ರೋಮಾಪುರದವರಿಗೆ 7:10 - ಪರಿಶುದ್ದ ಬೈಬಲ್10 ನಾನು ಪಾಪದ ನಿಮಿತ್ತ ಆತ್ಮಿಕವಾಗಿ ಸತ್ತುಹೋದೆನು. ಜೀವವನ್ನು ತರಬೇಕಾಗಿದ್ದ ಆಜ್ಞೆಯೇ ನನಗೆ ಮರಣವನ್ನು ತಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಜೀವಿಸುವುದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾನಾದರೋ ಸತ್ತೆನು. ಜೀವದಾಯಕವಾಗಬೇಕಿದ್ದ ಆಜ್ಞೆಯೇ ನನಗೆ ಮೃತ್ಯುಕಾರಕವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಜೀವಿಸುವದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಜೀವವನ್ನು ತರಲಿಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣವನ್ನು ಉಂಟುಮಾಡುವುದಾಯಿತು ಎಂದು ಕಂಡುಕೊಂಡೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅನಿ ಮಿಯಾ ಮರ್ಲೊ ಜಿವ್ ದಿವ್ಕ್ ಮನುನ್ ಹೊತ್ತ್ಯಾ ಖಾಯ್ದ್ಯಾನ್ ಮಾಜ್ಯಾ ವಿಶಯಾತ್ ಮರಾನ್ ಘೆವ್ನ್ ಯೆಲ್ಯಾನ್. ಅಧ್ಯಾಯವನ್ನು ನೋಡಿ |
“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.
“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.