ರೋಮಾಪುರದವರಿಗೆ 7:15 - ಪರಿಶುದ್ದ ಬೈಬಲ್15 ನಾನು ಮಾಡುವ ಕಾರ್ಯಗಳು ನನಗೇ ಅರ್ಥವಾಗುವುದಿಲ್ಲ. ನಾನು ಯಾವ ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಇಚ್ಛಿಸುತ್ತೇನೋ ಆ ಕಾರ್ಯಗಳನ್ನು ಮಾಡದೆ ನಾನು ದ್ವೇಷಿಸುವ ಕೆಟ್ಟಕಾರ್ಯಗಳನ್ನೇ ಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾನು ಮಾಡುವುದು ನನಗೇ ಅರ್ಥವಾಗುತ್ತಿಲ್ಲ. ಏನನ್ನು ಮಾಡಲು ಅಪೇಕ್ಷಿಸುತ್ತೇನೋ ಅದನ್ನು ಮಾಡುತ್ತಿಲ್ಲ. ಏನನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹೇಗಂದರೆ ನಾನು ಮಾಡುವದು ನನಗೇ ಗೊತ್ತಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಫೈಸುತ್ತೇನೋ ಅದನ್ನು ನಡಿಸದೆ ನನಗೆ ಅಸಹ್ಯವಾದದ್ದನ್ನು ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನು ಏನು ಮಾಡುತ್ತೇನೆ ಎಂಬುದನ್ನು ತಿಳಿಯದವನಾಗಿದ್ದೇನೆ. ಏಕೆಂದರೆ ನಾನು ಮಾಡಬೇಕೆಂದು ಬಯಸುವುದನ್ನು ಮಾಡದೆ, ಯಾವುದನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುವವನಾಗಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಮಿಯಾ ಕಾಯ್ ಕರುಕ್ ಲಾಗ್ಲಾ ಮನುನ್ ಮಾಕಾಚ್ ಕಳಿನಾ; ಕಶ್ಯಾಕ್ ಮಟ್ಲ್ಯಾರ್ ಮಾಕಾ ಕರುಕ್ ಮನ್ ನಸಲ್ಲೆಚ್ ಮಿಯಾ ಕರ್‍ತಾ ಖರೆ ಜೆ ಕಾಯ್ ಮಿಯಾ ಕರ್‍ತಾ, ತೆ ಮಾಕಾ ಬರೆ ದಿಸಿನಾ. ಅಧ್ಯಾಯವನ್ನು ನೋಡಿ |