ರೋಮಾಪುರದವರಿಗೆ 6:3 - ಪರಿಶುದ್ದ ಬೈಬಲ್3 ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನಲ್ಲಿ ಪಾಲುಗಾರರಾದೆವು ಎಂಬುದನ್ನು ನೀವು ಮರೆತುಬಿಟ್ಟಿರಾ? ನಮ್ಮ ದೀಕ್ಷಾಸ್ನಾನದ ಮೂಲಕ ನಾವು ಆತನ ಮರಣದಲ್ಲಿ ಪಾಲುಗಾರರಾದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕ್ರಿಸ್ತಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕ್ರಿಸ್ತ ಯೇಸುವಿನಲ್ಲಿ ಸೇರುವದಕ್ಕೆ ದೀಕ್ಷಾಸ್ನಾನಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಪಾಲುಗಾರರಾಗುವದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತೆಚೆಸಾಟ್ನಿ ತುಮ್ಕಾ ಖರೆಚ್ ಗೊತ್ತ್ ರ್‍ಹಾಂವ್ದಿತ್ ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾವ್‍ಸಾಟ್ನಿ ಮನುನ್ ಅಮಿ ಬಾಲ್ತಿಮ್ ಘೆಟ್ಲ್ಯಾಂವ್ ತನ್ನಾ ತೆಚ್ಯಾ ಮರ್ನಾತ್‍ಬಿ ಅಮಿ ವಾಟೊ ಘೆತಾಂವ್. ಅಧ್ಯಾಯವನ್ನು ನೋಡಿ |
ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.