ರೋಮಾಪುರದವರಿಗೆ 7:23 - ಪರಿಶುದ್ದ ಬೈಬಲ್23 ಆದರೆ ನನ್ನ ದೇಹದಲ್ಲಿ ಮತ್ತೊಂದು ನಿಯಮ ಕೆಲಸ ಮಾಡುತ್ತಿರುವುದನ್ನು ನಾನು ಕಾಣುತ್ತೇನೆ. ನನ್ನ ಅಂತರಂಗ ಒಪ್ಪಿಕೊಳ್ಳುವ ನಿಯಮಕ್ಕೆ ವಿರುದ್ಧವಾಗಿ ಆ ನಿಯಮ ಹೋರಾಡುತ್ತದೆ. ನನ್ನ ದೇಹದಲ್ಲಿ ಕೆಲಸ ಮಾಡುತ್ತಿರುವ ಆ ಮತ್ತೊಂದು ನಿಯಮವೇ ಪಾಪದ ನಿಯಮವಾಗಿದೆ. ಆ ನಿಯಮವು ನನ್ನನ್ನು ತನ್ನ ಸೆರೆಯಾಳನ್ನಾಗಿ ಮಾಡುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನನ್ನ ಇಂದ್ರಿಯಗಳಲ್ಲಿಯಾದರೋ ಬೇರೊಂದು ನಿಯಮವನ್ನು ಕಾಣುತ್ತೇನೆ. ಇದು ನನ್ನ ಅಂತರಂಗ ನಿಯಮಕ್ಕೆ ತದ್ವಿರುದ್ಧವಾಗಿ ಕಾದಾಡುತ್ತದೆ; ನನ್ನ ಇಂದ್ರಿಯಗಳಲ್ಲಿ ನೆಲೆಗೊಂಡಿರುವ ಪಾಪನಿಯಮಕ್ಕೆ ನನ್ನನ್ನು ಕೈದಿಯನ್ನಾಗಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ನನ್ನ ಅವಯವಗಳಲ್ಲಿ ಬೇರೊಂದು ನಿಯಮವನ್ನು ಕಾಣುತ್ತಿದ್ದೇನೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಹೋರಾಡುತ್ತಾ ನನ್ನ ಅವಯವಗಳಲ್ಲಿ ಸೇರಿಕೊಂಡಿರುವ ಪಾಪದ ನಿಯಮಕ್ಕೆ ಸೆರೆಯವನನ್ನಾಗಿ ಮಾಡುತ್ತಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಖರೆ ಎಕ್ ದುಸ್ರೊಚ್ ಖಾಯ್ದೊ ಮಾಜ್ಯಾ ಆಂಗಾತ್ ಮಿಯಾ ಬಗ್ತಾ. ತೊ ಖಾಯ್ದೊ ಮಾಜ್ಯಾ ಮನಾಕ್ ಸಮಾ ದಿಸ್ತಲ್ಯಾ ಖಾಯ್ದ್ಯಾ ವಾಂಗ್ಡಾ ಝಗಡ್ತಾ. ತೊ ಖಾಯ್ದ್ಯೊ ಮಾಕಾ ಮಾಜ್ಯಾ ಆಂಗಾತ್ ಅಸಲ್ಲ್ಯಾ ಪಾಪಾಚ್ಯಾ ಖಾಯ್ದ್ಯಾತ್ ಲಪ್ಟುನ್ ಭಾಂದುನ್ ಘಾಲ್ತಾ. ಅಧ್ಯಾಯವನ್ನು ನೋಡಿ |
ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.