ರೋಮಾಪುರದವರಿಗೆ 6:21 - ಪರಿಶುದ್ದ ಬೈಬಲ್21 ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಅತ್ತಾ ತುಮ್ಕಾ ಲಜ್ಜಾ ದಿಸಿ ಸರ್ಕೆ ಕರ್‍ತಲ್ಯಾ ತ್ಯಾ ತುಮಿ ಕರಲ್ಲ್ಯಾ ಕಾಮಾಂಚ್ಯಾ ವೈನಾ ತುಮ್ಕಾ ಕಾಯ್ ಗಾವ್ಲೆ? ತ್ಯಾ ಕಾಮಾಂಚೊ ಪ್ರತಿಪಳ್ ಮರಾನ್! ಅಧ್ಯಾಯವನ್ನು ನೋಡಿ |
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.
ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.
ಅವರು ತಮ್ಮ ಎಲ್ಲಾ ಪಾಪಗಳ ನಿಮಿತ್ತ ನಾಚಿಕೆಪಡುವರು. ಆಲಯದ ವಿನ್ಯಾಸವನ್ನು ಅವರು ತಿಳಿದುಕೊಳ್ಳಲಿ. ಅದು ಹೇಗೆ ಕಟ್ಟಲ್ಪಡಬೇಕೆಂಬುದನ್ನು, ಪ್ರವೇಶ ದ್ವಾರಗಳು ಮತ್ತು ಹೊರಗೆ ಹೋಗುವ ಬಾಗಿಲುಗಳು ಎಲ್ಲಿರಬೇಕೆಂಬುದನ್ನು ಮತ್ತು ಅವುಗಳ ಮೇಲೆ ಇರಬೇಕಾದ ಎಲ್ಲಾ ಚಿತ್ರಗಳನ್ನು ಅವರು ತಿಳಿದುಕೊಳ್ಳಲಿ. ಅದರ ನಿಯಮಗಳನ್ನು, ಕಟ್ಟಳೆಗಳನ್ನು ಅವರಿಗೆ ಬೋಧಿಸಿರಿ. ಅವರು ಎಲ್ಲಾ ಧರ್ಮಬೋಧನೆಗಳನ್ನು ಅನುಸರಿಸುವಂತೆ ಎಲ್ಲಾ ಕಟ್ಟಳೆಗಳನ್ನು ಬರೆದಿಡಿರಿ.
ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.
ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.