂಲಿಯನ್ನು ಕೊಡುತ್ತೇನೆ’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು