ರೋಮಾಪುರದವರಿಗೆ 6:6 - ಪರಿಶುದ್ದ ಬೈಬಲ್6 ನಮ್ಮ ಹಳೆಯ ಜೀವಿತವು ಕ್ರಿಸ್ತನೊಂದಿಗೆ ಶಿಲುಬೆಯ ಮೇಲೆ ಸತ್ತುಹೋಯಿತೆಂಬುದು ನಮಗೆ ಗೊತ್ತಿದೆ. ನಮ್ಮ ಪಾಪಸ್ವಭಾವಕ್ಕೆ ನಮ್ಮ ಮೇಲೆ ಯಾವ ಅಧಿಕಾರ ಇರಬಾರದೆಂತಲೂ ನಾವು ಪಾಪಕ್ಕೆ ಗುಲಾಮರಾಗಿರಬಾರದೆಂತಲೂ ಹೀಗಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಪಾಪಾಧೀನಸ್ವಭಾವವು ನಾಶವಾಗಿ ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿತೆಂದು ತಿಳಿದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅಮ್ಕಾ ಗೊತ್ತ್ ಅಸಲ್ಲ್ಯಾ ಸರ್ಕೆ ಅಮ್ಚ್ಯಾ ಜುನ್ನ್ಯಾ ಸ್ವಬಾವಾಕ್ ಕ್ರಿಸ್ತಾಚ್ಯಾ ವಾಂಗ್ಡಾ ಕುರ್ಸಾ ವರ್‍ತಿ ಮಾರುನ್ ಮರುಕ್ ಸೊಡುನ್ ಹೊಲಾ, ಅಶೆ ಪಾಪಾಚೊ ನಾಸ್ ಹೊವ್ಚೊ ಅನಿ ಅಮಿ ಪಾಪಾಚಿ ಗುಲಾಮಾ ಹೊವ್ನ್ ರ್‍ಹಾವ್ಚೆ ನ್ಹಯ್ ಮನುನ್ ಅಶೆ ಘಡ್ಲೆ. ಅಧ್ಯಾಯವನ್ನು ನೋಡಿ |
ಆಗ ನಾಮಾನನು, “ನೀನು ಈ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ಕೊನೆಯಪಕ್ಷ ನನಗಾಗಿ ಈ ಕಾರ್ಯವನ್ನು ಮಾಡು. ನನ್ನ ಎರಡು ಹೇಸರಕತ್ತೆಗಳ ಮೇಲಿನ ಬುಟ್ಟಿಗಳು ತುಂಬುವಷ್ಟು ಇಸ್ರೇಲಿನ ಮಣ್ಣನ್ನು ನನಗೆ ಕೊಡಿಸಬೇಕೆಂದು ಬೇಡುತ್ತೇನೆ. ಏಕೆಂದರೆ ಇತರ ದೇವರುಗಳಿಗೆ ನಾನು ಮತ್ತೆ ಎಂದೆಂದಿಗೂ ಸರ್ವಾಂಗಹೋಮವನ್ನಾಗಲಿ ಯಜ್ಞಗಳನ್ನಾಗಲಿ ಅರ್ಪಿಸುವುದಿಲ್ಲ. ನಾನು ಯೆಹೋವನಿಗೆ ಮಾತ್ರ ಯಜ್ಞಗಳನ್ನು ಅರ್ಪಿಸುತ್ತೇನೆ!