ರೋಮಾಪುರದವರಿಗೆ 7:1 - ಪರಿಶುದ್ದ ಬೈಬಲ್1 ಸಹೋದರ ಸಹೋದರಿಯರೇ, ನೀವೆಲ್ಲರು ಮೋಶೆಯ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳುತ್ತೀರಿ. ಒಬ್ಬ ವ್ಯಕ್ತಿಯು ಜೀವದಿಂದಿರುವವರೆಗೆ ಮಾತ್ರ ಧರ್ಮಶಾಸ್ತ್ರವು ಆ ವ್ಯಕ್ತಿಯನ್ನು ಆಳುತ್ತದೆ ಎಂಬುದು ನಿಮಗೆ ತಿಳಿದಿಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರೊಂದಿಗೆ ನಾನು ಮಾತನಾಡುತ್ತಿದ್ದೇನೆ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಅವನ ಮೇಲೆ ಧರ್ಮಶಾಸ್ತ್ರವು ನಿಯಂತ್ರಣ ಸಾಧಿಸುತ್ತದೆಂಬುದು ನಿಮಗೆ ಗೊತ್ತಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಹೋದರರೇ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಧರ್ಮಶಾಸ್ತ್ರದ ನೇಮನಿಯಮಗಳಿಗೆ ಒಳಪಟ್ಟಿರುತ್ತಾನೆ. ಧರ್ಮಶಾಸ್ತ್ರವನ್ನು ಅರಿತಿರುವ ನೀವು ಇದನ್ನು ಗ್ರಹಿಸಿಕೊಳ್ಳಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರಿಗೆ ನಾನು ಹೇಳುವದೇನಂದರೆ - ಒಬ್ಬ ಮನುಷ್ಯನು ಜೀವದಿಂದಿರುವ ತನಕ ಮಾತ್ರ ಅವನ ಮೇಲೆ ಧರ್ಮಶಾಸ್ತ್ರದ ಅಧಿಕಾರವು ನಡೆಯುತ್ತದೆಂಬದು ನಿಮಗೆ ಗೊತ್ತಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರಿಯರೇ, ನಿಯಮವನ್ನು ತಿಳಿದವರಿಗೆ ನಾನು ಹೇಳುವುದೇನೆಂದರೆ, ಒಬ್ಬ ಮನುಷ್ಯನು ಜೀವದಿಂದಿರುವ ತನಕ ಮಾತ್ರ ನಿಯಮಕ್ಕೆ ಅವನ ಮೇಲೆ ಅಧಿಕಾರ ಇರುತ್ತದೆಂದು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಮಾಜ್ಯಾ ಪ್ರಿತಿಚ್ಯಾನು, ಮಿಯಾ ಸಾಂಗ್ತಲ್ಯಾ ವಿಶಯಾತ್ ತುಮ್ಕಾ ಖರೆಚ್ ಸಮಾ ಕಳ್ತಾ; ಕಶ್ಯಾಕ್ ಮಟ್ಲ್ಯಾರ್ ತುಮ್ಕಾ ಸಗ್ಳ್ಯಾಕ್ನಿ ಖಾಯ್ದ್ಯಾಚ್ಯಾ ವಿಶಯಾತ್ ಗೊತ್ತ್ ಹಾಯ್. ಖಾಯ್ದೊ ಲೊಕಾ ಝಿತ್ತಿ ರ್‍ಹಾಯ್ ಪತರ್ ಎವ್ಡೆಚ್ ತೆಂಚೆ ವರ್‍ತಿ ಅಪ್ನಾಚೊ ರಾಜ್ ಚಾಲ್ವುತಾ. ಅಧ್ಯಾಯವನ್ನು ನೋಡಿ |
ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.