Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:22 - ಪರಿಶುದ್ದ ಬೈಬಲ್‌

22 ಆದರೆ ಈಗ ನೀವು ಪಾಪದಿಂದ ಬಿಡುಗಡೆಯಾಗಿ ದೇವರ ಗುಲಾಮರಾಗಿದ್ದೀರಿ. ಇದರಿಂದ ನಿಮಗೆ ಪರಿಶುದ್ಧ ಜೀವನವೂ ನಿತ್ಯಜೀವವೂ ದೊರೆಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ಅತ್ತಾ ತುಮ್ಕಾ ಪಾಪಾತ್ನಾ ಸ್ವತಂತ್ರ್ ಕರುನ್ ದೆವಾಚಿ ಗುಲಾಮಾ ಕರುನ್ ಹೊಲಾ. ತುಮ್ಕಾ ಪವಿತ್ರಪಾನಾಚೆ ಜಿವನ್ ಗಾವ್ಲಾ, ಅನಿ ಹೆಚೊ ಪ್ರತಿಫಳ್ ಕನ್ನಾಚ್ ಮರಾನ್ ನಸಲ್ಲೆ ಜಿವನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:22
40 ತಿಳಿವುಗಳ ಹೋಲಿಕೆ  

ಸ್ವತಂತ್ರ ಹೊಂದಿದವರಂತೆ ಜೀವಿಸಿರಿ. ಆದರೆ ನೀವು ಮಾಡುವ ಕೆಟ್ಟಕಾರ್ಯಗಳನ್ನು ಮರೆಮಾಡಲು ಆ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿ. ನೀವು ದೇವರ ಸೇವೆಯನ್ನು ಮಾಡುತ್ತಾ ಜೀವಿಸಿರಿ.


ನೀವು ಪಾಪದಿಂದ ಬಿಡುಗಡೆ ಹೊಂದಿದ್ದೀರಿ. ಈಗ ನೀವು ನೀತಿಗೆ ಗುಲಾಮರಾಗಿದ್ದೀರಿ.


ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.


ನೀವು ಸತ್ಯವನ್ನು ತಿಳಿದುಕೊಳ್ಳುವಿರಿ. ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.


ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.


ದೇವರು ಕರೆದಾಗ ಗುಲಾಮನಾಗಿದ್ದವನು ಪ್ರಭುವಿನಲ್ಲಿ ಬಿಡುಗಡೆಯಾಗಿದ್ದಾನೆ. ಅವನು ಪ್ರಭುವಿಗೆ ಸೇರಿದವನಾಗಿದ್ದಾನೆ. ಅದೇರೀತಿಯಲ್ಲಿ ದೇವರು ಕರೆದಾಗ ಸ್ವತಂತ್ರನಾಗಿದ್ದವನು ಈಗ ಕ್ರಿಸ್ತನ ಗುಲಾಮನಾಗಿದ್ದಾನೆ.


ನಿಮ್ಮ ನಂಬಿಕೆಗೆ ಒಂದು ಗುರಿಯಿದೆ. ನಿಮ್ಮ ಆತ್ಮವನ್ನು ರಕ್ಷಿಸಬೇಕೆಂಬುದೇ ಆ ಗುರಿ. ನಿಮ್ಮ ಗುರಿಯಾಗಿರುವ ರಕ್ಷಣೆಯನ್ನು ಹೊಂದಿಕೊಳ್ಳುವಿರಿ.


ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ.


ಪಾಪವು ನಿಮ್ಮ ಒಡೆಯನಾಗಿರುವುದಿಲ್ಲ. ಏಕೆಂದರೆ, ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ಈಗ ನೀವು ದೇವರ ಕೃಪೆಯಲ್ಲಿ ಜೀವಿಸುವವರಾಗಿದ್ದೀರಿ.


“ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ನನ್ನ ಸಹೋದರ ಸಹೋದರಿಯರೇ, ಇದೇ ರೀತಿಯಲ್ಲಿ ನಿಮ್ಮ ಹಳೆಯ ಸ್ವಭಾವವು ಸತ್ತುಹೋಯಿತು; ನೀವು ಕ್ರಿಸ್ತನ ದೇಹದ ಮೂಲಕ ಧರ್ಮಶಾಸ್ತ್ರದಿಂದ ಬಿಡುಗಡೆಯಾದಿರಿ. ಈಗ ನೀವು, ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಾತನಿಗೆ ಸೇರಿದವರಾಗಿದ್ದೀರಿ. ನಾವು ದೇವರಿಗೋಸ್ಕರ ಫಲವನ್ನು ಫಲಿಸುವುದಕ್ಕಾಗಿ ಕ್ರಿಸ್ತನಿಗೆ ಸೇರಿದವರಾಗಿದ್ದೇವೆ.


ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


ಆಗ ನೆಬೂಕದ್ನೆಚ್ಚರನು ಉರಿಯುವ ಕೊಂಡದ ಬಾಯಿಯ ಬಳಿಗೆ ಹೋಗಿ, “ಮಹೋನ್ನತನಾದ ದೇವರ ಸೇವಕರಾದ ಶದ್ರಕ್, ಮೇಶಕ್, ಅಬೆದ್‌ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ” ಎಂದು ಕೂಗಿದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಬೆಂಕಿಯೊಳಗಿಂದ ಹೊರಗೆ ಬಂದರು.


ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನನ್ನನ್ನು ಕೊಲ್ಲಬೇಕೆಂದಿರುವ ಶತ್ರುಗಳನ್ನು ಸೋಲಿಸು. ನಾನು ನಿನ್ನ ಸೇವಕನಾಗಿರುವೆ.


ದೇವರ ಸೇವಕನಾದ ಮತ್ತು ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ದೇವರು ಆರಿಸಿಕೊಂಡ ಜನರ ನಂಬಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಮತ್ತು ಅವರಿಗೆ ಸತ್ಯವನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಲಾಯಿತು. ದೇವರ ಸೇವೆಯನ್ನು ಹೇಗೆ ಮಾಡಬೇಕೆಂಬುದನ್ನು ಆ ಸತ್ಯವು ತೋರ್ಪಡಿಸುತ್ತಿದೆ.


ಪ್ರಭುವಿಗೆ ಯೋಗ್ಯರಾಗಿ ನಡೆದು ಪ್ರತಿಯೊಂದು ವಿಷಯದಲ್ಲಿ ಆತನನ್ನು ಸಂತೋಷಪಡಿಸಬೇಕೆಂತಲೂ ನೀವು ಎಲ್ಲಾ ವಿಧವಾದ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ದೇವಜ್ಞಾನದಲ್ಲಿ ಬೆಳಯಬೇಕೆಂತಲೂ


ನಿಜವಾಗಿಯೂ, ನಿಮ್ಮಿಂದ ಕೊಡುಗೆಗಳನ್ನು ಪಡೆದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಲ್ಲ. ಆದರೆ ಕೊಡುವುದರ ಮೂಲಕ ಮುಂದೆ ಹೇರಳವಾಗಿ ದೊರೆಯುವ ಆಶೀರ್ವಾದಗಳನ್ನು ನೀವು ಹೊಂದಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ.


ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು.


ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಂಡುಬರುತ್ತದೆ.


ಆ ಪ್ರಭುವು ಪವಿತ್ರಾತ್ಮನೇ. ಎಲ್ಲಿ ಪ್ರಭುವಿನ ಆತ್ಮನು ಇರುತ್ತಾನೋ ಅಲ್ಲಿ ಸ್ವತಂತ್ರವಿರುತ್ತದೆ.


ದೇವರು ನನ್ನನ್ನು ರಕ್ಷಿಸುವನು! ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಮೂಲಕ ಆತನು ದಯಪಾಲಿಸುವ ರಕ್ಷಣೆಗಾಗಿ ಆತನಿಗೆ ಸ್ತೋತ್ರವಾಗಲಿ! ಆದ್ದರಿಂದ ನನ್ನ ಅಂತರಂಗದಲ್ಲಿ ನಾನು ದೇವರ ನಿಯಮಕ್ಕೆ ಗುಲಾಮನಾಗಿದ್ದೇನೆ. ಆದರೆ ನನ್ನ ಪಾಪಾಧೀನಸ್ವಭಾವದಲ್ಲಿ ನಾನು ಪಾಪದ ನಿಯಮಕ್ಕೆ ಗುಲಾಮನಾಗಿದ್ದೇನೆ.


“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


ಫಲಕೊಡದಿರುವ ಪ್ರತಿಯೊಂದು ಕವಲನ್ನು ಆತನು ಕತ್ತರಿಸಿಹಾಕುವನು. ಫಲಕೊಡುವ ಕವಲು ಇನ್ನೂ ಹೆಚ್ಚು ಫಲಕೊಡುವಂತೆ ಅದನ್ನು ಶುದ್ಧಗೊಳಿಸುವನು.


ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು.


ನನ್ನನ್ನು ಹಿಂಬಾಲಿಸಲು ತಮ್ಮ ಮನೆಗಳನ್ನು, ಸಹೋದರ ಸಹೋದರಿಯರನ್ನು, ತಂದೆತಾಯಿಗಳನ್ನು, ಮಕ್ಕಳನ್ನು ಇಲ್ಲವೆ ಆಸ್ತಿಯನ್ನು ತ್ಯಜಿಸಿದ ಪ್ರತಿಯೊಬ್ಬರು ತಾವು ಬಿಟ್ಟವುಗಳಿಗಿಂತ ಹೆಚ್ಚಾಗಿ ಪಡೆಯುತ್ತಾರೆ. ಅಲ್ಲದೆ ನಿತ್ಯಜೀವವನ್ನೂ ಹೊಂದಿಕೊಳ್ಳುತ್ತಾರೆ.


ಒಳ್ಳೆಯವರಾದರೋ ಸೂರ್ಯನಂತೆ ಪ್ರಕಾಶಿಸುತ್ತಾ ತಮ್ಮ ತಂದೆಯ ರಾಜ್ಯದಲ್ಲಿರುವರು. ನನಗೆ ಕಿವಿಗೊಡುವ ಜನರೇ, ಆಲಿಸಿರಿ!


“ಹಣಜಿಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ಈ ಲೋಕದ ಅಂತ್ಯದಲ್ಲಿ ಆಗುವಂಥದ್ದು ಇದೇ.


ಅವರು ಮುಪ್ಪಿನಲ್ಲಿಯೂ ಪುಷ್ಟಿಯಾಗಿ ಬೆಳೆದಿರುವ ಎಲೆಮರಗಳಂತೆ ಫಲಿಸುವರು.


ಆಗ ಯೆಹೋವನು, “ನನ್ನ ಸೇವಕನಾದ ಯೋಬನ ಬಗ್ಗೆ ಆಲೋಚಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ” ಎಂದು ಹೇಳಿದನು.


ಧೂಳಿನಷ್ಟು ಅಸಂಖ್ಯವಾದ ಯಾಕೋಬ್ಯರನ್ನು ಲೆಕ್ಕಿಸುವುದಕ್ಕೆ ಯಾರಿಂದಾದೀತು; ಇಸ್ರೇಲರ ಕಾಲು ಭಾಗವನ್ನಾದರೂ ಯಾರೂ ಲೆಕ್ಕಿಸಲಾರರು. ಸಜ್ಜನರಾದ ಅವರು ಸಾಯುವ ರೀತಿಯಲ್ಲೇ ನಾನೂ ಸಾಯಲು ಬಯಸುವೆ. ಅವರಿಗುಂಟಾಗುವ ಅಂತ್ಯ ನನಗೂ ಉಂಟಾಗಲಿ.”


ನೀವು ಯೋಸೇಫನಿಗೆ, ಈ ಸಂದೇಶವನ್ನು ಕೊಡಬೇಕು, ‘ನಾವು ಮಾಡಿದ್ದು ಕೆಟ್ಟಕಾರ್ಯವೇ ನಿಜ. ಅದಕ್ಕಾಗಿ ನೀನು ಅವರನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.’ ಆದ್ದರಿಂದ ನಾವು ಮಾಡಿದ ಕೆಟ್ಟಕಾರ್ಯಕ್ಕಾಗಿ ನೀನು ನಮ್ಮನ್ನು ಕ್ಷಮಿಸಬೇಕು. ನಾವು ನಿನ್ನ ತಂದೆಯ ದೇವರಿಗೆ ಸೇವಕರಾಗಿದ್ದೇವೆ” ಎಂದು ಹೇಳಿದರು. ಈ ವಿಷಯಗಳನ್ನು ಕೇಳಿ ಅವನು ದುಃಖದಿಂದ ಅತ್ತನು.


ಆಗ ಹಿರಿಯರಲ್ಲೊಬ್ಬನು, “ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡಿರುವ ಈ ಜನರು ಯಾರು! ಅವರು ಎಲ್ಲಿಂದ ಬಂದವರು?” ಎಂದು ನನ್ನನ್ನು ಕೇಳಿದನು.


ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ.


ರಾಜನಿಗೆ ಬಹಳ ಚಿಂತೆಯಾಗಿತ್ತು. ರಾಜನು ಸಿಂಹಗಳ ಗುಹೆಗೆ ಹೋಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಸೇವೆ ಮಾಡುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉಳಿಸಲು ಶಕ್ತನಾದನೇ?” ಎಂದು ಕೂಗಿ ಕೇಳಿದನು.


ಯೆಹೋವನೇ, ನಾನು ನಿನ್ನ ಭಕ್ತನು! ದಯವಿಟ್ಟು ನನ್ನನ್ನು ಸಂರಕ್ಷಿಸು! ನಾನು ನಿನ್ನ ಸೇವಕನು, ನೀನು ನನ್ನ ದೇವರು. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ರಕ್ಷಿಸು.


ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ.


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು