ರೋಮಾಪುರದವರಿಗೆ 7:18 - ಪರಿಶುದ್ದ ಬೈಬಲ್18 ಹೌದು, ನನ್ನಲ್ಲಿ ಅಂದರೆ ನನ್ನ ಪಾಪಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂಬುದು ನನಗೆ ಗೊತ್ತಿದೆ. ಒಳ್ಳೆಯ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಮನಸ್ಸಿದ್ದರೂ ಅವುಗಳನ್ನು ಕಾರ್ಯಗತಗೊಳಿಸಲು ನನಗೆ ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯತನವೆಂಬುದೇನೂ ನೆಲೆಗೊಂಡಿಲ್ಲ. ಇದು ನನಗೆ ಗೊತ್ತು. ಏಕೆಂದರೆ, ಒಳಿತನ್ನು ಮಾಡಬೇಕೆಂಬ ಮನಸ್ಸು ನನಗಿದ್ದರೂ ಅದನ್ನು ಮಾಡಲು ನನ್ನಿಂದ ಆಗುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೇದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ. ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲ ಎಂದು ಬಲ್ಲೆನು. ಏಕೆಂದರೆ ಒಳ್ಳೆಯದನ್ನು ಮಾಡಬೇಕೆಂಬ ಮನಸ್ಸೇನೋ ನನ್ನಲ್ಲಿ ಇದೆ, ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಬರೆ ಮಾಜ್ಯಾ ಭುತ್ತುರ್ ರ್‍ಹಾಯ್ನಾ ಮನುನ್ ಮಾಕಾ ಗೊತ್ತ್ ಹಾಯ್, ತೆ ಮಾಜ್ಯಾ ಮಾನುಸ್ ಪಾನಾಚ್ಯಾ ಸ್ವಬಾವಾತ್ ಹಾಯ್. ಕಶ್ಯಾಕ್ ಮಟ್ಲ್ಯಾರ್ ಬರೆ ಕರುಚೆ ಮನ್ತಲಿ ಆಶ್ಯಾ ಮಾಜ್ಯಾ ಭುತ್ತುರ್ ರ್‍ಹಾಲ್ಯಾರ್‍ಬಿ, ಮಾಜ್ಯಾನ್ ತೆ ಕರುಕ್ ಹೊಯ್ನಾ ಹೊಲಾ. ಅಧ್ಯಾಯವನ್ನು ನೋಡಿ |